
ಶಿಗ್ಗಾಂವಿ: ಮದ್ಯ ಸೇವನೆ ಚಟಕ್ಕೆ ಅಂಟಿಕೊಂಡ ವ್ಯಕ್ತಿಯೊಬ್ಬ ಮದ್ಯ ಸೇವಿಸಲು ಮಾಡಿದ ಸಾಲ ತೀರಿಸಲಾಗದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಟನೆ ತಾಲೂಕಿನ ಗೊಟಗೋಡಿ ಗ್ರಾಮದಲ್ಲಿ ನಡೆದಿದೆ.
ಸುರೇಶ ಹನುಮಂತಪ್ಪ ಹಕಾರಿ (36) ಮೃತ ವ್ಯಕ್ತಿ.
ಈತ ವಿಪರೀತ ಮದ್ಯ ಸೇವನೆ ಮಾಡುತ್ತಿದ್ದ. ಅದಕ್ಕಾಗಿ ಸಾಲ ಕೂಡ ಮಾಡಿಕೊಂಡಿದ್ದ. ಆದರೆ, ಸಾಲ ತೀರಿಸಲಾಗದೆ ಮನೆಯಲ್ಲಿಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಕುರಿತು ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.