More

    ರಾಮ ಮಂದಿರ ನಿರ್ಮಾಣಕ್ಕೆ ಸರ್ಕಾರದ ಅನುದಾನ ಪಡೆಯುವುದಿಲ್ಲ: ರಾಮ ಮಂದಿರ ಟ್ರಸ್ಟ್ ಅಧ್ಯಕ್ಷ ಮಹಾಂತ ನೃತ್ಯ ಗೋಪಾಲ್ ದಾಸ್ ಮಹಾರಾಜ್

    ಗ್ವಾಲಿಯರ್​: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದಲ್ಲಿ ಪಾಲ್ಗೊಳ್ಳುವಂತೆ ರಾಷ್ಟ್ರಪತಿಗಳಿಂದ ಹಿಡಿದು ರಾಜ್ಯಪಾಲರ ತನಕ, ಪ್ರಧಾನಿಯವರಿಂದ ಹಿಡಿದು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ತನಕ ಎಲ್ಲರಲ್ಲೂ ಮನವಿ ಮಾಡಲಾಗುವುದು. ಆದರೆ, ಸರ್ಕಾರದ ಅನುದಾನವನ್ನು ಮಾತ್ರ ಮಂದಿರ ನಿರ್ಮಾಣಕ್ಕೆ ಪಡೆಯುವುದಿಲ್ಲ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಅಧ್ಯಕ್ಷ ಮಹಾಂತ ನೃತ್ಯ ಗೋಪಾಲದಾಸ್ ಮಹಾರಾಜ್ ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ನಾವು ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಅವರನ್ನು, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರನ್ನು ಆಹ್ವಾನಿಸಿದ್ದೇವೆ. ಈ ಧಾರ್ಮಿಕ ಕಾರ್ಯದಲ್ಲಿ ಯಾವೆಲ್ಲ ಮುಖ್ಯಮಂತ್ರಿಗಳು, ರಾಜ್ಯಪಾಲರಿಗೆ ಆಸಕ್ತಿ ಇದೆಯೋ ಅವರೆಲ್ಲರೂ ಭಾಗಿಯಾಗಬಹುದು. ಮಧ್ಯಪ್ರದೇಶ ಮುಖ್ಯಮಂತ್ರಿಯವರನ್ನೂ ಭಾಗವಹಿಸುವಂತೆ ಆಹ್ವಾನಿಸಿದ್ದೇವೆ ಎಂದು ತಿಳಿಸಿದರು.

    ಸಾರ್ವಜನಿಕರ ದೇಣಿಗೆ ಮೂಲಕ ರಾಮಮಂದಿರವನ್ನು ನಿರ್ಮಾಣ ಮಾಡಲಾಗುತ್ತದೆ. ಸರ್ಕಾರದಿಂದ ಯಾವುದೇ ಅನುದಾನವನ್ನು ಪಡೆಯುವುದಿಲ್ಲ. ಸರ್ಕಾರಕ್ಕೆ ಗಮನಿಸುವುದಕ್ಕೆ ಬೇಕಾದಷ್ಟು ಕೆಲಸಗಳಿವೆ. ಈ ಹೊರೆಯನ್ನೂ ಅವರ ಮೇಲೆ ಹೇರುವುದಿಲ್ಲ. ಇನ್ನು ಆರು ತಿಂಗಳ ಒಳಗೆಯೇ ರಾಮಮಂದಿರ ನಿರ್ಮಾಣದ ಕೆಲಸ ಪ್ರಾರಂಭವಾಗಲಿದೆ ಎಂದು ಮಹಾಂತ ಹೇಳಿದ್ದಾರೆ. (ಏಜೆನ್ಸೀಸ್)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts