22.5 C
Bengaluru
Sunday, January 19, 2020

ಪ್ರವಾಹ ನಿಯಂತ್ರಣಕ್ಕೆ ಜಿಲ್ಲಾಡಳಿತ ಸನ್ನದ್ಧ

Latest News

ಪ್ರಾಚಾರ್ಯರ ಧೋರಣೆ ಖಂಡಿಸಿ ಪ್ರತಿಭಟನೆ

ಬಸವನಬಾಗೇವಾಡಿ: ಕಾಲೇಜಿನಲ್ಲಿ ವಿವೇಕಾನಂದರ ಜಯಂತಿ ಆಚರಣೆಗೆ ನಿರಾಕರಿಸಿದ್ದನ್ನು ಖಂಡಿಸಿ ಎಬಿವಿಪಿ ಕಾರ್ಯಕರ್ತರ ನೇತೃತ್ವದಲ್ಲಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ವಿದ್ಯಾರ್ಥಿಗಳು ಶನಿವಾರ...

ಹೆಲ್ಮೆಟ್ ಕಡ್ಡಾಯವಾಗಿ ಧರಿಸಿ: ಜಿಲ್ಲಾಧಿಕಾರಿ ಪಾಟೀಲ ಅಭಿಮತ

ವಿಜಯಪುರ : ಸರ್ಕಾರಿ ನೌಕರರು ಮತ್ತು ಶಾಲಾ ಕಾಲೇಜುಗಳಿಗೆ ಮಕ್ಕಳನ್ನು ಬಿಡಲು ಬರುವ ಪಾಲಕರು, ಕಾಲೇಜು ವಿದ್ಯಾರ್ಥಿಗಳು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವ ಕುರಿತಂತೆ...

ಪೋಲಿಯೋ ಲಸಿಕಾ ಕಾರ್ಯಕ್ರಮ

ರಾಣೆಬೆನ್ನೂರ: ಪೋಲಿಯೋ ಮುಕ್ತ ಭಾರತವನ್ನಾಗಿ ಮಾಡುವ ಉದ್ದೇಶದಿಂದ ಸಾರ್ವಜನಿಕರು ಆರೋಗ್ಯ ಇಲಾಖೆಯೊಂದಿಗೆ ಕೈ ಜೋಡಿಸಬೇಕು. ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು...

ಇಬ್ಬರು ಮನೆಗಳ್ಳರು ಖಾಕಿ ಬಲೆಗೆ

ಗದಗ: ಮನೆ ಕಳ್ಳತನ ಮಾಡುತ್ತಿದ್ದ ಇಬ್ಬರನ್ನು ಬಂಧಿಸುವಲ್ಲಿ ಗದಗ ಗ್ರಾಮೀಣ ಪೊಲೀಸರು ಯಶಸ್ವಿಯಾಗಿದ್ದಾರೆ. ನಗರದ ಸೆಟ್ಲಮೆಂಟ್ ನಿವಾಸಿಗಳಾದ ಸುರೇಶ...

ಕಾಲನಲ್ಲಿ ಲೀನವಾದ ‘ಪ್ರಳಯ’

ಅಕ್ಕಿಆಲೂರ: ಹೋರಿ ಬೆದರಿಸುವ ಕಾರ್ಯಕ್ರಮದಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದ ಸಮೀಪದ ಮಲಗುಂದ ಗ್ರಾಮದ ಪ್ರಳಯ ಎಂಬ ಹೆಸರಿನ ಹೋರಿ ಶನಿವಾರ ಅನಾರೊಗ್ಯದಿಂದ ಅಸುನಿಗಿದ್ದು,...

ಆಲಮಟ್ಟಿ: ಆಲಮಟ್ಟಿ ಜಲಾಶಯ ಹಿನ್ನೀರು ಹಾಗೂ ಮುನ್ನೀರಿನಿಂದ ಜಿಲ್ಲೆಯಲ್ಲಿ ಯಾವುದೇ ಪ್ರವಾಹ ಪರಿಸ್ಥಿತಿಯಿಲ್ಲ. ಮುಂಜಾಗ್ರತೆಯಾಗಿ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ವಿಜಯಪುರ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಹೇಳಿದರು.

ಆಲಮಟ್ಟಿ ಜಲಾಶಯಕ್ಕೆ ಭಾನುವಾರ ಸಂಜೆ ಭೇಟಿ ನೀಡಿ, ಕೆಬಿಜೆಎನ್‌ಎಲ್ ಅಧಿಕಾರಿಗಳೊಂದಿಗೆ ಚರ್ಚಿಸಿದ ನಂತರ ಅವರು ಮಾತನಾಡಿದರು.

ಸದ್ಯ ಉಂಟಾಗಿರುವ ನೆರೆ ತಾತ್ಕಾಲಿಕವಾಗಿದ್ದು, ಜನವಸತಿ ಪ್ರದೇಶಕ್ಕೆ ಯಾವುದೇ ತೊಂದರೆಯಾಗಿಲ್ಲ. ಜಲಾಶಯ ಮುಂಭಾಗದ ಕೆಲ ಗ್ರಾಮಗಳ ಕೃಷ್ಣಾ ತೀರದ ಜಮೀನುಗಳಲ್ಲಿ ನೀರು ಹೊಕ್ಕಿದೆ. ಪ್ರವಾಹ ನಿಯಂತ್ರಣಕ್ಕೆ ಕಂದಾಯ, ಪೊಲೀಸ್ ಇಲಾಖೆ, ಅಗ್ನಿಶಾಮಕ ದಳ ಹಾಗೂ ಆರೋಗ್ಯ ಇಲಾಖೆ ಸನ್ನದ್ಧವಾಗಿದೆ. ಹಾವು, ಚೇಳು ಮೊದಲಾದ ಪ್ರಾಣಿಗಳ ಹಾವಳಿ ಭೀತಿ ಇದೆ. ಹಾವು ಕಡಿತ ನಿರೋಧಕ ಔಷಧ ಸಂಗ್ರಹ ಸಾಕಷ್ಟು ಪ್ರಮಾಣದಲ್ಲಿರುವಂತೆ ಜಿಲ್ಲಾ ಆರೋಗ್ಯಾಧಿಕಾರಿಗೆ ಸೂಚಿಸಲಾಗಿದೆ ಎಂದರು.

ಮಹಾರಾಷ್ಟ್ರದ ಸಾಂಗಲಿ ಅಧಿಕಾರಿಗಳು ಆಲಮಟ್ಟಿ ಜಲಾಶಯದ ಮಟ್ಟವನ್ನು ಕಡಿಮೆ ಮಾಡುವಂತೆ ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದಾರೆ. ಮುಖ್ಯಮಂತ್ರಿಗಳ ನಿರ್ದೇಶನ ಹಿನ್ನೆಲೆ ಹಾಗೂ ಆಲಮಟ್ಟಿ ಜಲಾಶಯಕ್ಕೆ 2.50 ಲಕ್ಷ ಕ್ಯೂಸೆಕ್‌ನಷ್ಟು ಅಪಾರ ಪ್ರಮಾಣದ ನೀರು ಹರಿದು ಬರುತ್ತಿರುವ ಕಾರಣ ಮುಂಜಾಗ್ರತೆ ಕ್ರಮವಾಗಿ ಕೆಬಿಜೆಎನ್‌ಎಲ್ ಅಧಿಕಾರಿಗಳು ಹೊರಹರಿವನ್ನು 2.86 ಲಕ್ಷ ಕ್ಯೂಸೆಕ್‌ಗೆ ಹೆಚ್ಚಿಸಿದ್ದಾರೆ. 519.60 ಮೀ. ಗರಿಷ್ಠ ಎತ್ತರದ ಜಲಾಶಯದಲ್ಲಿ 518.05 ಮೀ. ವರೆಗೆ ನೀರು ಸಂಗ್ರಹಿಸಲಾಗಿದೆ. ಜಲಾಶಯದ ಗರಿಷ್ಠ ಮಟ್ಟಕ್ಕೆ ಇನ್ನೂ 1.55 ಮೀ. ಬಾಕಿ ಇದೆ. ಹೀಗಿರುವಾಗ ಆಲಮಟ್ಟಿ ಜಲಾಶಯ ಹಿನ್ನೀರಿನಿಂದ ಪ್ರವಾಹ ಉಂಟಾಗುತ್ತಿದೆ ಎಂಬುದು ಸತ್ಯವಲ್ಲ ಎಂದರು.

2005ರಲ್ಲಿ ಒಮ್ಮೆ 4.45 ಲಕ್ಷ ಕ್ಯೂಸೆಕ್ ನೀರು ಒಳಹರಿವಿದ್ದು, ಅಷ್ಟೇ ಪ್ರಮಾಣದ ನೀರನ್ನು ಜಲಾಶಯದಿಂದ ಹೊರಕ್ಕೆ ಬಿಡಲಾಗಿದೆ. ಆಗಲೂ ಯಾವುದೇ ಪ್ರವಾಹದ ಸ್ಥಿತಿ ಉಂಟಾಗಿಲ್ಲ ಎಂದರು.

ಸಮನ್ವಯತೆ: ಪ್ರವಾಹ ನಿಯಂತ್ರಣಕ್ಕಾಗಿ ಪಕ್ಕದ ಸೊಲ್ಲಾಪುರ, ಸಾಂಗಲಿ, ಬೆಳಗಾವಿ, ವಿಜಯಪುರ, ಬಾಗಲಕೋಟೆ, ರಾಯಚೂರು, ಯಾದಗಿರಿ ಜಿಲ್ಲೆಗಳ ಅಧಿಕಾರಿಗಳ ಜತೆ ಸಮನ್ವಯತೆಯಿಂದ ಕಾರ್ಯನಿರ್ವಹಿಸುತ್ತಿದ್ದು, ಪರಸ್ಪರ ಮಾಹಿತಿ ವಿನಿಮಯ ಮಾಡಿಕೊಳ್ಳುತ್ತಿದ್ದೇವೆ ಎಂದರು.

ಪಕ್ಕದ ಬೆಳಗಾವಿ ಜಿಲ್ಲೆಯಲ್ಲಿ ಎನ್‌ಡಿಆರ್‌ಎ್ ಮತ್ತು ಎಸ್‌ಡಿಆರ್‌ಎ್ ತಂಡಗಳು ಕಾರ್ಯನಿರ್ವಹಿಸುತ್ತಿವೆ. ಆದರೆ, ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿಯಿಲ್ಲ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೂಡ ಪ್ರವಾಹ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲು ನಿರ್ದೇಶನ ನೀಡಿದ್ದಾರೆ. ಅಲ್ಲದೆ, ಪ್ರವಾಹ ಪರಿಸ್ಥಿತಿ ಅವಲೋಕನಕ್ಕಾಗಿ ಆ.5 ರಂದು ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ನಂತರ ವಿಜಯಪುರದಲ್ಲಿ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಲಿದ್ದಾರೆ ಎಂದು ಅವರು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ ನಿಕ್ಕಂ, ಕೆಬಿಜೆಎನ್‌ಎಲ್ ಅಧಿಕಾರಿಗಳಾದ ಬಿ.ಎಸ್. ಪಾಟೀಲ, ವಿ.ಜಿ. ಕುಲಕರ್ಣಿ, ಶರಣಪ್ಪ ಚಲವಾದಿ, ಎಸ್.ಬಿ. ಚಿತ್ತವಾಡಗಿ, ಉಪವಿಭಾಗಾಧಿಕಾರಿ ಸೋಮಲಿಂಗ ಗೆಣ್ಣೂರ ಸೇರಿ ಇತರರು ಇದ್ದರು.

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...