21 C
Bengaluru
Wednesday, January 22, 2020

ಅರವಿಂದ ಕೇಜ್ರಿವಾಲ್‌ರತ್ತ ಚಾಟಿ ಬೀಸಿ ಟ್ವಿಟರ್‌ನಲ್ಲೇ ರಾಜೀನಾಮೆ ರವಾನಿಸಿದ ಆಪ್‌ ಶಾಸಕಿ

Latest News

ಮೊಕದ್ದಮೆ ಹಿಂಪಡೆಯಲು ಒತ್ತಾಯ

ಮೈಸೂರು: ಮಾನಸಗಂಗೋತ್ರಿಯಲ್ಲಿ ಎನ್‌ಆರ್‌ಸಿ, ಸಿಎಎ ವಿರೋಧಿಸಿ ನಡೆದ ಪ್ರತಿಭಟನೆ ಸಂದರ್ಭ ‘ಫ್ರೀ ಕಾಶ್ಮೀರ’ ಫಲಕ ಪ್ರದರ್ಶನಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಮೇಲೆ ಹೂಡಿರುವ ಮೊಕದ್ದಮೆ...

ವಿದ್ಯಾಭ್ಯಾಸದ ಸಂದರ್ಭ ಪ್ರತಿಭಟನೆ ಬೇಡ

ಮೈಸೂರು: ಶಿಕ್ಷಣಕ್ಕೆ ಸಂಬಂಧಿಸಿದ ಸಮಸ್ಯೆಗಳಿದ್ದಲ್ಲಿ ವಿಶ್ವವಿದ್ಯಾಲಯಗಳ ಒಳಗೆ ಬಗೆಹರಿಸಿಕೊಳ್ಳಬೇಕೇ ಹೊರತು, ವಿದ್ಯಾಭ್ಯಾಸದ ಸಂದರ್ಭದಲ್ಲಿ ಪ್ರತಿಭಟನೆಗಳಿಗೆ ಮುಂದಾಗಬಾರದು ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್...

ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ಜಾರಿಗೊಳಿಸಿ

ಮೈಸೂರು: ವಿಧಾನಸಭೆ, ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಮೀಸಲಾತಿ ಜಾರಿಗೊಳಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದರು. ಕರ್ನಾಟಕ ಪ್ರದೇಶ ಮಹಿಳಾ...

ಕೇಂದ್ರದ ಬಿಜೆಪಿ ಸರ್ಕಾರ ಬಿದ್ದ ದಿನ ಪೌರತ್ವ ತಿದ್ದುಪಡಿ ಕಾಯ್ದೆಯೂ ರದ್ದಾಗುತ್ತದೆ: ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​ ಗೋಪಿನಾಥನ್​

ಧಾರವಾಡ: ಪೌರತ್ವ ತಿದ್ದುಪಡಿ ಕಾಯ್ದೆ ಇಡೀ ರಾಷ್ಟ್ರಕ್ಕೆ ಸಂಬಂಧಿಸಿದ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳಲ್ಲೂ ಹೋರಾಟ ತೀವ್ರಗೊಂಡಿದೆ ಎಂದು ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​...

ಕಾಲೇಜ್ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ

ಹಾವೇರಿ: ಇಲ್ಲಿನ ಪಿಬಿ ರಸ್ತೆಯಲ್ಲಿರುವ ಜಿಎಚ್ ಕಾಲೇಜ್​ನಲ್ಲಿ ಹೆಜ್ಜೇನು ದಾಳಿಯಿಂದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಬುಧವಾರ ಮಧ್ಯಾಹ್ನ ಸಂಭವಿಸಿದೆ.

ನವದೆಹಲಿ: ಕಳೆದ ಹಲವು ತಿಂಗಳಿನಿಂದ ಆಪ್‌ ಮೇಲೆ ಅಸಮಾಧಾನಗೊಂಡ ದೆಹಲಿ ಚಾಂದಿನಿ ಚೌಕ್ ವಿಧಾನಸಭಾ ಕ್ಷೇತ್ರದ ಶಾಸಕಿ ಅಲ್ಕಾ ಲಂಬಾ ಅವರು ಕೊನೆಗೂ ಆಮ್ ಆದ್ಮಿ ಪಕ್ಷಕ್ಕೆ ಶುಕ್ರವಾರ ರಾಜೀನಾಮೆ ಸಲ್ಲಿಸುವುದಾಗಿ ಘೋಷಿಸಿದ್ದು, ಗುಡ್‌ ಬೈ ಹೇಳಲು ಇದು ಸರಿಯಾದ ಸಮಯವಾಗಿದೆ ಎಂದು ಟ್ವೀಟ್‌ ಮಾಡಿದ್ದಾರೆ.

ಪಕ್ಷದ ಮುಖ್ಯಸ್ಥ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರು ಟ್ವಿಟರ್‌ ಮೂಲಕವೇ ತನ್ನ ರಾಜೀನಾಮೆಯನ್ನು ಅಂಗೀಕರಿಸಬೇಕು. ಆಪ್‌ ಇದೀಗ ಕಾಸ್‌ ಆದ್ಮಿ ಪಾರ್ಟಿಯಾಗಿದೆ ಎಂದು ಗುಡುಗಿದ್ದಾರೆ. ಈ ಮೂಲಕ 6 ವರ್ಷಗಳ ಪ್ರಯಾಣಕ್ಕೆ ಕೊನೆ ಎಳೆದಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅಲ್ಕಾ,”ಎಎಪಿಗೆ ಗುಡ್ ಬೈ ಹೇಳುವ ಮತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವ ಸಮಯ ಬಂದಿದೆ. ಕಳೆದ 6 ವರ್ಷಗಳ ಪ್ರಯಾಣ ನನಗೆ ಉತ್ತಮ ಕಲಿಕೆಯಾಗಿತ್ತು. ಎಲ್ಲರಿಗೂ ಧನ್ಯವಾದಗಳು,” ಎಂದಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ ಅರವಿಂದ ಕೇಜ್ರಿವಾಲ್‌ ಜಿ ನಿಮ್ಮ ವಕ್ತಾರರು ನಿಮ್ಮ ಆಸೆಯಂತೆಯೇ ಟ್ವಿಟರ್‌ನಲ್ಲಿಯೂ ಸಹ ನನ್ನ ರಾಜೀನಾಮೆಯನ್ನು ಪಕ್ಷವು ಸ್ವೀಕರಿಸುತ್ತದೆ ಎಂಬ ಸಂಪೂರ್ಣ ಸೊಕ್ಕಿನಿಂದ ನನ್ನನ್ನು ರಾಜೀನಾಮೆ ಕೇಳಿದರು. ಹಾಗಾಗಿ ಆಮ್‌ ಆದ್ಮಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ನೀಡಿರುವ ನನ್ನ ರಾಜೀನಾಮೆಯನ್ನು ಅಂಗೀಕರಿಸಿ ಎಂದು ಹೇಳಿದ್ದಾರೆ.

ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಗೂ ಮುನ್ನ ಅಲ್ಕಾ ಅವರು ರಾಜೀನಾಮೆ ನೀಡಿದ್ದು, ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಹೇಳಿದ್ದಾರೆ.

ಇದಕ್ಕೂ ಮುನ್ನ ಮಂಗಳವಾರವಷ್ಟೇ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದ್ದ 43 ವರ್ಷದ ಲಂಬಾ, ಮಾತುಕತೆ ನಡೆಸಿದ್ದರು. ನಮ್ಮ ಚರ್ಚೆಗಳು ದೇಶದ ಪ್ರಸ್ತುತ ರಾಜಕೀಯ ಪರಿಸ್ಥಿತಿ ಸೇರಿದಂತೆ ಇನ್ನಿತರ ವಿಷಯಗಳ ಕುರಿತಾಗಿತ್ತು ಎಂದು ಸುದ್ದಿಗಾರರಿಗೆ ತಿಳಿಸಿದ್ದರು.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರೀವಾಲ್ ಹಾಗೂ ಪ್ರಮುಖ ಮುಖಂಡರ ಕಾರ್ಯವೈಖರಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದ ಶಾಸಕಿ ಅಲ್ಕಾ ಲಂಬಾ ಪಕ್ಷ ತೊರೆಯುವ ಮುನ್ಸೂಚನೆ ನೀಡಿದ್ದರು. ಅಲ್ಲದೆ, ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎಂಬ ಊಹಾಪೋಹಗಳು ಹರಿದಾಡುತ್ತಿದ್ದವು. ಈ ಬೆನ್ನಲ್ಲೇ ಶಾಸಕಿ ಆಮ್ ಆದ್ಮಿ ಪಕ್ಷ ತೊರೆಯುವ ಕುರಿತಾಗಿ ಬಹಿರಂಗ ಹೇಳಿಕೆ ನೀಡಿದ್ದಾರೆ.

ಆಲ್ಕಾ ಲಂಬಾ ಈ ಹಿಂದೆ ಕಾಂಗ್ರೆಸ್ ಪಕ್ಷದಲ್ಲೇ ಇದ್ದು ಮಹಿಳಾ ಘಟಕದ ಅಧ್ಯಕ್ಷೆಯಾಗಿ ಕಾರ್ಯನಿರ್ವಹಿದ್ದರು. ಬಳಿಕ ಆಮ್ ಆದ್ಮಿ ಪಕ್ಷ ಸೇರ್ಪಡೆಗೊಂಡಿದ್ದರು. (ಏಜೆನ್ಸೀಸ್)

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...