blank

142 ಕೋಟಿ ರೂ.ಲಾಭ ಪಡೆದ ಆರೋಪ; ಸೋನಿಯಾ, ರಾಹುಲ್​ಗಾಂಧಿಗೆ ಇಡಿ ಶಾಕ್|National-herald-case

blank

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರು 142 ಕೋಟಿ ರೂಪಾಯಿ ಲಾಭ ಪಡೆದಿದ್ದಾರೆ ಎಂದು ಜಾರಿ ನಿರ್ದೇಶನಾಲಯ (ED) ಇಂದು (21) ದೆಹಲಿ ನ್ಯಾಯಾಲಯಕ್ಕೆ ತಿಳಿಸಿದೆ.
ಕೇಂದ್ರ ಸಂಸ್ಥೆಯ ಪರವಾಗಿ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ ರಾಜು, ನ್ಯಾಷನಲ್ ಹೆರಾಲ್ಡ್‌ಗೆ ಸಂಬಂಧಿಸಿದ ಆಸ್ತಿಗಳನ್ನು ನವೆಂಬರ್ 2023 ರಲ್ಲಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಆದರೆ ಅಲ್ಲಿಯವರೆಗೂ ಕೂಡ ಆರೋಪಿಗಳು ಅಪರಾಧದ ಆದಾಯವನ್ನು ಅನುಭವಿಸುತ್ತಿದ್ದರು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಶೋಕ ವಿವಿ ಪ್ರಾಧ್ಯಾಪಕ ಅಲಿ ಖಾನ್​ಗೆ ಮಧ್ಯಂತರ ಜಾಮೀನು ನೀಡಿದ ಸುಪ್ರೀಂಕೋರ್ಟ್| Spreme-court

ಅಪರಾಧದ ಆದಾಯವನ್ನು ಪಡೆದಾಗ ಗಾಂಧಿ ಕುಟುಂಬ ಹಣ ವರ್ಗಾವಣೆ ಮಾಡಿದ್ದು ಮಾತ್ರವಲ್ಲದೆ, ಆದಾಯವನ್ನು ಹಿಡಿದಿಟ್ಟುಕೊಳ್ಳುವ ಮೂಲಕವೂ ಅಕ್ರಮ ಹಣ ವರ್ಗಾವಣೆ ಮಾಡಿದ್ದಾರೆ ಎಂದು ಇಡಿ ತಿಳಿಸಿದೆ. ಜೂನ್ 26, 2014 ರಂದು ಸ್ವಾಮಿ ಸಲ್ಲಿಸಿದ್ದ ಖಾಸಗಿ ದೂರನ್ನು ಮ್ಯಾಜಿಸ್ಟೀರಿಯಲ್ ನ್ಯಾಯಾಲಯವು ಗಮನಕ್ಕೆ ತೆಗೆದುಕೊಂಡ ನಂತರ ಇಡಿ 2021 ರಲ್ಲಿ ತನ್ನ ತನಿಖೆಯನ್ನು ಪ್ರಾರಂಭಿಸಿತು. ಸಂಸ್ಥೆಯು ಇತ್ತೀಚೆಗೆ ತನ್ನ ಆರೋಪಪಟ್ಟಿಯನ್ನು ಸಲ್ಲಿಸಿತ್ತು.

ಏನಿದು ನ್ಯಾಷನಲ್ ಹೆರಾಲ್ಡ್ ಪ್ರಕರಣ?

ಕ್ರಿಮಿನಲ್ ಪಿತೂರಿ ನಡೆಸಿ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್‌ನ (ಎಜೆಎಲ್) ಸಾವಿರಾರು ಕೋಟಿ ಮೌಲ್ಯದ ಆಸ್ತಿಯನ್ನು ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಸ್ಯಾಮ್‌ ಪಿತ್ರೊಡಾ, ಸುಮನ್‌ ದುಬೆ ಮತ್ತು ಇತರ ಕಾಂಗ್ರೆಸ್ ನಾಯಕರು ಪಡೆದಿದ್ದಾರೆ.
ಯಂಗ್ ಇಂಡಿಯನ್‌ ಲಿಮಿಟೆಡ್‌ ಮೂಲಕ 2,000 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಸೋನಿಯಾ ಮತ್ತು ರಾಹುಲ್‌ ಅವರು ಕೇವಲ 50 ಲಕ್ಷ ರೂ.ಗೆ ಖರೀದಿಸಿದ್ದಾರೆ. ಕಾಂಗ್ರೆಸ್ ಪಕ್ಷವು ಎಜೆಎಲ್‌ಗೆ ನೀಡಿದ್ದ 90.2 ಕೋಟಿ ರೂ. ಸಾಲವನ್ನು 9.02 ಕೋಟಿಯ ಈಕ್ವಿಟಿ ಷೇರುಗಳನ್ನಾಗಿ ಪರಿವರ್ತಿಸಿ ಯಂಗ್‌ ಇಂಡಿಯನ್‌ಗೆ ವರ್ಗಾಯಿಸಲಾಗಿದೆ ಎಂದು ಇ.ಡಿ. ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಿದೆ.
(ಏಜೆನ್ಸೀಸ್)

ಮದ್ಯದ ಅಮಲಿನಲ್ಲಿ ತಾಯಿಯನ್ನು ಹೊಡೆದು ಕೊಂದ ಮಗ! Mother

Share This Article

ಒಂದು ತಿಂಗಳು ಸಕ್ಕರೆ ಮತ್ತು ಉಪ್ಪು ಬಿಟ್ಟರೆ ದೇಹದಲ್ಲಾಗುವ ಬದಲಾವಣೆ ಏನು ಗೊತ್ತಾ? | Sugar

Sugar: ಸಾಮಾನ್ಯವಾಗಿ ಮನುಷ್ಯನ ದೇಹ ಅನಾರೋಗ್ಯಕ್ಕೊಳಗಾದಾಗ ಆಹಾರದಲ್ಲಿ ಸಕ್ಕೆರೆ ಮತ್ತು ಉಪ್ಪುನಂತಹ ಅಂಶಗಳನ್ನು ತ್ಯಜಿಸಬೇಕಾಗುತ್ತದೆ. ಇದರಿಂದ…

ಹೃದ್ರೋಗ ದೂರ, ಮೆದುಳಿನ ಆರೋಗ್ಯಕ್ಕೆ ಬಲ: ಟ್ಯೂನ ಮೀನಿನಲ್ಲಿದೆ ಹಲವು ಆರೋಗ್ಯ ಪ್ರಯೋಜನಗಳು! Tuna Fish Benefits

Tuna Fish Benefits: ಮೀನು ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ಸಾಮಾನ್ಯವಾಗಿ ಹೇಳಲಾಗುತ್ತದೆ. ಮೀನಿನಲ್ಲಿ ಹಲವು…