ಪುರಿ: ಒಡಿಶಾದಲ್ಲಿ ಜಗನ್ನಾಥ ದೇವಾಲಯದ ಎಲ್ಲಾ ನಾಲ್ಕು ದ್ವಾರಗಳನ್ನು ತೆರೆಯಲಾಗಿದೆ. ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಅವರ ಸಮ್ಮುಖದಲ್ಲಿ ಜಗನ್ನಾಥ ದೇವಾಲಯದ ಎಲ್ಲಾ ನಾಲ್ಕು ದ್ವಾರಗಳನ್ನು ತೆರೆಯಲಾಯಿತು. ಈ ಸಮಯದಲ್ಲಿ ಮಾಝಿ ಜಗನ್ನಾಥ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು. ಪುರಿ ಸಂಸದ ಸಂಬಿತ್ ಪಾತ್ರ, ಬಾಲಸೋರ್ ಸಂಸದ ಪ್ರತಾಪ್ ಚಂದ್ರ ಸಾರಂಗಿ ಮತ್ತು ಪಕ್ಷದ ಇತರ ಮುಖಂಡರು ಉಪಸ್ಥಿತರಿದ್ದರು.
ಇದನ್ನು ಓದಿ: ಪ್ರಧಾನಿ ಮೋದಿ ಮತ್ತು ಯುಎಸ್ ಅಧ್ಯಕ್ಷ ಜೋ ಬಿಡನ್ ಭೇಟಿ ಬಗ್ಗೆ ಅಮೆರಿಕ ಹೇಳಿದ್ದೇನು?
ಅಲ್ಲದೆ, ದೇವಸ್ಥಾನಕ್ಕೆ ಸಂಬಂಧಿಸಿದ ಪ್ರಮುಖ ಸಮಸ್ಯೆ ಪರಿಗಣಿಸಿದ ಸರ್ಕಾರ 500 ಕೋಟಿ ರೂಪಾಯಿಗಳ ವಿಶೇಷ ನಿಧಿಯನ್ನು ಘೋಷಿಸಿತು.
ರಾಜ್ಯ ಸರ್ಕಾರವು ಎಲ್ಲ ಸಚಿವರ ಸಮ್ಮುಖದಲ್ಲಿ ಜಗನ್ನಾಥ ಪುರಿಯ ನಾಲ್ಕು ದ್ವಾರಗಳನ್ನು ತೆರೆಯಲು ನಿರ್ಧರಿಸಿದೆ. ಇದರೊಂದಿಗೆ ಎಲ್ಲ ನಾಲ್ಕು ದ್ವಾರಗಳಿಂದಲೂ ಭಕ್ತರು ದೇವಾಲಯವನ್ನು ತಲುಪಲು ಸಾಧ್ಯವಾಗುತ್ತದೆ. ಎಲ್ಲ ದೇವಾಲಯಗಳ ಬಾಗಿಲು ತೆರೆಯುವುದು ಬಿಜೆಪಿಯ ಚುನಾವಣಾ ಪ್ರಣಾಳಿಕೆಯಲ್ಲಿನ ಭರವಸೆಗಳಲ್ಲಿ ಒಂದಾಗಿದೆ ಎಂದು ಮುಖ್ಯಮಂತ್ರಿ ಮಾಝಿ ಹೇಳಿದರು.
ಕೋವಿಡ್-19 ಸಾಂಕ್ರಾಮಿಕ ರೋಗದ ನಂತರ ಹಿಂದಿನ ಬಿಜು ಜನತಾ ದಳ ಸರ್ಕಾರವು ದೇವಾಲಯದ ಎಲ್ಲಾ ನಾಲ್ಕು ದ್ವಾರಗಳನ್ನು ಮುಚ್ಚಿತ್ತು. ಭಕ್ತರು ಒಂದು ಗೇಟ್ ಮೂಲಕ ಮಾತ್ರ ಪ್ರವೇಶಿಸಬಹುದಾಗಿದ್ದು, ಎಲ್ಲಾ ಗೇಟ್ ಗಳನ್ನು ತೆರೆಯಲು ಬೇಡಿಕೆ ಇತ್ತು. (ಏಜೆನ್ಸೀಸ್)
ನೆಲದ ಮೇಲೆ ಮಲಗುವುದರಿಂದ ಏನೆಲ್ಲಾ ಉಪಯೋಗವಿದೆ ಗೊತ್ತಾ? ತಿಳಿದುಕೊಂಡರೆ ನೀವು ಇದನ್ನು ರೂಢಿಸಿಕೊಳ್ಳುವಿರಿ..