ದರ್ಶನ್‌ಗೆ ಸವಲತ್ತು ನೀಡದ ಆರೋಪ: ಜೈಲಿಗೆ ಖುದ್ದು ನ್ಯಾಯಾಧೀಶರು ಭೇಟಿ ನೀಡಿ ಪರಿಶೀಲಿಸುವಂತೆ ಕೋರ್ಟ್‌ ಆದೇಶ| Darshan

Darshan Arrest
Published on

ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಜೈಲಿಗೆ ಭೇಟಿ ನೀಡಿ ಸವಲತ್ತು ಪರಿಶೀಲಿಸಬೇಕು. ಜೈಲು ಕೈಪಿಡಿಯಂತೆ ಸವಲತ್ತು ನೀಡಲಾಗಿದೆಯೇ ಎಂಬುದನ್ನು ಪರಿಶೀಲಿಸಿ, ಅ.18 ರೊಳಗೆ ಭೇಟಿ ನೀಡಿ ವರದಿ ನೀಡುವಂತೆ 57ನೇ ಸಿಸಿಎಚ್ ಕೋರ್ಟ್​ ಸೂಚನೆ ಹೊರಡಿಸಿದೆ.

ಬೆಂಗಳೂರು; ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ದರ್ಶನ್​ಗೆ ಜೈಲಿನಲ್ಲಿ ಹಾಸಿಗೆ, ದಿಂಬು ಕೊಡದ ಹಿನ್ನಲೆ ಖುದ್ದು ನ್ಯಾಯಾಧೀಶರು ಜೈಲಿಗೆ ಹೋಗಿ ಪರಿಶೀಲಿಸುವಂತೆ ದರ್ಶನ್ ಪರ ವಕೀಲ ಸುನೀಲ್ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್​ ಸೀಕಾರ ಮಾಡಿದೆ.

ದರ್ಶನ್​ಗೆ ಜೈಲಿನಲ್ಲಿ ಕನಿಷ್ಠ ಸೌಲಭ್ಯವನ್ನೂ ಸಹ ನೀಡಿಲ್ಲ ಎಂದು ದರ್ಶನ್ ಪರ ವಕೀಲರು ವಾದ ಮಂಡಿಸಿದರು. ಜೈಲಿನಲ್ಲಿ ದೈಹಿಕ ಹಿಂಸೆ ನೀಡಲಾಗುತ್ತಿದೆ ಹಾಗಾಗಿ ನ್ಯಾಯಾಧೀಶರೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುವಂತೆ ದರ್ಶನ್​ ಮನವಿ ಮಾಡಿಕೊಂಡಿದ್ದರು. ಹಾಗಾಗಿ ಇದನ್ನು ಗಂಭೀರವಾಗಿ ಮನ್ನಣೆಗೆ ತೆಗೆದುಕೊಂಡ ಕೋರ್ಟ್​ ಇದೀಗ ಆದೇಶ ಹೊರಡಿಸಿದೆ. ಈ ಅರ್ಜಿಯ ಬಗ್ಗೆ ಇಂದು ವಿಚಾರಣೆ ನಡೆಸಿದ 57ನೇ ಸಿಸಿಎಚ್‌ ಕೋರ್ಟ್ ಜಡ್ಜ್ ಈರಪ್ಪಣ್ಣ ಪವಡಿ ನಾಯ್ಕ್ ಈ ಆದೇಶ ನೀಡಿದ್ದಾರೆ.

(ಏಜೆನ್ಸೀಸ್)

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ವಿಶೇಷ ಸವಲತ್ತು ಸಿಗದಂತೆ ನೋಡಿಕೊಳ್ಳಲಾಗುತ್ತಿದೆ ಎಂದು ಹೆಚ್ಚುವರಿ ದಿಂಬು ಹಾಗೂ ಬೇಡ್​​ಶೀಟ್​ಗಾಗಿ ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ದರ್ಶನ್ ಅರ್ಜಿ ಸಲ್ಲಿಸಿದ್ದರು. ಆಗ ಅಲ್ಲಿನ ಕಠಿಣ ನಿಯಮಗಳಿಂದ ನರಕಯಾತನೆ ಉಂಟಾಗುತ್ತಿರುವುದರಿಂದ ದರ್ಶನ್​ ನನಗೆ ಮಾತ್ರ ಪಾಯಿಸನ್ ನೀಡಲಿ. ಕೋರ್ಟ್​​ನಿಂದಲೇ ಈ ಆದೇಶ ನೀಡಬೇಕು. ನಾನು ಬಿಸಿಲು ನೋಡಿ 30 ದಿನಗಳಾಗಿವೆ. ಕೈ ಎಲ್ಲಾ ಫಂಗಸ್ ಬಂದಿದೆ. ಎಂದು ಜಡ್ಜ್ ಮುಂದೆ ಹೇಳಿದ್ದಾರೆ ಎನ್ನಲಾಗಿತ್ತು. ಆಗ ಜಡ್ಜ್ ‘ನೀವು ಹಾಗೆಲ್ಲಾ ಹೇಳುವಂತಿಲ್ಲ’ ಎಂದಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net