More

    ಸಾವು, ನೋವು ಸಂಭವಿಸದಂತೆ ಎಚ್ಚರ

    ಉಡುಪಿ: ಜಿಲ್ಲೆಯಲ್ಲಿ ಮಳೆ ಹಾನಿ ಹಾಗೂ ಪ್ರಕೃತಿ ವಿಕೋಪದಿಂದ ಸಾರ್ವಜನಿಕರಿಗೆ ತೊಂದರೆಯಾಗಂತೆ, ಸಾವು, ನೋವು ಸಂಭವಿಸದಂತೆ ನೋಡಿಕೊಳ್ಳಿರಿ ಎಂದು ಕಂದಾಯ ಇಲಾಖೆ ಸಚಿವ ಆರ್.ಅಶೋಕ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
    ಶುಕ್ರವಾರ ಜಿಲ್ಲೆಯ ಮಳೆ ಹಾನಿ ಹಾಗೂ ಪ್ರಾಕೃತಿಕ ವಿಕೋಪದ ಕುರಿತ ಸಮಾಲೋಚನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿಕೋಪ ತಡೆಗೆ ಅಗತ್ಯವಿದ್ದಲ್ಲಿ ಮಂಗಳೂರಿನಲ್ಲಿರುವ ಎನ್‌ಡಿಅರ್‌ಎಫ್ ತಂಡದ ನೆರವು ಪಡೆಯಲು ತಿಳಿಸಿದರು.
    ಜಿಲ್ಲಾಧಿಕಾರಿ ಜಿ.ಜಗದೀಶ್ ಮಾತನಾಡಿ, ಹೊಸ ಎಸ್‌ಡಿಅರ್‌ಎಫ್ ತಂಡವನ್ನು ಜಿಲ್ಲೆಯಲ್ಲಿ ಕೇಂದ್ರೀಕೃತಗೊಳಿಸಿದರೆ ತುರ್ತು ಸಂದರ್ಭದಲ್ಲಿ ಕರಾವಳಿಯ ಎಲ್ಲ ಜಿಲ್ಲೆಗಳಿಗೆ ಇಲ್ಲಿಂದಲೇ ಕಾರ್ಯನಿರ್ವಹಿಸಲು ಅನುಕೂಲ ಎಂದರು.
    ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಕೆ.ರಘುಪತಿ ಭಟ್, ಸುನೀಲ್‌ಕುಮಾರ್, ಹಾಲಾಡಿ ಶ್ರೀನಿವಾಸ ಶೆಟ್ಟಿ ಮೊದಲಾದವರಿದ್ದರು.

    ತಾಲೂಕು, ಗ್ರಾಮಮಟ್ಟದಲ್ಲಿ ಕಾರ್ಯಪಡೆ: ಪ್ರಾಕೃತಿಕ ವಿಕೋಪ ತಡೆಗೆ ಜಿಲ್ಲಾ, ತಾಲೂಕು ಮತ್ತು ಗ್ರಾಮಮಟ್ಟದಲ್ಲಿ ಕಾರ್ಯಪಡೆ ರಚಿಸಿ, ನೋಡಲ್ ಅಧಿಕಾರಿಗಳನ್ನು ನೇಮಿಸಿ, ಕಾರ್ಯಪಡೆಗಳಲ್ಲಿ ಸ್ಥಳೀಯ ಜನಪ್ರತಿನಿಧಿಗಳನ್ನು ಸೇರ್ಪಡೆ ಮಾಡಿಕೊಳ್ಳಿ ಎಂದು ಸಚಿವ ಅಶೋಕ್ ಸೂಚಿಸಿದರು. ಪ್ರತಿ 15 ದಿನಕ್ಕೊಮ್ಮ ಸಭೆ ನಡೆಸಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಬೇಕು ಎಂದರು.

    ಕಾರ್ಕಳದಲ್ಲಿ ವಿಪತ್ತು ನಿರ್ವಹಣಾ ಕೇಂದ್ರ: ಕಾರ್ಕಳದಲ್ಲಿ 10 ಕೋಟಿ ರೂ.ವೆಚ್ಚದಲ್ಲಿ ವಿಪತ್ತು ನಿರ್ವಹಣಾ ಕೇಂದ್ರಕ್ಕಾಗಿ ಸುಸಜ್ಜಿತ ಭವನ ಸ್ಥಾಪಿಸಲಾಗುವುದು ಎಂದು ಸಚಿವ ಆರ್.ಅಶೋಕ್ ಹೇಳಿದರು. ಕಾರ್ಕಳ ಶಾಸಕರ ಮನವಿಯಂತೆ ವಿಪತ್ತು ನಿರ್ವಹಣಾ ಕೇಂದ್ರ ಮಂಜೂರು ಮಾಡಲಾಗಿದೆ. ಮುಂದಿನ 15 ದಿನಗಳಲ್ಲಿ ಪ್ರಸ್ತಾವನೆ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಲು ಜಿಲ್ಲಾಧಿಕಾರಿಗೆ ಸೂಚನೆ ನೀಡಲಾಗಿದ್ದು, ತಕ್ಷಣ ಅನುಮೋದನೆ ನೀಡಲಾಗುವುದು ಎಂದರು.

    ಇಂದು ದ.ಕ.ಜಿಲ್ಲೆ ಪ್ರವಾಸ: ಸಚಿವ ಆರ್.ಅಶೋಕ್ ಆ.8ರಂದು ಉಡುಪಿಯಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸುವರು. ಬೆಳಗ್ಗೆ 11 ಗಂಟೆಗೆ ದ.ಕ ಜಿಪಂ ಸಭಾ ಂಗಣದಲ್ಲಿ ಮಳೆ ಹಾನಿ ಪರಿಹಾರ ಪರಿಶೀಲನಾ ಸಭೆಯಲ್ಲಿ ಭಾಗವಹಿಸುವರು. ಮಧ್ಯಾಹ್ನ 12.45ಕ್ಕೆ ಬೆಂಗಳೂರಿಗೆ ತೆರಳುವರು.

    ಪ್ರಾಕೃತಿಕ ವಿಪತ್ತು ನಿರ್ವಹಣೆಗೆ ಮುಂಚೂಣಿಯಲ್ಲಿ ಕೆಲಸ ಮಾಡುವ ಅಗ್ನಿಶಾಮಕ ಇಲಾಖೆಗೆ ಪ್ರತ್ಯೇಕ 20 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಈ ಅನುದಾನ ಇಲಾಖೆ ಅಗತ್ಯ ಪರಿಕರಿಗಳ ನಿರ್ವಹಣೆ ಮತ್ತು ಖರೀದಿಗೆ ಸಹಕಾರಿ. ಪೊಲೀಸ್, ಅಗ್ನಿಶಾಮಕ ದಳ, ಕಂದಾಯ ಇಲಾಖೆ ಜಂಟಿಯಾಗಿ ಜನರ ಸೇವೆ ಮಾಡಲಿದೆ.
    ಆರ್.ಅಶೋಕ್ ಕಂದಾಯ ಸಚಿವ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts