More

    ಮಕ್ಕಳ ಶೈಕ್ಷಣಿಕ ಪ್ರಗತಿ ಎಲ್ಲರ ಹೊಣೆ: ಅಳವಂಡಿ ಗ್ರಾಪಂ ಪಿಡಿಒ ಬಸವರಾಜ ಕೀರ್ದಿ ಅಭಿಮತ

    ಅಳವಂಡಿ: ಮಕ್ಕಳ ಶೈಕ್ಷಣಿಕ ಪ್ರಗತಿಗೆ ಅಗತ್ಯ ಸೌಕರ್ಯ ಕಲ್ಪಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಪಿಡಿಒ ಬಸವರಾಜ ಕೀರ್ದಿ ತಿಳಿಸಿದರು. ಗ್ರಾಮದ ಶ್ರೀಸಿದ್ಧೇಶ್ವರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಜಿಪಂ, ತಾಪಂ, ಅಳವಂಡಿ ಗ್ರಾಪಂ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೋಮವಾರ ಹಮ್ಮಿಕೊಂಡಿದ್ದ ಮಕ್ಕಳ ಹಕ್ಕುಗಳ ಗ್ರಾಮಸಭೆ ಉದ್ಘಾಟಿಸಿ ಮಾತನಾಡಿದರು.

    ಲೆಯಲ್ಲಿರುವ ಮೂಲ ಸೌಕರ್ಯಗಳ ಕೊರತೆ ಬಗ್ಗೆ ಮಕ್ಕಳು ತಿಳಿಸಿದರೆ ಬಗೆಹರಿಸಲಾಗುವುದು. ಅಲ್ಲದೆ ಸಮಸ್ಯೆಗಳ ಪಟ್ಟಿ ಮಾಡಿ ಕ್ರಿಯಾಯೋಜನೆ ತಯಾರಿಸಲಾಗುವುದು ಎಂದರು.

    ಸಿಆರ್‌ಪಿ ವಿಜಯಕುಮಾರ ಟಿಕಾರೆ ಮಾತನಾಡಿ, ಮಕ್ಕಳ ಶೈಕ್ಷಣಿಕ ಹಿತದೃಷ್ಟಯಿಂದ ಸರ್ಕಾರ ಕಡ್ಡಾಯ ಶಿಕ್ಷಣ ಸೇರಿ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ. ಶಿಕ್ಷಣ ಪಡೆಯುವುದು ಮಕ್ಕಳ ಸಂವಿಧಾನಬದ್ಧ ಹಕ್ಕು. ಗುಣಮಟ್ಟದ ಶಿಕ್ಷಣ ನೀಡಿ ವಿದ್ಯಾವಂತರನ್ನಾಗಿ ಮಾಡಬೇಕು ಎಂದು ತಿಳಿಸಿದರು. ಗ್ರಾಪಂ ಅಧ್ಯಕ್ಷೆ ಭಾರತಿ ಬೆಣಕಲ್, ಉಪಾಧ್ಯಕ್ಷೆ ಶಂಕ್ರಮ್ಮ ಜೋಗಿನ, ಪ್ರಮುಖರಾದ ಗುರುಬಸವರಾಜ ಹಳ್ಳಿಕೇರಿ, ಮಲ್ಲಪ್ಪ ಬೆಣಕಲ್, ರೇಣುಕಪ್ಪ ಹಳ್ಳಿಕೇರಿ, ಮಂಜುನಾಥ ಬೆದವಟ್ಟಿ, ತೋಟಯ್ಯ ಅರಳೆಲೆಮಠ, ಮೀನಾಕ್ಷಿ, ಹನುಮಂತ ಮೂಲಿಮನಿ, ಹನುಮಂತ ಮೋರನಾಳ, ಪ್ರಾಚಾರ್ಯ ಚಂದ್ರಶೇಖರ ದೊಡ್ಡಮನಿ, ಕೆಎಚ್‌ಪಿಟಿಯ ಶಿವಲೀಲಾ ಹಿರೇಮಠ, ಅಂಗನವಾಡಿ ಮೇಲ್ವಿಚಾರಕಿ ರಾಜೇಶ್ವರಿ, ಸುರೇಂದ್ರಗೌಡ, ಪ್ರಕಾಶ ಇಳಿಗೇರಾ, ಶಿವಮೂರ್ತಿ, ದೇವೇಂದ್ರರಡ್ಡಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts