More

    ಪಾರದರ್ಶಕ ಮತದಾನಕ್ಕೆ ಸಕಲ ಸಿದ್ಧತೆ

    ರಾಯಚೂರು: ರಾಯಚೂರು ಲೋಕಸಭೆ ಕ್ಷೇತ್ರಕ್ಕೆ ಮೇ 7ರಂದು ನಡೆಯಲಿರುವ ಮತದಾನ ಪ್ರಕ್ರಿಯೆಯನ್ನು ನಿಯಮಾನುಸಾರ ಮತ್ತು ಪಾರದರ್ಶಕವಾಗಿ ನಡೆಸುವ ನಿಟ್ಟಿನಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಕಾರಿ ಹಾಗೂ ಚುನಾವಣಾಕಾರಿ ಚಂದ್ರಶೇಖರ ನಾಯಕ ತಿಳಿಸಿದರು.
    ಸ್ಥಳೀಯ ಜಿಲ್ಲಾಕಾರಿ ಕಚೇರಿಯ ವಿಡಿಯೋ ಸಂವಾದ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಭಾನುವಾರ ಸಂಜೆ ಮಾತನಾಡಿ, ಬೆಳಗ್ಗೆ 7 ರಿಂದ ಸಂಜೆ 6ರವರೆಗೆ ಮತದಾನ ನಡೆಯಲಿದ್ದು, ಚುನಾವಣೆ ಆಯೋಗದ ನಿರ್ದೇಶನದಂತೆ ಮತದಾನ ಪ್ರಮಾಣ ಹೆಚ್ಚಳಕ್ಕೆ ಕ್ರಮ ವಹಿಸಲಾಗಿದೆ ಎಂದರು.
    ಕ್ಷೇತ್ರದ ಒಟ್ಟು ಎಂಟು ವಿಧಾನಸಭೆ ಕ್ಷೇತ್ರಗಳಲ್ಲಿ 9,94,646 ಪುರುಷ, 10,15,158 ಮಹಿಳಾ, 299 ಲಿಂಗತ್ವ ಅಲ್ಪ ಸಂಖ್ಯಾತರು, 334 ಸೇವಾ ಮತದಾರರು ಸೇರಿದಂತೆ ಒಟ್ಟು 20,10,437 ಮತದಾರರು ಮತ ಚಲಾಯಿಸಲಿದ್ದಾರೆ. ಒಟ್ಟು ಎಂಟು ಜನರು ಕಣದಲ್ಲಿದ್ದಾರೆ.
    ಎಲ್ಲ ಹಂತದಲ್ಲಿ ಮತಯಂತ್ರಗಳ ಪರಿಶೀಲನೆ ನಡೆಸಿದ್ದು, ಯಾವುದೇ ರೀತಿಯ ಗೊಂದಲವಾಗದಂತೆ ಕ್ರಮ ವಹಿಸಲಾಗಿದೆ. ರಾಜಕೀಯ ಪಕ್ಷಗಳ ಪ್ರತಿನಿಗಳ ಸಮ್ಮುಖದಲ್ಲಿ ಮತಯಂತ್ರಗಳ ರ‌್ಯಾಂಡಮೈಜೇಶನ್ ಮಾಡಿ ಪ್ರಕ್ರಿಯೆಯನ್ನು ಅವರ ಗಮನಕ್ಕೆ ತರಲಾಗಿದೆ.
    ಮತಗಟ್ಟೆಗಳಲ್ಲಿ ಕುಡಿಯುವ ನೀರು, ಆಸನ, ಅಂಗವಿಕಲರಿಗೆ ರ‌್ಯಾಂಪ್, ವೀಲ್‌ಚೇರ್ ಹಾಗೂ ನೆರಳಿನ ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಯಲ್ಲಿ ಒಟ್ಟು 1,485 ಮತದಾರರನ್ನು ಅಂಚೆ ಮತದಾನಕ್ಕಾಗಿ ಗುರುತಿಸಿದ್ದು, ಅದರಲ್ಲಿ 1,412 ಜನರು ಮತದಾನ ಮಾಡಿದ್ದು, 29 ಜನರು ಮರಣ ಹೊಂದಿದ್ದು, 44 ಜನರು ಗೈರಾಗಿದ್ದಾರೆ.
    ನೀತಿ ಸಂಹಿತೆ ಜಾರಿಯಾದ ನಂತರದಿಂದ ಇಲ್ಲಿಯವರೆಗೆ ದಾಖಲೆಯಿಲ್ಲದೆ ಸಾಗಿಸುತ್ತಿದ್ದ ಒಟ್ಟು 17.57 ಲಕ್ಷ ರೂ.ಗಳನ್ನು, 52.85 ಲಕ್ಷ ರೂ. ವೌಲ್ಯದ ಅಕ್ರಮ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. 96 ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಚಂದ್ರಶೇಖರ ನಾಯಕ ತಿಳಿಸಿದರು.
    ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಬಿ.ನಿಖಿಲ್ ಮಾತನಾಡಿ, ಚುನಾವಣೆಯನ್ನು ಶಾಂತಿಯುತವಾಗಿ ನಡೆಸುವ ನಿಟ್ಟಿನಲ್ಲಿ 3,044 ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದ್ದು, 3 ಜನ ಎಸ್ಪಿ, 7 ಡಿವೈಎಸ್ಪಿ, 28 ಸಿಪಿಐ, 110 ಪಿಎಸ್‌ಐ, 2,500 ಪೊಲೀಸ್ ಪೇದೆಗಳು, 620 ಗೃಹರಕ್ಷಕ ದಳ ಸಿಬ್ಬಂದಿಯನ್ನು, 5 ಕೆಎಸ್‌ಆರ್‌ಪಿ ತುಕಡಿ ನಿಯೋಜನೆ ಮಾಡಲಾಗಿದೆ ಎಂದರು.
    ಈ ಸಂದರ್ಭದಲ್ಲಿ ಜಿ.ಪಂ. ಸಿಇಒ ರಾಹುಲ್ ತುಕಾರಾಮ್ ಪಾಂಡ್ವೆ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts