

ಕಡಬ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಡಬ ತಾಲೂಕು ಯೋಜನಾ ಕಚೇರಿ ಸಭಾಂಗಣದಲ್ಲಿ ಕಡಬ ತಾಲೂಕಿನ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಭೆ ನಡೆಯಿತು.
ಕಡಬ ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಮಹೇಶ್ ಎನ್.ಕೆ.ಸವಣೂರು ಕಾರ್ಯಕ್ರಮ ಉದ್ಘಾಟಿಸಿ, ಕಡಬ ತಾಲೂಕು ಜನಜಾಗೃತಿ ವೇದಿಕೆ ಜನಪರ ಕಾರ್ಯಕ್ರಮಗಳೊಂದಿಗೆ ರಾಜ್ಯ ಮಟ್ಟದಲ್ಲಿ ಹೆಸರು ಗಳಿಸಿದೆ. ಮಹತ್ತರ ಕಾರ್ಯಕ್ರಮಗಳನ್ನು ಸಮುದಾಯಕ್ಕೆ ನೀಡುತ್ತಿರುವ ಶ್ರೀಕ್ಷೇತ್ರ ಧರ್ಮಸ್ಥಳ ಹಾಗೂ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಕುರಿತು ಪುರಾವೆ ರಹಿತ ಸುಳ್ಳು ವದಂತಿ ಹರಡುತ್ತಿರುವವರ ಮೇಲೆ ಕಾನೂನು ಕ್ರಮವಾಗಬೇಕು ಎಂಬುದು ಕಡಬ ತಾಲೂಕು ಜನಜಾಗೃತಿ ವೇದಿಕೆ ಆಗ್ರಹ ಎಂದರು.
ಉಡುಪಿ ಪ್ರಾದೇಶಿಕ ವಿಭಾಗದ ಜನಜಾಗೃತಿ ವೇದಿಕೆ ಯೋಜನಾಧಿಕಾರಿ ಗಣೇಶ್ ಆಚಾರ್ಯ ಮಾತನಾಡಿದರು. ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಶಿವಪ್ರಸಾದ್ ರೈ ಮೈಲೇರಿ, ಕಡಬ ವಲಯ ಜನಜಾಗೃತಿ ವೇದಿಕೆ ಅಧ್ಯಕ್ಷ ಕರುಣಾಕರ ಗೊಖಟೆ, ಗೊಳಿತೊಟ್ಟು ವಲಯ ಜನಜಾಗೃತಿ ವೇದಿಕೆ ಅಧ್ಯಕ್ಷ ನೋಣಯ್ಯ ಪೂಜಾರಿ ಅಂಬರ್ಜೆ, ತಾಲೂಕು ಜನಜಾಗೃತಿ ವೇದಿಕೆ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕಡಬ ತಾಲೂಕು ಯೋಜನಾಧಿಕಾರಿ ಪ್ರಕಾಶ್‌ಕುಮಾರ್ ಸ್ವಾಗತಿಸಿದರು. ಬಿಳಿನೆಲೆ ವಲಯ ಮೇಲ್ವಿಚಾರಕ ರವಿಪ್ರಸಾದ್ ಆಲಾಜೆ ವಂದಿಸಿದರು. ಕಡಬ ವಲಯ ಮೇಲ್ವೀಚಾರಕ ವಿಜೇಶ್ ಜೈನ್ ಕಾರ್ಯಕ್ರಮ ನಿರ್ವಹಿಸಿದರು.
ಆಮಂತ್ರಣ ಪತ್ರಿಕೆ ಬಿಡುಗಡೆ
ಕಡಬ ತಾಲೂಕಿನ ವಿವಿಧ ಪ್ರೌಢಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಆ.18ರಿಂದ ಸೆ.20ರವರೆಗೆ ನಡೆಯಲಿರುವ ಸ್ವಾಸ್ಥೃ ಸಂಕಲ್ಪ ಮಾಸಾಚರಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ಜನಜಾಗೃತಿ ವೇದಿಕೆ ಪದಾಧಿಕಾರಿಗಳನ್ನು ಸನ್ಮಾನಿಸಲಾಯಿತು.