More

    ವಿದ್ಯಾರ್ಥಿಗಳಲ್ಲಿರುವ ಆತಂಕ ಹೋಗಲಾಡಿಸಿ

    ಹೂವಿನಹಡಗಲಿ: ವಿದ್ಯಾರ್ಥಿಗಳು ಕಠಿಣ ಶ್ರಮವಹಿಸಿ ಅಭ್ಯಾಸ ಮಾಡುವುದರಿಂದ ಭವಿಷ್ಯದಲ್ಲಿ ಉತ್ತಮ ಜೀವನ ರೂಪಿಸಿಕೊಳ್ಳಬಹುದು ಎಂದು ವಿಎಸ್‌ಕೆ ವಿವಿಯ ಶೈಕ್ಷಣಿಕ ಪರಿಷತ್ ಸದಸ್ಯ ಹಾಗೂ ಪ್ರಾಚಾರ್ಯ ಪ್ರೊ.ಎಸ್.ಎಸ್.ಪಾಟೀಲ್ ಹೇಳಿದರು.

    ವಿಜಯನಗರ ಜಿಲ್ಲೆ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ), ಜಿಲ್ಲಾ ಇಂಗ್ಲಿಷ್ ಉಪನ್ಯಾಸಕರ ವೇದಿಕೆ, ತಾಲೂಕು ಪದವಿಪೂರ್ವ ಕಾಲೇಜುಗಳ ಪ್ರಾಚಾರ್ಯರ ಹಾಗೂ ಉಪನ್ಯಾಸಕರ ಸಂಘ ಗುರುವಾರ ಜಿಬಿಆರ್ ಕಾಲೇಜಿನಲ್ಲಿ ಆಯೋಜಿಸಿದ್ದ ತಾಲೂಕಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಒಂದು ದಿನದ ಇಂಗ್ಲಿಷ್ ಬೂಸ್ಟರ್ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

    ಇದನ್ನೂ ಓದಿ:ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಅಧ್ಯಯನದತ್ತ ಗಮನಹರಿಸಿ

    ಪಿಯುಸಿ ಲಿತಾಂಶದಲ್ಲಿ ಹಿಂದಿರುವ ವಿಜಯನಗರ ಜಿಲ್ಲೆಯ ಫಲಿತಾಂಶವನ್ನು ಈ ಬಾರಿ ಉತ್ತಮಗೊಳಿಸಬೇಕಿದೆ. ವಿದ್ಯಾರ್ಥಿ ಜೀವನದಲ್ಲಿ ಪಿಯುಸಿ ಹಂತವು ಮಹತ್ವದ ಘಟ್ಟವಾಗಿದ್ದು, ಇಂಗ್ಲಿಷ್ ಫಲಿತಾಂಶ ಸುಧಾರಣೆಗೆ ಇಂಥ ಕಾರ್ಯಾಗಾರಗಳು ಅನುಕೂಲವಾಗಲಿವೆ ಎಂದರು.

    ಕಲಿಕೆಯ ಪ್ರಮಾಣ ಕಡಿಮೆ

    ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ಇಂಗ್ಲಿಷ್ ಸೇರಿದಂತೆ ಇತರ ವಿಷಯಗಳ ಕಲಿಕೆಯ ಪ್ರಮಾಣ ಕಡಿಮೆಯಾಗುತ್ತಿದೆ. ಇದಕ್ಕೆ ವಿದ್ಯಾರ್ಥಿಗಳಲ್ಲಿರುವ ಆತಂಕ, ಭಯ ಕಾರಣವಾಗಿದ್ದು, ಉಪನ್ಯಾಸಕರು ಮತ್ತು ಶಿಕ್ಷಕರು ಹೋಗಲಾಡಿಸಬೇಕು. ಉನ್ನತ ಶಿಕ್ಷಣ ಕಲಿಯಲು ಪ್ರೋತ್ಸಾಹಿಸಬೇಕು ಎಂದರು. ಜಿಲ್ಲಾ ಇಂಗ್ಲಿಷ್ ಉಪನ್ಯಾಸಕರ ಸಂಘದ ಉಪಾಧ್ಯಕ್ಷ ಪ್ರಾಚಾರ್ಯ ಎ.ಕೊಟ್ರಗೌಡ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಜಿಲ್ಲಾ ಪ್ರಾಚಾರ್ಯರ ಸಂಘದ ಉಪಾಧ್ಯಕ್ಷ ಕೋರಿ ಹಾಲೇಶ್, ಉಪನ್ಯಾಸಕರ ಸಂಘದ ಅಧ್ಯಕ್ಷ ಬಸೆಟ್ಟಿ ಪ್ರಕಾಶ ಮಾತನಾಡಿದರು. ತಾಲೂಕಿನ ಸಾವಿರಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಶಿಬಿರದಲ್ಲಿ ಭಾಗವಹಿಸಿದ್ದರು. ರಾಸಾಯನಶಾಸ್ತ್ರ ವಿಭಾಗದ ಪ್ರಭಾರ ಮುಖ್ಯಸ್ಥ ಸದಾಶಿವ, ಪ್ರಾಚಾರ್ಯರಾದ ಸಿದ್ದಪ್ಪ ಕೂಕನಪಳ್ಳಿ, ಅಮರೇಗೌಡ ಪಾಟೀಲ್ ಕಲ್ಲನಗೌಡರ ಪ್ರಕಾಶ, ಉಪನ್ಯಾಸಕರಾದ ಪರಶುರಾಮ ನಾಗೋಜಿ, ನಾಗರಾಜ ಹಳ್ಳಿಕಟ್ಟಿ, ವಿರೂಪಾಕ್ಷಪ್ಪ ಬಡಿಗೇರ, ಎಂ.ಶಿವಪ್ಪ, ರೇವಣಸಿದ್ದಪ್ಪ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts