More

    ಶಿಕ್ಷಣದಿಂದ ಸರ್ವಾಂಗೀಣ ಪ್ರಗತಿ

    ತರೀಕೆರೆ: ಶೈಕ್ಷಣಿಕ ಪ್ರಗತಿಯಿಂದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.

    ಸೋಮವಾರ ಪುರಸಭೆ ವ್ಯಾಪ್ತಿಯ ಹಳಿಯೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ವಿವೇಕ ಶಾಲಾ ಕೊಠಡಿ ಉದ್ಘಾಟಿಸಿ ಮಾತನಾಡಿದರು.
    ಸರ್ಕಾರಿ ಶಾಲೆಗಳಲ್ಲಿ ವಿವಿಧ ಸೌಲಭ್ಯ ಕಲ್ಪಿಸಲಾಗುತ್ತಿದೆ. ಕಲಿಕೆಗೆ ಪೂರಕ ವಾತಾವರಣ ನಿರ್ಮಿಸಲಾಗಿದೆ. ಶಿಕ್ಷಕರು ಗುಣಮಟ್ಟದ ಶಿಕ್ಷಣ ನೀಡುವುದು ಮಾತ್ರವಲ್ಲ, ಪಾಲಕರು ಆಸಕ್ತಿಯಿಂದ ಮಕ್ಕಳನ್ನು ಸರ್ಕಾರಿ ಶಾಲೆಗಳಲ್ಲಿ ದಾಖಲಿಸಿದರೆ ಮಾತ್ರ ಬೆಳವಣಿಗೆ ಸುಲಭವಾಗಲಿದೆ ಎಂದರು.
    ಸರ್ಕಾರ ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್) ಆರಂಭಿಸುವ ಮೂಲಕ ಆಂಗ್ಲ ಮಾಧ್ಯಮಕ್ಕೂ ಉತ್ತೇಜನ ನೀಡುತ್ತಿದೆ. ಪೂರ್ವ ಪ್ರಾಥಮಿಕ ಶಿಕ್ಷಣ ಇಲ್ಲಿಂದ ಆರಂಭಿಸಿದರೆ ಅನುಕೂಲವಾಗಲಿದೆ. ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು ಬಡವರ ಕೈ ಹಿಡಿದಿದ್ದು, ಇತರೆ ಅಭಿವೃದ್ಧಿ ಕಾರ್ಯಗಳಿಗೆ ಸಧ್ಯದಲ್ಲೇ ಚಾಲನೆ ಸಿಗಲಿದೆ ಎಂದು ಹೇಳಿದರು.
    ಪುರಸಭೆ ಅಧ್ಯಕ್ಷ ಪರಮೇಶ, ಸದಸ್ಯ ಆರ್.ಕುಮಾರಪ್ಪ, ಮಾಜಿ ಅಧ್ಯಕ್ಷ ಟಿ.ಎಸ್.ಪ್ರಕಾಶ್‌ವರ್ಮ, ಬಿಇಒ ಬಿ.ಗೋವಿಂದಪ್ಪ, ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts