ಹಾವೇರಿ: ಮದ್ಯ ಸೇವಿಸಿದ ಅಮಲಿನಲ್ಲಿ ವಿಷ ಸೇವಿಸಿ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ತಾಲೂಕಿನ ಕಬ್ಬೂರ ಗ್ರಾಮದಲ್ಲಿ ಗುರುವಾರ ನಡೆದಿದೆ.
ಹನುಮಂತಪ್ಪ ಗುತ್ತೇಪ್ಪ ದೊಡ್ಡಮನಿ (38) ಮೃತ ವ್ಯಕ್ತಿ.
ಈತ ವಿಪರೀತ ಮದ್ಯ ಸೇವನೆ ಮಾಡುತ್ತಿದ್ದ. ಮದ್ಯ ಸೇವಿಸಿದ ಅಮಲಿನಲ್ಲಿ ವಿಷ ಸೇವಿಸಿ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
