ಆಲಮಟ್ಟಿ ಎಡದಂಡೆ ಕಾಲುವೆಯಲ್ಲಿ ಪತ್ತೆಯಾದ ಮೊಸಳೆ ಸೆರೆ

ವಿಜಯಪುರ: ಆಲಮಟ್ಟಿ ಎಡದಂಡೆ ಕಾಲುವೆಯಲ್ಲಿ ಪ್ರತ್ಯಕ್ಷವಾಗಿ ಜನರಲ್ಲಿ ಆತಂಕ ಸೃಷ್ಟಿಸಿದ್ದ ಬೃಹತ್ ಮೊಸಳೆಯನ್ನು ಅರಣ್ಯಾಧಿಕಾರಿಗಳು ಹಿಡಿದು ಆಲಮಟ್ಟಿ ಜಲಾಶಯಕ್ಕೆ ಬಿಟ್ಟಿದ್ದಾರೆ.

ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲೂಕಿನ ಆಲಮಟ್ಟಿಯಲ್ಲಿ ಬೇನಾಳ ಗ್ರಾಮದ ಸೇತುವೆ ಬಳಿಯ ಕಾಲುವೆಯಲ್ಲಿ ಮೊಸಳೆ ಪತ್ತೆಯಾಗಿತ್ತು. ತಕ್ಷಣ ಸ್ಥಳೀಯರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ವಿಷಯ ತಿಳಿಸಿದ್ದರು.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಅಧಿಕಾರಿಗಳು ರಕ್ಷಣಾ ಕಾರ್ಯ ನಡೆಸಿ ಮೊಸಳೆ ಹಿಡಿದಿದ್ದಾರೆ. ಸ್ಥಳೀಯರು ಹಾಗೂ ಮೀನುಗಾರರ ಸಹಾಯದಿಂದ ರಕ್ಷಣಾ ಕಾರ್ಯ ಯಶಸ್ವಿಯಾಗಿದೆ.

ಸೆರೆ ಹಿಡಿದ ಮೊಸಳೆಯನ್ನು ಆಲಮಟ್ಟಿ ಜಲಾಶಯದಲ್ಲಿ ಬಿಡಲಾಗಿದೆ. ಮತ್ತೊಂದೆಡೆ ಕಾಲುವೆಯಲ್ಲಿ ನೀರು ಇಲ್ಲದಿದ್ದರೂ ಮೊಸಳೆ ಹೇಗೆ ಬಂತು ಎಂದು ಜನರಲ್ಲಿ ಆತಂಕ ಮೂಡಿದೆ. (ದಿಗ್ವಿಜಯ ನ್ಯೂಸ್​)