More

    ಶ್ರೀಹೊನ್ನಿನಕೇರಿ ಮಲ್ಲಯ್ಯ ಜಾತ್ರೆ ಅದ್ದೂರಿ

    ಅಳವಂಡಿ: ಸಮೀಪದ ಕವಲೂರು ಗ್ರಾಮದ ಆರಾಧ್ಯ ದೈವ ಶ್ರೀ ಹೊನ್ನಿನಕೇರಿ ಮಲ್ಲಯ್ಯ ಜಾತ್ರೆ ಅಂಗವಾಗಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಬುಧವಾರ ಪಲ್ಲಕ್ಕಿ ಮೆರವಣಿಗೆ ವಿಜೃಂಭಣೆಯಿಂದ ಜರುಗಿತು. ದೇವಸ್ಥಾನವನ್ನು ತಳಿರು ತೋರಣ, ವಿದ್ಯುತ್ ದೀಪ ಹಾಗೂ ಅಲಂಕಾರಿಕ ವಸ್ತುಗಳಿಂದ ಸಿಂಗರಿಸಲಾಗಿತ್ತು.

    ಬೆಳಗ್ಗೆ ಶ್ರೀಸ್ವಾಮಿಗೆ ವಿಶೇಷ ಪೂಜೆ ಹಾಗೂ ಪುಷ್ಪಾಲಂಕಾರ ಸೇವೆ ನಡೆಯಿತು. ನಂತರ ವಿವಿಧ ಹೂಗಳಿಂದ ಅಲಂಕರಿಸಿದ್ದ ಪಲ್ಲಕ್ಕಿಯಲ್ಲಿ ಮಲ್ಲಯ್ಯನ ಉತ್ಸವ ಮೂರ್ತಿ ಇರಿಸಿ ಗ್ರಾಮ ಹೊರವಲಯದ ಚಿಕ್ಕಹಳ್ಳಕ್ಕೆ ತೆರಳಿ ಗಂಗಾ ಪೂಜೆ ನೆರವೇರಿಸಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ಮಹಿಳೆಯರ ಕಳಸ, ಕುಂಭ ಹಾಗೂ ಸಕಲ ವಾದ್ಯ ಮೇಳದೊಂದಿಗೆ ಸಾಗಿ ದೇವಸ್ಥಾನ ತಲುಪಿತು.

    ಭಕ್ತರು ದೇವರಿಗೆ ಕಾಯಿ, ಕರ್ಪೂರ, ನೈವೇದ್ಯ ಸಲ್ಲಿಸಿ ಹರಕೆ ಸಲ್ಲಿಸಿದರು. ನಂತರ ಅನ್ನ ಸಂತರ್ಪಣೆ ಕಾರ್ಯಕ್ರಮ ನಡೆಯಿತು. ಗ್ರಾಮ ಹಾಗೂ ಸುತ್ತಮುತ್ತಲ ಜಿಲ್ಲೆಗಳಿಂದ ಸಹಸ್ರಾರು ಭಕ್ತರು ಆಗಮಿಸಿ ದೇವರ ಕೃಪೆಗೆ ಪಾತ್ರರಾದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts