ರಾಣೆಬೆನ್ನೂರ: ಮದ್ಯ ಸೇವಿಸಿದ ಅಮಲಿನಲ್ಲಿ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ನಾಗೇನಹಳ್ಳಿಯಲ್ಲಿ ಸೋಮವಾರ ನಡೆದಿದೆ.
ಹನುಮಂತಪ್ಪ ಆನಂದಪ್ಪ ಬಿಳಸನೂರ (27) ಮೃತ ವ್ಯಕ್ತಿ.
ಈತ ವಿಪರೀತ ಮದ್ಯ ಸೇವಿಸುತ್ತಿದ್ದ. ಮದ್ಯ ಸೇವಿಸಿದ ಅಮಲಿನಲ್ಲಿ ಮನೆಯಲ್ಲಿಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಕುರಿತು ಕುಮಾರಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
