More

    ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಿ

    ನಿಪ್ಪಾಣಿ : ಪ್ರಸಕ್ತ ಗ್ರಾಪಂ ಚುನಾವಣೆಯು ಕಾಂಗ್ರೆಸ್‌ಗೆ ಮಹತ್ವದ್ದಾಗಿದ್ದು, ಎಲ್ಲರೂ ಒಗ್ಗಟ್ಟಾಗಿ ಶ್ರಮಿಸಬೇಕು. ಸಿದ್ದರಾಮಯ್ಯ ಸರ್ಕಾರ ಮಾಡಿದ ಎಲ್ಲ ಸಾಧನೆಗಳನ್ನು ಮನೆಮನೆಗೆ ತಲುಪಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದ್ದಾರೆ.

    ಸ್ಥಳೀಯ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರಿಗಾಗಿ ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಇಲ್ಲಿನ ಮರಾಠಾ ಮಂಡಳ ಸಾಂಸ್ಕೃತಿಕ ಭವನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿಯು ಜಾತಿ-ಧರ್ಮದಲ್ಲಿ ರಾಜಕಾರಣ ಮಾಡುತ್ತ ವೈಷಮ್ಯದ ಬೀಜ ಬಿತ್ತುತ್ತಿದೆ. ಈ ಕುತಂತ್ರ ಹೊಡೆದೋಡಿಸಲು ಗ್ರಾಮ ಪಂಚಾಯಿತಿಗಳಲ್ಲಿ ಕಾಂಗ್ರೆಸ್ ಬೆಂಬಲಿತರ ಗೆಲುವು ಅವಶ್ಯ ಎಂದರು.

    ಮಾಜಿ ಶಾಸಕ ಕಾಕಾಸಾಹೇಬ ಪಾಟೀಲ, ಮಾಜಿ ಸಚಿವ ವೀರಕುಮಾರ ಪಾಟೀಲ, ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಲಕ್ಷ್ಮಣರಾವ ಚಿಂಗಳೆ, ಮಾಜಿ ಶಾಸಕ ಸುಭಾಷ ಜೋಶಿ, ನಗರಸಭೆ ಮಾಜಿ ಅಧ್ಯಕ್ಷ ವಿಲಾಸ್ ಗಾಡಿವಡ್ಡರ,, ಜಿಪಂ ಸದಸ್ಯ ರಾಜೇಂದ್ರ ವಡ್ಡರ ಮಾತನಾಡಿದರು. ಜಿಪ ಸದಸ್ಯ ಜಯವಂತ ಕಾಂಬಳೆ, ಬೇಡಕಿಹಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರದೀಪ ಜಾಧವ, ಪಂಕಜ ಪಾಟೀಲ, ದತ್ತಾ ನಾಯಿಕ, ನಗರಸಭೆ ಸದಸ್ಯರು, ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು. ನಿಪ್ಪಾಣಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜೇಶ ಕದಮ ಸ್ವಾಗತಿಸಿದರು. ಶ್ರೀನಿವಾಸ ಸಂಕಪಾಳ ನಿರೂಪಿಸಿದರು. ದೀಪಕ ಢನಾಲ ವಂದಿಸಿದರು.

    ಯಮಕನಮರಡಿ ವರದಿ: ಸ್ಥಳೀಯ ಮುಖಂಡರ ಪ್ರಾಧಾನ್ಯತೆ ಮೇರೆಗೆ ಗ್ರಾಪಂ ಚುನಾವಣೆಯಲ್ಲಿ ಯಾರನ್ನು ಕಣಕ್ಕಿಳಿಸಬೇಕು ಎಂಬುದನ್ನು ಚರ್ಚಿಸಿ ಅಂತಿಮಗೊಳಿಸಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದ್ದಾರೆ. ಗ್ರಾಮದಲ್ಲಿ ಭಾನುವಾರ ಏರ್ಪಡಿಸಿದ್ದ ಗ್ರಾಪಂ ಚುನಾವಣೆಯ ಪೂರ್ವಭಾವಿ ಕಾಂಗ್ರೆಸ್ ಸಭೆಯಲ್ಲಿ ಮಾತನಾಡಿದ ಅವರು, ಗ್ರಾಪಂ ಚುನಾವಣೆಗೆ ಸಂಬಂಧಪಟ್ಟಂತೆ ಚರ್ಚಿಸಲು ಸೋಮವಾರ ಮತ್ತೆ ಸಭೆ ಕರೆದಿದ್ದು, ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚರ್ಚಿಸಲಾಗುವುದು ಎಂದರು. ಸಾರಿಗೆ ಇಲಾಖೆ ಸಿಬ್ಬಂದಿ ಜತೆಗೆ ಸಾರಿಗೆ ಸಚಿವರು ಹಾಗೂ ಸರ್ಕಾರ ಚರ್ಚಿಸಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು. ಖಾಸಗಿ ವಾಹನಗಳನ್ನು ಓಡಿಸುವುದರಿಂದ ಸಮಸ್ಯೆ ಪರಿಹಾರವಾಗುವುದಿಲ್ಲ ಎಂದರು. ಲೋಕಸಭೆ ಚುನಾವಣೆಗೆ ಅಶೋಕ ಪೂಜಾರಿ ಸ್ಪರ್ಧೆ ಬಗ್ಗೆ ಎದ್ದಿರುವ ಊಹಾಪೋಹಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಪೂಜಾರಿ ಅವರು ಬೇರೆ ಪಕ್ಷದಲ್ಲಿದ್ದಾರೆ. ಕಾಂಗ್ರೆಸ್ ಸಿದ್ಧಾಂತ ಒಪ್ಪಿ ಬಂದರೆ ಸ್ವಾಗತಿಸುವೆವು ಎಂದರು. ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ವೀರಣ್ಣ ಬಿಸಿರೊಟ್ಟಿ, ಬಾಳಾರಾಮ ರಜಪೂತ, ಕಿರಣ ರಜಪೂತ, ಈರಣ್ಣ ದುಗ್ಗಾಣಿ, ಶಿವಶಂಕರ ಝುಟ್ಟಿ, ಷರೀಫ್ ಬೇಪಾರಿ, ಶೌಕತ್ ಖಾಜಿ, ಮೋಹನ ರಜಪೂತ, ದುಂಡಪ್ಪ ಕುಂಬಾರ ಹಾಗೂ ಕಾರ್ಯಕರ್ತರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts