More

    ಮೈತ್ರಿ ವಿಚಾರ ಇಬ್ರಾಹಿಂ ಅವರಿಂದ ಮುಚ್ಚಿಟ್ಟಿಲ್ಲ: ಕುಮಾರಸ್ವಾಮಿ

    ಬೆಂಗಳೂರು: ಬಿಜೆಪಿಯೊಂದಿಗಿನ ಮೈತ್ರಿಗೆ ಸಂಬಂಧಿಸಿದ ಯಾವುದೇ ವಿವರವನ್ನು ಜೆಡಿಎಸ್ ಅಧ್ಯಕ್ಷ ಸಿ.ಎ.ಇಬ್ರಾಹಿಂ ಅವರಿಂದ ಮುಚ್ಚಿಟ್ಟಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

    ಜೆ.ಪಿ. ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮೈತ್ರಿ ವಿಚಾರದಲ್ಲಿ ಆಗುತ್ತಿರುವ ಬೆಳವಣಿಗೆಗಳನ್ನು ಇಬ್ರಾಹಿಂ ಗಮನಕ್ಕೆ ತರಲಾಗಿದೆ. ಕೇವಲ ಅಲ್ಪಸಂಖ್ಯಾತರಷ್ಟೇ ಅಲ್ಲ ಸಮಸ್ತ ಕರ್ನಾಟಕದ ರಕ್ಷಣೆ ಮಾಡಲು ನಮ್ಮ ಪಕ್ಷ ಬದ್ಧವಾಗಿದೆ. ಎಲ್ಲ ಸಮುದಾಯದ ರಕ್ಷಣೆ ಮಾಡುತ್ತೇವೆ. ಅಲ್ಪಸಂಖ್ಯಾತರ ಬಗ್ಗೆ ಯಾವತ್ತೂ ಅಗೌರವಯುತವಾಗಿ ನಡೆದುಕೊಂಡಿಲ್ಲ ಎಂದು ಹೇಳಿದರು.

    ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಕಾಲು ಹಿಡಿಯುವ ದುರ್ಗತಿ ಜೆಡಿಎಸ್‌ಗೆ ಬಂದಿಲ್ಲ. ನಿಮ್ಮ ರಾಷ್ಟ್ರ ನಾಯಕರು ದೇವೇಗೌಡರ ಕಾಲು ಹಿಡಿಲು ಬಂದಿದ್ದರು ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ತಿರುಗೇಟು ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts