

ಹುಬ್ಬಳ್ಳಿ: ಮುಂಬರುವ ಲೋಕಸಭೆ ಚುನಾವನೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರವಾಗಿ ಪ್ರತಿಕ್ರಿಯಿಸಿರುವ ಮಾಜಿ ಸಿಎಂ, ವಿಧಾನಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ದುರ್ಬಲ ಪಕ್ಷಗಳಿಗೆ ಈ ಮೈತ್ರಿ ಅನಿವಾರ್ಯವಾಗಿದೆ ಎಂದು ಲೇವಡಿಯಾಡಿದ್ದಾರೆ.
ಹುಬ್ಬಳ್ಳಿಯಲ್ಲಿ ಈ ಕುರಿತು ಮಾತನಾಡಿದ ಶೆಟ್ಟರ್ ಅಸಹಾಯಕರು ಒಂದಾಗುವುದು ಸಾಮಾನ್ಯ. ಅದೇ ರೀತಿ ಬಿಜೆಪಿ ಹಾಗೂ ಜೆಡಿಎಸ್ ದುರ್ಬಲ ಸ್ಥಿತಿಯಲ್ಲಿದ್ದು, ಅವರಿಗೆ ಈ ಮೈತ್ರಿ ಅನಿವಾರ್ಯವಾಗಿದೆ.
ಮೈತ್ರಿ ವಿಚಾರ ಅವರಿಗೆ ಬಿಟ್ಟಿದ್ದು, ಇಷ್ಟು ದಿನಗಳ ಕಾಲ ಎರಡು ಪಕ್ಷಗಳ ನಡುವೆ ಪೈಪೋಟಿ ಇತ್ತು. ಈಗ ತಮ್ಮ ತಮ್ಮ ಅನುಕೂಲಕ್ಕೆ ಮೈತ್ರಿ ಮಾಡಿಕೊಳ್ಳುತ್ತಿವೆ. ಮೈತ್ರಿ ಮಾಡಿಕೊಳ್ಳುತ್ತಿರುವ ಈ ಎರಡು ಪಕ್ಷಗಳ ಮೇಲೆ ಜನರಿಗೆ ವಿಶ್ವಾಸ ಹೋಗಿದೆ. ದುರ್ಬಲರಿಗೆ ಈ ಮೈತ್ರಿ ಅನಿವಾರ್ಯವಾಗಿದೆ ಎಂದು ಟೀಕಿಸಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಬಲಗೊಂಡಿದೆ. ಅದ್ಕಕಾಗಿ ಹಲವು ನಾಯಕರು ಇಲ್ಲಿಗೆ ಬರಲು ಸಿದ್ದರಾಗಿದ್ದಾರೆ. ಯಾರೆಲ್ಲಾ ಬರುತ್ತಾರೆ ಎಂದು ಈಗಲೇ ಹೇಳಲು ಸಾಧ್ಯವಿಲ್ಲ. ಮುಂದಿನ ದಿನಗಳಲ್ಲಿ ಈ ಬಗ್ಗ ಸ್ಪಷ್ಟ ಚಿತ್ರಣ ಸಿಗಲಿದೆ. ಕರ್ನಾಟಕ ಅಷ್ಟೇ ಅಲ್ಲದೇ ಇತರೆ ರಾಜ್ಯಗಳಲ್ಲಿಯೂ ಕಾಂಗ್ರೆಸ್ ಬಲಗೊಳ್ಳುತ್ತಿದೆ ಎಂದು ಮಾಜಿ ಸಿಎಂ, ವಿಧಾನಪರಿಷತ್ ಸದ್ಸಯ ಜಗದೀಶ್ ಶೆಟ್ಟರ್ ಹೇಳಿದ್ದಾರೆ.