More

    ನಮಾಜ್‌ಗಾಗಿ ಪರೀಕ್ಷೆ ಸಮಯವೇ ಬದಲು ಮಾಡಿತ ರಾಜ್ಯ ಸರ್ಕಾರ?

    ಬೆಂಗಳೂರು: ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿರುವುದು ಮುಸ್ಲಿಂರ ದಯೆಯಿಂದ ಎಂದು ಹಿಂದೂ ಮತದಾರರಿಗೆ ಅಪಮಾನ ಮಾಡಿದ್ದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಜತೆ ಪೈಪೋಟಿಗೆ ಬಿದ್ದಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಮೊಹಲ್ಲಾ ಅಭಿವೃದ್ಧಿಗೆ ಸಾವಿರ ಕೋಟಿ ನೀಡಿದ್ದರು ಇದಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಇದೀಗ ಶಿಕ್ಷಣ ಕ್ಷೇತ್ರದಲ್ಲೂ ರಾಜಕೀಯ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

    ಇದನ್ನೂ ಓದಿ:ಹೆಂಡತಿ ಬೈದರೆ ಏನ್ ಮಾಡಬೇಕು? ಸುಖ ಸಂಸಾರಕ್ಕೆ ಓವೈಸಿ ಸೂತ್ರ!

    ಇದೀಗ ರಾಜ್ಯದಲ್ಲಿ ನಡೆಯುವ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೇಳಾಪಟ್ಟಿ ಪ್ರಕಟವಾಗಿದೆ. ಆದರೆ, ಶುಕ್ರವಾರ ಮಾತ್ರ ಬೆಳಗ್ಗೆ ಬದಲಿಗೆ ಮಧ್ಯಾಹ್ನ ಪರೀಕ್ಷೆ ನಡೆಸಲು ಸಮಯ ನಿಗದಿ ಮಾಡಿರುವುದು ಇದೀಗ ವಿವಾದಕ್ಕೆ ಕಾರಣವಾಗಿದೆ. ಅಲ್ಪಸಂಖ್ಯಾತರ ತುಷ್ಟೀಕರಣ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರವು, ಈಗ ಪರೀಕ್ಷೆಯಲ್ಲೂ ರಾಜಕೀಯ ಮಾಡುತ್ತಾ, ಮುಸ್ಲಿಮರ ಓಲೈಕೆಗೆ ಮುಂದಾಗಿದೆ ಎಂದು ಹಿಂದು ಸಂಘಟನೆಗಳು ಆರೋಪ ಮಾಡಿವೆ.

    ನಮಾಜ್‌ಗಾಗಿ ಪರೀಕ್ಷೆ ಸಮಯವೇ ಬದಲು ಮಾಡಿತ ರಾಜ್ಯ ಸರ್ಕಾರ?

    ‘ಫೆಬ್ರವರಿ 26ರಿಂದ ಮಾರ್ಚ್‌ 3ರವರೆಗೆ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ ನಡೆಯಲಿದೆ. ಇದರಲ್ಲಿ ಶುಕ್ರವಾರ ಹೊರತುಪಡಿಸಿ ಬೆಳಗ್ಗೆ 10.15 – 1.30ರವರೆಗೂ ವಿವಿಧ ವಿಷಯಗಳ ಪರೀಕ್ಷೆ ಸಮಯ ನಿಗದಿಯಾಗಿದೆ. ಆದರೆ, ಶುಕ್ರವಾರ ಮಾತ್ರ ಮಧ್ಯಾಹ್ನ 2 ಗಂಟೆಯಿಂದ 5.15ವರೆಗೆ ಶಿಕ್ಷಣ ಇಲಾಖೆ ಸಮಯ ನಿಗದಿ ಮಾಡಿದೆ ಇದಕ್ಕೆ ಕಾರಣ ಕೊಡಿ ಎಂದು ಹಿಂದೂ ಪರ ಸಂಘಟನೆಗಳು ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.

    ಮುಸಲ್ಮಾನರನ್ನು ಓಲೈಸಲು ಕಾಂಗ್ರೆಸ್‌ ಸರ್ಕಾರ ಈ ರೀತಿಯ ಆದೇಶ ಮಾಡಿದೆ. ಶಿಕ್ಷಣ ಇಲಾಖೆಯ ಮೇಲೆ ಒತ್ತಡ ಹೇರಿ ಈ ನಿರ್ದೇಶನ ಹೊರಡಿಸಲಾಗಿದೆ. ಈ ರೀತಿ ವೇಳಪಟ್ಟಿ ಯಾಕೆ ನಿಗದಿ ಮಾಡಲಾಗಿದೆ ಎಂಬುವುದು ಅರ್ಥವಾಗ್ತಿಲ್ಲ ಎಂದು ಶಿಕ್ಷಣ ತಜ್ಞರು ಅಸಮಾಧಾನ ಹೊರಹಾಕಿದ್ದಾರೆ.

    ಶಿಕ್ಷಣದಲ್ಲೂ ರಾಜಕೀಯ ಬೆಳೆಯುತ್ತಿದೆ.ಎಲ್ಲ ಧರ್ಮಗಳನ್ನು ಸರ್ಕಾರ ಸಮಾನವಾಗಿ ನೋಡಬೇಕು. ಆದರೆ, ಹಿಂದು ಮುಸ್ಲಿಮರ ನಡುವೆ ಕಂದಕ ಸೃಷ್ಟಿಸಲು ಕಾಂಗ್ರೆಸ್‌ ಸರ್ಕಾರ ಯತ್ನಿಸುತ್ತಿದೆ. ತಾಂತ್ರಿಕ ಕಾರಣಗಳಿಗೆ ಈ ರೀತಿ ಮಾಡಿದಂತಿಲ್ಲ. ಮುಸ್ಲಿಮರ ಓಲೈಕೆಗೆ ಶಾದಿ ಭಾಗ್ಯ ಮಾಡಿದ್ದ ಇವರು, ಈಗ ಶಾಲಾ ಕೊಠಡಿಗಳಲ್ಲಿ ನಮಾಜ್‌ಗೂ ಅವಕಾಶ ಮಾಡಿಬಿಡಲಿ ಎಂದು ಬಿಜೆಪಿ ಮುಖಂಡರೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಇದು ಚೀಲ ಅಲ್ಲ, ಶೀಲದ ವಿಚಾರ…ಪತಿವ್ರತೆ ಅಂತ ಪ್ರೂವ್ ಮಾಡೋಕೆ ಹೊರಟುಬಿಟ್ಟಿದ್ದಳು: ಹೀಗೆಂದಿದ್ಯಾಕೆ ಗುರುಪ್ರಸಾದ್?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts