More

    ಆರ್ಟ್ ಆಫ್ ಲಿವಿಂಗ್‌ನಲ್ಲಿ ಫೆ.1ರಿಂದ ಅಖಿಲ ಭಾರತೀಯ ಕಲಾಸಾಧಕ ಸಂಗಮ: ಏನೆಲ್ಲ ವಿಶೇಷತೆ ಇದೆ. ಇಲ್ಲಿದೆ ಮಾಹಿತಿ

    ಬೆಂಗಳೂರು ಭಾರತೀಯ ಕಲಾಸಾಧಕರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ‘ಸಂಸ್ಕಾರ ಭಾರತೀ’ಯು ಫೆ.1ರಿಂದ 4ರ ವರೆಗೆ ‘ಅಖಿಲ ಭಾರತೀಯ ಕಲಾಸಾಧಕ ಸಂಗಮ-2024’ ಅನ್ನು ಆಯೋಜಿಸಲಾಗಿದೆ.

    ಕಾರ್ಯಕ್ರಮವನ್ನು ಸಾಮಾಜಿಕ ಸಮರತೆಯ ವಿಷಯದ ಅಡಿಯಲ್ಲಿ ಆರ್ಟ್ ಆಫ್ ಲಿವಿಂಗ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ಆಯೋಜಿಸಲಾಗಿದೆ ಎಂದು ಸಂಸ್ಕಾರ ಭಾರತೀಯ ಅಖಿಲ ಭಾರತ ಮಹಾಮಂತ್ರಿ ಅಶ್ವಿನ್ ದಳ್ವಿ ತಿಳಿಸಿದರು.

    ಚಾಮರಾಜಪೇಟೆಯಲ್ಲಿರುವ ರಾಷ್ಟ್ರೋತ್ಥಾನ ಪರಿಷತ್ತಿನಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಫೆ..1ರಂದು ನಡೆಯಲಿರುವ ಉದ್ಘಾಟನಾ ಕಾರ್ಯಕ್ರಮಕ್ಕೆ ಮೈಸೂರಿನ ರಾಜಷಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಚಾಲನೆ ನೀಡಲಿದ್ದಾರೆ. ಜಾನಪದ ಅಕಾಡೆಮಿ ಮಾಜಿ ಅಧ್ಯಕ್ಷೆ ಮಂಜಮ್ಮ ಜೋಗತಿ, ಅಂತಾರಾಷ್ಟ್ರೀಯ ಮಟ್ಟದ ಇತಿಹಾಸ ತಜ್ಞ ವಿಕ್ರಂ ಸಂಪತ್, ತಬಲಾ ವಿದ್ವಾಂಸ ಪಂ. ರವೀಂದ್ರ ಯಾದಗಲ್ ಹಾಗೂ ವಿಶೇಷ ಆಹ್ವಾನಿತರಾಗಿ ವಿಜಯನಗರ ಸಾಮ್ರಾಜ್ಯದ ರಾಜ ವಂಶಸ್ಥ ಶ್ರೀ ಕೃಷ್ಣ ದೇವರಾಯ ಅವರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

    ಪ್ರತಿ ದಿನ ಲೋಕನೃತ್ಯ, ವಿಚಾರ ಸಂಕಿರಣ, ಕಲಾ ಪ್ರದರ್ಶಿನಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು
    ನಡೆಯಲಿವೆ. ಫೆ..3ರಂದು ಭರತ ಮುನಿಗಳ ಹೆಸರಿನಲ್ಲಿ 2 ವಿಶೇಷ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ ಎಂದರು.

    ಮೋಹನ್‌ ಭಾಗವತ್ ಭಾಗಿ:

    ಫೆ..4ರಂದು ನಡೆಯುವ ಸಮಾರೋಪ ಸಮಾರಂಭದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಡಾ. ಮೋಹನ್ ಭಾಗವತ್, ರವಿಶಂಕರ್ ಗುರೂಜಿ ಸೇರಿ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

    ಸುದ್ದಿಗೋಷ್ಠಿಯಲ್ಲಿ ಸಂಸ್ಕಾರ ಭಾರತೀ ಪ್ರಾಂತ್ಯಾಧ್ಯಕ್ಷ ಸುಚೇಂದ್ರ ಪ್ರಸಾದ್ ಹಾಗೂ ಪ್ರಾಂತ ಕೋಶಾಧ್ಯಕ್ಷ ಟಿ.ಆರ್. ಜಗದೀಶ್ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts