More

    ಹೊನ್ನೇನಹಳ್ಳಿ ಗ್ರಾಪಂನಲ್ಲಿ ಭ್ರಷ್ಟಾಚಾರ ಆರೋಪ

    ಕೋಲಾರ: ತಾಲೂಕಿನ ಹೊನ್ನೇನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ನಡೆದಿರುವ ಹಗರಣಗಳ ಕುರಿತು ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿ ಸದಸ್ಯರು ಸೋಮವಾರ ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

    ಉಪಾಧ್ಯಕ್ಷ ಮಂಜುನಾಥ್​ ಮಾತನಾಡಿ, ಗ್ರಾಪಂ ಅಭಿವೃದ್ಧಿಗಾಗಿ ಸರ್ಕಾರದಿಂದ 1.50 ಕೋಟಿ ರೂ.ಗೂ ಅಧಿಕ ಅನುದಾನ ಬಿಡುಗಡೆಯಾಗಿದೆ. ಆದರೆ ಕಾಮಗಾರಿ ಮಾಡದಿದ್ದರೂ ಗುತ್ತಿಗೆದಾರರಿಗೆ ಬಿಲ್​ ಪಾವತಿಸಲಾಗಿದೆ. ಗುತ್ತಿಗೆದಾರರೊಂದಿಗೆ ಪಂಚಾಯಿತಿ ಅಧಿಕಾರಿಗಳು ಶಾಮೀಲಾಗಿ ಭ್ರಷ್ಟ್ಟಾಚಾರ ಎಸಗಿದ್ದಾರೆ ಎಂದು ಆರೋಪಿಸಿದರು.
    ನರೇಗಾದಲ್ಲಿ ಕೈಗೊಂಡಿರುವ ಕಾಮಗಾರಿಗಳಿಗೆ ಸಾಮಗ್ರಿ ಖರೀದಿ, ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಕೈಗೊಂಡಿರುವ ಪಂಪ್​ಮೋಟಾರು ದುರಸ್ತಿಗೆ ಸಂಬಂಧಿಸಿದಂತೆ ಪಾರದರ್ಶಕವಾಗಿ ದರಪಟ್ಟಿ ಸಿದ್ಧಪಡಿಸಿಲ್ಲ. ಜತೆಗೆ ನಿಯಮ ಉಲ್ಲಂಘಿಸಿ ಬಿಲ್​ ಪಾವತಿ ಮಾಡಲಾಗಿದೆ ಎಂದು ದೂರಿದರು.
    2022&23ನೇ ಸಾಲಿನ ಸಂಪನ್ಮೂಲ ಖಾತೆಯಿಂದ ಪರಿಶಿಷ್ಟ ಜಾತಿ, ಪಂಗಡಗಳ ಸಮುದಾಯಕ್ಕೆ ಶೇ.25 ಅನುದಾನ ಮೀಸಲಿಟ್ಟಿಲ್ಲ. ಪಂಚಾಯಿತಿಯ ಸಭೆ, ಸಮಾರಂಭಗಳಿಗೆ ಹೆಚ್ಚುವರಿ ವೆಚ್ಚ ಮಾಡಲಾಗಿದೆ ಎಂದು ಅಧಿಕಾರಿಗಳು ಹಣ ಡ್ರಾ ಮಾಡಿದ್ದಾರೆ. ಈ ಬಗ್ಗೆ ತಾಪಂ, ಜಿಪಂ ಅಧಿಕಾರಿಗಳು ಸೂಕ್ತ ತನಿಖೆ ನಡೆಸಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬೇಕು. ಇಲ್ಲದಿದ್ದರೆ ಗ್ರಾಪಂ ಕಚೇರಿಯಿಂದ ಜಿಲ್ಲಾ ಪಂಚಾಯಿತಿ ಕಚೇರಿವರೆಗೆ ಕಾಲ್ನಡಿಗೆ ಜಾಥಾ ನಡೆಸಲಾಗುವುದು ಎಂದು ಎಚ್ಚರಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts