More

    ಅಲಮೇಂಗಡ, ಕಂಬೀರಂಡಗೆ ಗೆಲುವು

    ಗೋಣಿಕೊಪ್ಪ: ಅರಮಣಮಾಡ ಒಕ್ಕ ಮತ್ತು ಕೊಡವ ಕ್ರಿಕೆಟ್ ಅಕಾಡೆಮಿ ಸಹಯೋಗದಲ್ಲಿ ಬಾಳೆಲೆಯ ವಿಜಯಲಕ್ಷ್ಮೀ ಮತ್ತು ಸರ್ಕಾರಿ ಶಾಲಾ ಮೈದಾನದಲ್ಲಿ ಆಯೋಜಿಸಿರುವ ಅರಮಣಮಾಡ ಕ್ರಿಕೆಟ್ ನಮ್ಮೆಯಲ್ಲಿ 16ನೇ ದಿನದ ಪಂದ್ಯಾಟದಲ್ಲಿ 12 ತಂಡಗಳು ಗೆಲುವಿನ ನಗೆ ಬೀರಿದವು.

    ಮೈದಾನ ಒಂದರಲ್ಲಿ ಅಲಮೇಂಗಡ ಮತ್ತು ಮಾಣೀರ ತಂಡಗಳ ನಡುವೆ ನಡೆದ ಪಂದ್ಯದಲ್ಲಿ ಅಲಮೇಂಗಡ ತಂಡ 8 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 119 ರನ್ ಗಳಿಸಿತು. ಮಾಣೀರ ತಂಡ 8 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 28 ರನ್ ಗಳಿಸಿ 91 ರನ್‌ಗಳ ಸೋಲು ಕಂಡಿತು. ಕಂಬೀರಂಡ ಮತ್ತು ಚೇನಂಡ ತಂಡಗಳ ನಡುವೆ ನಡೆದ ಪಂದ್ಯಾಟದಲ್ಲಿ ಕಂಬೀರಂಡ ತಂಡ 8 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 87 ರನ್ ಗಳಿಸಿತು. ಚೇನಂಡ ತಂಡ 8 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 69 ರನ್ ಗಳಿಸಿ 18 ರನ್‌ಗಳ ಸೋಲು ಕಂಡಿತು. ನಂದೀರ ಮತ್ತು ನಾಯಕಂಡ ತಂಡಗಳ ನಡುವೆ ನಡೆದ ಪಂದ್ಯಾಟದಲ್ಲಿ ನಂದೀರ ತಂಡ 8 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 109 ರನ್ ಗಳಿಸಿತು. ನಾಯಕಂಡ ತಂಡ 7.2 ಓವರ್‌ಗಳಲ್ಲಿ ಎಲ್ಲ ವಿಕೆಟ್ ಕಳೆದುಕೊಂಡು 46 ರನ್ ಗಳಿಸಿ 63 ರನ್‌ಗಳ ಸೋಲು ಕಂಡಿತು. ಅಚ್ಚಪಂಡ ಮತ್ತು ಕಡೇಮಾಡ ತಂಡಗಳ ನಡುವೆ ನಡೆದ ಪಂದ್ಯಾಟದಲ್ಲಿ ಅಚ್ಚಪಂಡ ತಂಡ 8 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 98 ರನ್ ಗಳಿಸಿತು. ಕಡೇಮಾಡ ತಂಡ 8 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 47 ರನ್ ಗಳಿಸಿ 51 ರನ್‌ಗಳ ಸೋಲು ಕಂಡಿತು. ಕಾಡ್ಯಮಾಡ ಮತ್ತು ಮಾಚೆಟ್ಟಿರ ತಂಡಗಳ ನಡುವೆ ನಡೆದ ಪಂದ್ಯಾಟದಲ್ಲಿ ಮಾಚೆಟ್ಟಿರ ತಂಡ 8 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 56 ರನ್ ಗಳಿಸಿತು. ಕಾಡ್ಯಮಾಡ ತಂಡ 3 ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೆ ಗೆಲುವು ದಾಖಲಿಸಿತು. ಮುಕ್ಕಾಟಿರ ಮತ್ತು ಮಣವಟ್ಟಿರ ತಂಡಗಳ ನಡುವೆ ನಡೆದ ಪಂದ್ಯಾಟದಲ್ಲಿ ಮುಕ್ಕಾಟಿರ ತಂಡ 8 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 76 ರನ್ ಗಳಿಸಿತು. ಮಣವಟ್ಟಿರ ತಂಡ 7.1 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ ಗುರಿ ತಲುಪಿತು.

    ಮೈದಾನ ಎರಡರಲ್ಲಿ ಬಾಳೆಯಡ ಮತ್ತು ಕಾಳಿಮಾಡ ತಂಡಗಳ ನಡುವೆ ನಡೆದ ಪಂದ್ಯಾಟದಲ್ಲಿ ಬಾಳೆಯಡ ತಂಡ 8 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 72 ರನ್ ಗಳಿಸಿತು. ಕಾಳಿಮಾಡ ತಂಡ 6.4 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ ಗುರಿ ತಲುಪಿತು. ಮಲ್ಲಾಜಿರ ಮತ್ತು ಓಡಿಯಂಡ ತಂಡಗಳ ನಡುವೆ ನಡೆದ ಪಂದ್ಯದಲ್ಲಿ ಓಡಿಯಂಡ ತಂಡ 8 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 95 ರನ್ ಗಳಿಸಿತು. ಮಲ್ಲಾಜಿರ ತಂಡ 8 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 73 ರನ್ ಗಳಿಸಿ 21 ರನ್‌ಗಳ ಸೋಲು ಕಂಡಿತು. ಐಚಂಡ ಮತ್ತು ಕಳಕಂಡ ತಂಡಗಳ ನಡುವೆ ನಡೆದ ಪಂದ್ಯದಲ್ಲಿ ಐಚಂಡ ತಂಡ 8 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ 87 ರನ್ ಗಳಿಸಿತು. ಕಳಕಂಡ ತಂಡ 4.2 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ ಗುರಿ ತಲುಪಿತು. ಬಡಲೇರ ಮತ್ತು ಅಟ್ರಂಗಡ ತಂಡಗಳ ನಡುವೆ ನಡೆದ ಪಂದ್ಯದಲ್ಲಿ ಬಡಲೇರ ತಂಡ 8 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 52 ರನ್ ಗಳಿಸಿತು. ಅಟ್ರಂಗಡ ತಂಡ 3.2 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ ಗುರಿ ತಲುಪಿತು. ಚಿಂಡಮಾಡ ಮತ್ತು ಚಿರಿಯಪಂಡ ತಂಡಗಳ ನಡುವೆ ನಡೆದ ಪಂದ್ಯದಲ್ಲಿ ಚಿಂಡಮಾಡ ತಂಡ 8 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 104 ರನ್ ಗಳಿಸಿತು. ಚಿರಿಯಪಂಡ ತಂಡ 7.5 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ ಗುರಿ ತಲುಪಿತು. ಉಳುವಂಗಡ ಮತ್ತು ಅರಮಣಮಾಡ ತಂಡಗಳ ನಡುವೆ ನಡೆದ ಪಂದ್ಯದಲ್ಲಿ ಅರಮಣಮಾಡ ತಂಡ 8 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 66 ರನ್ ಗಳಿಸಿತು. ಉಳುವಂಗಡ ತಂಡ 7 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ ಗುರಿ ತಲುಪಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts