More

    ಲೋಕಸಭೆ ಚುನಾವಣೆಗೆ ಸಕಲ ಸಿದ್ಧತೆ

    ರಾಯಚೂರು: ಲೋಕಸಭೆ ಚುನಾವಣೆಯನ್ನು ಸುವ್ಯವಸ್ಥಿತ ರೀತಿಯಲ್ಲಿ ನಡೆಸಲು ಎಲ್ಲ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು, ರಜಾ ದಿನಗಳನ್ನು ಹೊರತುಪಡಿಸಿ ಏ.19ರವರೆಗೆ ನಾಮಪತ್ರ ಸಲ್ಲಿಕೆ ಮಾಡಬಹುದಾಗಿದೆ ಎಂದು ಜಿಲ್ಲಾಕಾರಿ ಹಾಗೂ ಚುನಾವಣಾಕಾರಿ ಚಂದ್ರಶೇಖರ ನಾಯಕ ತಿಳಿಸಿದರು.
    ಸ್ಥಳೀಯ ಜಿಲ್ಲಾಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿ, ನಾಮಪತ್ರ ಸಲ್ಲಿಸುವಾಗ ಕೇವಲ ಐದು ಜನರಿಗೆ ಮಾತ್ರ ಕೊಠಡಿಯೊಳಗೆ ಬರಲು ಅವಕಾಶವಿದ್ದು, ನಾಮಪತ್ರದ ಅರ್ಜಿ ನಮೂನೆಗಳನ್ನು ಕಚೇರಿಯಲ್ಲಿ ಪಡೆದುಕೊಳ್ಳಬಹುದಾಗಿದೆ ಎಂದರು.
    ಚುನಾವಣೆ ಕಾರ್ಯಕ್ಕೆ ನಿಯೋಜನೆಗೊಂಡ ಅಕಾರಿಗಳು, ಸಿಬ್ಬಂದಿಗಳಿಗೆ ಸೌಕರ್ಯ ಒದಗಿಸಲು ಹಾಗೂ ಬೇಸಿಗೆಯಲ್ಲಿ ಯಾವುದೇ ಸಮಸ್ಯೆಯಾಗದಂತೆ ನೆರಳಿನ ವ್ಯವಸ್ಥೆ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿನ 23 ಚೆಕ್‌ಪೋಸ್ಟ್‌ಗಳಲ್ಲಿನ ಸಿಬ್ಬಂದಿಗಳಿಗೂ ಕುಡಿಯುವ ನೀರು, ್ಯಾನ್ ಸೌಕರ್ಯ ಒದಗಿಸಲಾಗಿದೆ.
    ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಜಿಲ್ಲೆಯಲ್ಲಿ 14 ಜನರನ್ನು ಗಡಿಪಾರು ಮಾಡಲು ಜಿಲ್ಲಾ ಪೊಲೀಸ್ ಇಲಾಖೆಯಿಂದ ಮಾಹಿತಿ ನೀಡಿದ್ದು, ಅದರಲ್ಲಿ 8 ಜನರನ್ನು ಮಾತ್ರ ಗಡಿಪಾರಿಗೆ ಆದೇಶ ಹೊರಡಿಸಲಾಗಿದೆ. ಪರವಾನಗಿ ಹೊಂದಿದ್ದ 464 ಶಸಾಸಗಳನ್ನು ವಶಪಡಿಸಿಕೊಳ್ಳಲಾಗಿದೆ.
    ನೀತಿ ಸಂಹಿತೆ ಜಾರಿಯಾದಾಗಿನಿಂದ ಇದುವರೆಗೂ ದಾಖಲೆಯಿಲ್ಲದೆ ಸಾಗಿಸಲಾಗುತ್ತಿದ್ದ 21.30 ಲಕ್ಷ ರೂ. ನಗದು ಹಾಗೂ 6 ಸಾವಿರ ಲೀಟರ್ ಮದ್ಯ ಜಪ್ತಿ ಮಾಡಿಕೊಳ್ಳಲಾಗಿದೆ. ಜತೆಗೆ ಹೆಚ್ಚಿನ ಭದ್ರತೆ ಒದಗಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಚಂದ್ರಶೇಖರ ನಾಯಕ ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts