

ಕುಂದಾಪುರ: ಶಾಲೆ ಎಂದರೆ ಕೇವಲ ಅಕ್ಷರಾಭ್ಯಾಸ ಮಾತ್ರವಲ್ಲ. ಒಂದು ಕುಟುಂಬದ ರೀತಿ ಮಕ್ಕಳ ಸರ್ವಾಂಗೀಣ ವ್ಯಕ್ತಿತ್ವ ವಿಕಾಸ ಮಾಡುವ ಕೆಲಸ ಶಿಕ್ಷಕರು ಮಾಡುತ್ತಾರೆ ಎಂದು ಹಿಂದುಳಿದ ವರ್ಗಗಳ ಆಯೋಗ ಮಾಜಿ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಹೇಳಿದರು.
ಹಟ್ಟಿಯಂಗಡಿ ಸಿದ್ಧಿವಿನಾಯಕ ವಸತಿ ಶಾಲೆಯ ಡಾ.ಎಚ್.ಶಾಂತಾರಾಮ ರಂಗ ಮಂಟಪದಲ್ಲಿ ಮಂಗಳವಾರ ಗಿನ್ನೆಸ್ ವರ್ಲ್ಡ್ ರೆಕಾರ್ಡ್ನ ಪ್ರಮಾಣ ಪತ್ರ ಪ್ರದಾನ ಕಾರ್ಯಕ್ರಮದಲ್ಲಿ ಗೌರವ ಅತಿಥಿಗಳಾಗಿ ಮಾತನಾಡಿದರು.
ಮೂಡುಬಿದಿರೆ ಆಳ್ವಾಸ್ ಕಾಲೇಜಿನ ಡಾ.ಎನ್.ಪಿ.ನಾರಾಯಣ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯ ರಾಜೇಶ್ ಕಾರಂತ್, ಹಟ್ಟಿಯಂಗಡಿ ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಟ್ರಸ್ಟಿ ಹಾಗೂ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ ಹಟ್ಟಿಯಂಗಡಿ ಆಡಳಿತಾಧಿಕಾರಿ ವೀಣಾರಶ್ಮಿ ಎಂ. ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಪ್ರಿಯಾ ಸ್ವಾಗತಿಸಿದರು. ಹಟ್ಟಿಯಂಗಡಿ ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನ ಕಾರ್ಯದರ್ಶಿ ಹಾಗೂ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ ಪ್ರಾಂಶುಪಾಲ ಶರಣಕುಮಾರ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕಿ ಪೂರ್ಣಿಮಾ ಗಿನ್ನೆಸ್ ದಾಖಲೆ ಮಾಡಿದ ವಿದ್ಯಾರ್ಥಿಗಳ ಪಟ್ಟಿ ವಾಚಿಸಿದರು. ವಿದ್ಯಾರ್ಥಿನಿ ದೀಕ್ಷಾ ಕೋರಿ ಕಾರ್ಯಕ್ರಮ ನಿರ್ವಹಿಸಿದರು. ವಿದ್ಯಾರ್ಥಿನಿ ತನಿಷ್ಕಾ ವಂದಿಸಿದರು.