More

    ಜೆಡಿಎಸ್ ಜತೆ ಮೈತ್ರಿಯಿಂದ ಬಿಜೆಪಿಗೆ ಆನೆ ಬಲ

    ರಾಯಚೂರು: ದೇಶಕ್ಕೆ ನರೇಂದ್ರ ಮೋದಿ ಅನಿವಾರ್ಯ ಎನ್ನುವ ಕಾರಣಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಬಿಜೆಪಿ ಜತೆಗೆ ಮೈತ್ರಿ ಮಾಡಿಕೊಂಡಿದ್ದಾರೆ. ಇದರಿಂದಾಗಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಆನೆಬಲ ಬಂದಂತಾಗಿದೆ ಎಂದು ಮಾಜಿ ಸಚಿವ ವಿ.ಸೋಮಣ್ಣ ಹೇಳಿದರು.
    ಸ್ಥಳೀಯ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿ, ದೇವೇಗೌಡರು ತಮ್ಮೆಲ್ಲ ಚಿಂತನೆ, ಆಲೋಚನೆಗಳನ್ನು ಬದಿಗಿಟ್ಟು ಮತ್ತೊಮ್ಮೆ ಮೋದಿಯನ್ನು ಪ್ರಧಾನಿಯನ್ನಾಗಿ ಮಾಡಲು ಮುಂದಾಗಿದ್ದು, ಅದರಲ್ಲೂ ಮೈತ್ರಿಯಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಪಕ್ಷಕ್ಕೆ ಹೆಚ್ಚಿನ ಶಕ್ತಿ ಸಿಗಲಿದೆ ಎಂದರು.
    ಕ್ಷೇತ್ರದ 267 ಬೂತ್‌ಗಳಲ್ಲಿ ಕಾರ್ಯಕರ್ತರು ಸ್ವಯಂ ಪ್ರೇರಣೆಯಿಂದ ಕೆಲಸ ಮಾಡುತ್ತಿದ್ದು, ಕ್ಷೇತ್ರದಲ್ಲಿ ಬಿಜೆಪಿ ಗೆಲುವು ನಿಶ್ಚಿತವಾಗಿದೆ. ಕ್ಷೇತ್ರದ ಜನರ ಬಹುದಿನದ ಬೇಡಿಕೆಯಾಗಿರುವ ಏಮ್ಸ್‌ನ್ನು ತಂದೇ ತರುತ್ತೇವೆ. ಈ ನಿಟ್ಟಿನಲ್ಲಿ ಪಕ್ಷ ಮುಂದಿನ ದಿನಗಳಲ್ಲಿ ಕೆಲಸ ಮಾಡಲಿದೆ.
    ತುಮಕೂರಿಗೆ ಬಂದಾಗ ಸೋಮಣ್ಣ ಕ್ಷೇತ್ರದ ಹೊರಗಿನವರು ಎಂದು ಸಿಎಂ ಸಿದ್ದರಾಮಯ್ಯ ಮಾತನಾಡಿದ್ದರು. ಆದರೆ ರಾಯಚೂರು ಕ್ಷೇತ್ರದಲ್ಲಿ ಕ್ಷೇತ್ರದ ಹೊರಗಿನ ನಿವೃತ್ತ ಐಎಎಸ್ ಅಕಾರಿಯನ್ನು ತಂದು ನಿಲ್ಲಿಸಿರುವುದರ ಬಗ್ಗೆ ಏನೂ ಹೇಳುತ್ತಾರೆ. ತುಮಕೂರಿನೊಂದಿಗೆ ನನಗೆ ಅವಿನಾಭವ ಸಂಬಂಧವಿದ್ದು, ಕನಿಷ್ಠ ಒಂದು ಲಕ್ಷ ಮತಗಳ ಅಂತರಿಂದ ಗೆಲುವು ಸಾಸುತ್ತೇನೆ.
    ಪಕ್ಷ ಹಿರಿಯ ನಾಯಕ ಶ್ರೀನಿವಾಸ ಪ್ರಸಾದ ನಿಧನದಿಂದ ಪಕ್ಷಕ್ಕೆ ತುಂಬಲಾರದ ನಷ್ಟವುಂಟಾಗಿದ್ದು, ಅವರ ಕುಟುಂಬಕ್ಕೆ ದೇವರು ನೋವು ಭರಿಸುವ ಶಕ್ತಿ ನೀಡಲಿ ಎಂದು ಕೋರುತ್ತೇನೆ ಎಂದು ವಿ.ಸೋಮಣ್ಣ ಹೇಳಿದರು.
    ಈ ಸಂದರ್ಭದಲ್ಲಿ ನಗರ ಶಾಸಕ ಡಾ.ಶಿವರಾಜ ಪಾಟೀಲ್, ಮಾಜಿ ಶಾಸಕ ಕೆ.ಶಿವನಗೌಡ ನಾಯಕ, ಮಾಜಿ ಎಂಎಲ್ಸಿ ಎನ್.ಶಂಕ್ರಪ್ಪ, ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ, ಪದಾಕಾರಿಗಳಾದ ರಾಘವೇಂದ್ರ ಉಟ್ಕೂರು, ಆಂಜಿನೇಯ ಕಡಗೋಲ, ರಾಜಕುಮಾರ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts