ಮೈತ್ರಿ ಅಭ್ಯರ್ಥಿ ಅನುಭವಿ ರಾಜಕಾರಣಿ

ಬೈಲಕುಪ್ಪೆ: ಮೈತ್ರಿ ಅಭ್ಯರ್ಥಿ ಸಿ.ಎಚ್.ವಿಜಯಶಂಕರ್ ಅವರು ಅನುಭವಿ ರಾಜಕಾರಣಿ ಎಂದು ಶಾಸಕ ಕೆ.ಮಹದೇವ್ ಹೇಳಿದರು.

ಗ್ರಾಮದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರಮೋದಿ ದೇಶದ ಜನರ ಹಿತ ಕಾಯುವಲ್ಲಿ ವಿಫಲರಾಗಿದ್ದು, ಶ್ರೀಮಂತರು ಮತ್ತು ಉದ್ಯಮಿಗಳ ಪರವಾಗಿ ನಿಂತಿದ್ದಾರೆ ಎಂದು ಆರೋಪಿಸಿದರು.

ಅಭ್ಯರ್ಥಿ ಸಿ.ಎಚ್.ವಿಜಯಶಂಕರ್ ಮಾತನಾಡಿ, ಸಮ್ಮಿಶ್ರ ಸರ್ಕಾರದಲ್ಲಿ ಯಾವುದೇ ಗೊಂದಲ ಇಲ್ಲ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಜಿ.ಟಿ.ದೇವೇಗೌಡರು ಒಟ್ಟಿಗೆ ಚುನಾವಣೆ ಸಂಬಂಧ ಚರ್ಚಿಸಿ ಗೊಂದಲಕ್ಕೆ ತೆರೆ ಎಳೆದಿದ್ದಾರೆ. ಅಲ್ಲದೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಏಳಿಗೆಗಾಗಿ ಹಾಗೂ ಕೇಂದ್ರದಲ್ಲಿ ಚುಕ್ಕಾಣಿ ಹಿಡಿಯಲು ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕೆಂದು ಮನವಿ ಮಾಡಿದರು.

ಮಾಜಿ ಶಾಸಕ ಕೆ.ವೆಂಕಟೇಶ್ ಮಾತನಾಡಿ, ಕೇಂದ್ರ ಸರ್ಕಾರದ ದುರಾಡಳಿತವನ್ನು ಕೊನೆಗಾಣಿಸಲು ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರು ದುಡಿಯಬೇಕು ಎಂದರು.

ಕಾಂಗ್ರೆಸ್ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ಮೈಸೂರು ಮಹಾನಗರಪಾಲಿಕೆ ಸದಸ್ಯ ಪ್ರಶಾಂತ್‌ಗೌಡ, ಮುಖಂಡರಾದ ರಾಮಜಾನ್ ಬಾಬು, ಐಲಾಪುರರಾಮು, ರಾಜಯ್ಯ, ಗಣೇಶ್, ರಾಜೇಗೌಡ, ಅಣ್ಣಯ್ಯಶೆಟ್ಟಿ, ಪುಟ್ಟಸ್ವಾಮಿ, ಬೈಲಕುಪ್ಪೆ ಗ್ರಾಪಂ ಅಧ್ಯಕ್ಷೆ ರೇಣುಕಮ್ಮ, ಉಪಾಧ್ಯಕ್ಷ ಮಂಜುನಾಥ್ ಇತರರು ಹಾಜರಿದ್ದರು.

ಬಳಿಕ ಬೆಣಗಾಲು, ಆವರ್ತಿ, ಕೊಪ್ಪ, ಆಲನಹಳ್ಳಿ ಗ್ರಾಮಗಳಿಗೆ ಭೇಟಿ ನೀಡಿ ಮುಖಂಡರು ಮತಯಾಚನೆ ಮಾಡಿದರು.