More

    ಎಲ್ಲ ವಾಹನಗಳ ತಪಾಸಣೆ ಮಾಡಿ

    ಬೆಳಗಾವಿ: ಲೋಕಸಭಾ ಉಪಚುನಾವಣೆ ಹಿನ್ನೆಲೆಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರ ವ್ಯಾಪ್ತಿಯಲ್ಲಿ ಸ್ಥಾಪಿಸಲಾಗಿರುವ ಚೆಕ್‌ಪೋಸ್ಟ್‌ಗಳಿಗೆ ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಡಾ. ಕೆ.ಹರೀಶಕುಮಾರ ಶನಿವಾರ ಭೇಟಿ ನೀಡಿ ವ್ಯವಸ್ಥೆ ಪರಿಶೀಲಿಸಿದರು. ನಂತರ ಚೆಕ್‌ಪೋಸ್ಟ್‌ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ಜತೆ ಚರ್ಚಿಸಿದ ಅವರು, ಚೆಕ್‌ಪೋಸ್ಟ್ ಮೂಲಕ ಸಾಗುವ ಪ್ರತಿ ವಾಹನಗಳನ್ನೂ ಸಮರ್ಪಕವಾಗಿ ಪರಿಶೀಲಿಸಬೇಕು. ಈ ವೇಳೆ ಅಕ್ರಮ ಹಣ, ಮದ್ಯ ಮತ್ತಿತರ ವಸ್ತು ವಶಪಡಿಸಿಕೊಂಡರೆ ತಕ್ಷಣವೇ ಹಿರಿಯ ಅಧಿಕಾರಿಗಳಿಗೆ ಮಾಹಿತಿ ರವಾನಿಸಬೇಕು. ಚುನಾವಣಾ ಆಯೋಗದ ಮಾರ್ಗಸೂಚಿ ಪ್ರಕಾರ ಮುಂದಿನ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

    ಬಾಚಿ, ಬೆಕ್ಕಿನಕೇರಿ, ರಕ್ಕಸಕೊಪ್ಪ, ಸಂತಿಬಸ್ತವಾಡ ಕ್ರಾಸ್, ದೇಸೂರ ಕ್ರಾಸ್ ಮತ್ತು ಖಾನಾಪುರ ರಸ್ತೆಗಳಲ್ಲಿ ಸ್ಥಾಪಿಸಿರುವ ಚೆಕ್‌ಪೋಸ್ಟ್‌ಗಳಿಗೆ ಹರೀಶಕುಮಾರ ಭೇಟಿ ನೀಡಿ, ಪರಿಶೀಲಿಸಿದರು.

    ಮತ ಕೇಂದ್ರಗಳಿಗೆ ಭೇಟಿ: ನಂತರ ಕೆಲ ಮತದಾನ ಕೇಂದ್ರಗಳಿಗೆ ಭೇಟಿ ನೀಡಿದ ಹರೀಶಕುಮಾರ ಅಲ್ಲಿರುವ ಸೌಲಭ್ಯ ಪರಿಶೀಲಿಸಿದರು. ಚುನಾವಣಾ ಆಯೋಗದ ನಿರ್ದೇಶನದಂತೆ ಮತಕೇಂದ್ರಗಳಲ್ಲಿ ಸೌಕರ್ಯ ಕಲ್ಪಿಸಬೇಕು ಎಂದು ಸೂಚಿಸಿದರು. ಗ್ರಾಮೀಣ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಶಿವನಗೌಡ ಪಾಟೀಲ, ತಹಸೀಲ್ದಾರ್ ಆರ್.ಕೆ.ಕುಲಕರ್ಣಿ, ತರಬೇತುದಾರ ನಾಗರಾಜ ಕಾಳೆ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts