More

    ಎಲ್ಲಾ ಜಿಲ್ಲೆಯಲ್ಲೂ ಮೆಡಿಕಲ್ ಕಾಲೇಜು: ಡಾ.ಶರಣಪ್ರಕಾಶ್

    ಬೆಂಗಳೂರು:
    ರಾಜ್ಯದಲ್ಲಿ 22 ಸರ್ಕಾರಿ ಮೆಡಿಕಲ್ ಕಾಲೇಜುಗಳಿದ್ದು, ಇನ್ನುಳಿದ ಜಿಲ್ಲೆಯಲ್ಲಿ ಹಂತ ಹಂತವಾಗಿ ಕಾಲೇಜು ತೆರೆಯಲು ಆದ್ಯತೆ ನೀಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಹೇಳಿದ್ದಾರೆ.
    ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಎಲ್ಲಾ ಜಿಲ್ಲೆಯಲ್ಲಿಯೂ ಮೆಡಿಕಲ್ ಕಾಲೇಜು ಮಾಡಬೇಕು ಎನ್ನುವುದು ಸರ್ಕಾರದ ಉದ್ದೇಶವಾಗಿದೆ. ಸರ್ಕಾರದ ಆರ್ಥಿಕ ಸ್ಥಿತಿ ನೋಡಿಕೊಂಡು ಕ್ರಮ ಕೈಗೊಳ್ಳಲಾಗುವುದು ಎಂದರು.
    ಎಲ್ಲೆಲ್ಲಿ ಮೆಡಿಕಲ್ ಕಾಲೇಜು ಪ್ರಾರಂಭವಾಗಿದೆಯೋ ಅಲ್ಲೆಲ್ಲ ಜಿಲ್ಲಾ ಸರ್ಕಾರಿ ಆಸ್ಪತ್ರೆಗಳು ವೈದ್ಯಕೀಯ ಕಾಲೇಜಿನ ಅಧೀನದಲ್ಲಿವೆ. 9 ಜಿಲ್ಲಾಸ್ಪತ್ರೆಗಳು ಮಾತ್ರ ಪ್ರತ್ಯೇಕವಾಗಿ ಕಾರ್ಯ ನಿರ್ವಹಿಸುತ್ತಿವೆ ಎಂದರು.
    ಮೆಡಿಕಲ್ ಕಾಲೇಜಿನಲ್ಲಿ ಹೆಚ್ಚುವರಿ ಶುಲ್ಕ ಪಡೆಯುತ್ತಿರುವ ಬಗ್ಗೆ ಮಾಹಿತಿ ಇಲ್ಲ. ಈ ಬಗ್ಗೆ ದೂರು ಬಂದರೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.
    ಮೆಡಿಕಲ್ ಕಾಲೇಜಿನಲ್ಲಿ ಖಾಲಿ ಇರುವ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು ಎಂದು ಹೇಳಿದರು.

    ಕೋವಿಡ್ ತಡೆಗೆ ಕ್ರಮ:
    ಕೊವಿಡ್ ರೂಪಾಂತರಿ ಗಂಭೀರ ಪರಿಣಾಮ ಇಲ್ಲ. ಆದರೂ, ಕೋವಿಡ್ ತಡೆಯಲು ಅಗತ್ಯವಾಗಿರುವ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ವೈದ್ಯಕೀಯ ಶಿಕ್ಷಣ ಇಲಾಖೆಗೆ ಒಳಪಡುವ ಆಸ್ಪತ್ರೆಗಳಿಗೆ ಸೂಚನೆ ಕೊಟ್ಟಿದ್ದೇವೆ. ಕೇರಳ, ತಮಿಳುನಾಡು ಗಡಿಯಲ್ಲಿ ಆಲರ್ಟ ಮಾಡಲಾಗಿದೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts