More

    ಸಿಎಂ ತವರು ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ಆರೋಪ! ಸಂಸದರ ಕಂಪನಿಯಿಂದಲೇ ಕೃತ್ಯ?

    ದಾವಣಗೆರೆ: ಸಿಎಂ ಬಸವರಾಜ ಬೊಮ್ಮಾಯಿ ಅವರ ತವರು ಜಿಲ್ಲೆಯಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ನಡೆಯುತ್ತಿದೆ. ಬಿಜೆಪಿ ಸಂಸದ ಜಿ.ಎಂ.ಸಿದ್ದೇಶ್ವರ್ ಮಾಲೀಕತ್ವದ ಕಂಪೆನಿಯಿಂದಲೇ ಈ ಅನಧಿಕೃತ ಚಟುವಟಿಕೆ ನಡೆಯುತ್ತಿದೆ ಎಂದು ಸಮಾಜ ಪರಿವರ್ತನಾ ಸಮುದಾಯದ ಸಂಸ್ಥಾಪಕ ಅಧ್ಯಕ್ಷ ಎಸ್.ಆರ್.ಹಿರೇಮಠ ಆರೋಪಿಸಿದ್ದಾರೆ.

    ಇಂದು ದಾವಣಗೆರೆಯಲ್ಲಿ ಸುದ್ದಿಗೋಷ್ಠಿ ನಡೆಸಿದ ಹಿರೇಮಠ ಅವರು, ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಚಟ್ನಳ್ಳಿ‌ ಗ್ರಾಮದ ಜಿ.ಎಂ. ಶುಗರ್ ಅಂಡ್ ಎನರ್ಜಿ ಲಿ.ನಿಂದ ಅಕ್ರಮ ಕಲ್ಲು‌ ಗಣಿಗಾರಿಕೆ ನಡೆಯುತ್ತಿದೆ. ಅನಧಿಕೃತವಾಗಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆ, ಸ್ಟೋನ್ ಕ್ರಷಿಂಗ್, ಸಾಗಣೆಗಳನ್ನು ಸ್ಥಗಿತಗೊಳಿಸುವಂತೆ ಅವರು ಸರ್ಕಾರವನ್ನು ಒತ್ತಾಯಿಸಿದರು.

    ಇದನ್ನೂ ಓದಿ: ಕೇವಲ 5 ರೂಪಾಯಿಗೆ 40 ಕಿ.ಮೀ! ವಿನೂತನ ಬ್ಯಾಟರಿ ಬೈಸಿಕಲ್​ಗೆ ಜನರು ಫಿದಾ..!

    ಅಕ್ರಮ ಗಣಿಗಾರಿಕೆ ಆರೋಪಕ್ಕೆ ದಾಖಲೆಗಳನ್ನು ಬಿಡುಗಡೆ ಮಾಡಿದ ಹಿರೇಮಠ, ಪರವಾನಗಿ ನೀಡಿದ ಪ್ರದೇಶಕ್ಕಿಂತ ಹೆಚ್ಚಿನ ಪ್ರದೇಶದಲ್ಲಿ ಗಣಿಗಾರಿಕೆ ನಡೆಯುತ್ತಿದೆ. ಪ್ರತಿ ವಾರ ನೂರಾರು ಕೋಟಿ ಮೌಲ್ಯದ ಜಲ್ಲಿ ಕಲ್ಲು‌ ಸಾಗಣೆ ನಡೆಯುತ್ತಿದೆ. ಕಂಪನಿ ಆರಂಭಿಸುವ ಬದಲು ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದಾರೆ. ಇವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕಾದ ಜಿಲ್ಲಾಧಿಕಾರಿ‌ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಿದರು.

    ಅಕ್ರಮ ಗಣಿಗಾರಿಕೆ ಕೇವಲ ಹಾವೇರಿ ಜಿಲ್ಲೆಗೆ ಮಾತ್ರ ಸೀಮಿತವಾಗದೇ ರಾಜ್ಯಾದ್ಯಂತ ವ್ಯಾಪಿಸಿದೆ. ಅಕ್ರಮ ಕಲ್ಲು ಗಣಿಗಾರಿಕೆಯಲ್ಲಿ ಅಧಿಕಾರಿಗಳು, ರಾಜಕಾರಣಿಗಳು ಭಾಗಿಯಾಗಿದ್ದಾರೆ. ಅಕ್ರಮ ಗಣಿಗಾರಿಕೆ, ಭ್ರಷ್ಟಾಚಾರ ತಡೆಗೆ ಕ್ರಮ ಕೈಗೊಳ್ಳಬೇಕು ಎಂದು ಸಾಮಾಜಿಕ ಕಾರ್ಯಕರ್ತರಾದ ಎಸ್.ಆರ್.ಹಿರೇಮಠ ಆಗ್ರಹಿಸಿದರು.

    ಚಾಮುಂಡಿ ಬೆಟ್ಟದ ಹುಂಡಿಯಲ್ಲಿ ಸಂಗ್ರಹವಾಗಿದೆ ದಾಖಲೆ ಧನರಾಶಿ

    ನಕಲಿ ಚಿನ್ನ ತೋರಿಸಿ ಲಕ್ಷಾಂತರ ಹಣ ದೋಚಿದ್ದ ಖದೀಮರು ಪೊಲೀಸ್​ ವಶಕ್ಕೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts