

ಚಿಕ್ಕಮಗಳೂರು: ಎಸ್ಸಿ, ಎಸ್ಟಿ ಸಮುದಾಯಗಳ ಕಾರ್ಯ ಚಟುವಟಿಕೆಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅಧ್ಯಯನ ಸಂಸ್ಥೆಗೆ ಜಾಗವನ್ನು ಮಂಜೂರು ಮಾಡಬೇಕು ಎಂದು ಸಂಸ್ಥೆಯ ಅಧ್ಯಕ್ಷ ಹಾಗೂ ಮಾಜಿ ಸಚಿವ ಬಿ.ಬಿ. ನಿಂಗಯ್ಯ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.
ನಗರದ ಪ್ರೆಸ್‌ಕ್ಲಬ್‌ನಲ್ಲಿ ಗುರುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಈ ಸಂಬAಧ ಚಿಕ್ಕಮಗಳೂರು ಕ್ಷೇತ್ರದ ಶಾಸಕ ಎಚ್.ಡಿ. ತಮ್ಮಯ್ಯ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ನಿಯೋಗದ ಮೂಲಕ ಭೇಟಿ ಮಾಡಿ ಆಗ್ರಹಿಸಲಾಗುವುದು ಎಂದು ಹೇಳಿದರು.
ಎಸ್ಸಿ, ಎಸ್ಟಿ. ಸಮುದಾಯಗಳ ಶ್ರೇಯೋಭಿವೃದ್ಧಿ, ಶೈಕ್ಷಣಿಕ, ಧಾರ್ಮಿಕ, ಸಾಮಾಜಿಕ, ಆರ್ಥಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಶೋಷಿತ ವರ್ಗಗಳ ಪರವಾಗಿ ಜಾಗೃತಿ ಮೂಡಿಸುವ ಹಲವಾರು ಉz್ದೆÃಶಗಳೊಂದಿಗೆ ಕೆಲವು ಸಮಾನ ಮನಸ್ಕ ಮುಖಂಡರು ಸೇರಿ ಸುಮಾರು ೧೦ ವರ್ಷಗಳ ಹಿಂದೆ ಡಾ. ಬಿ.ಆರ್. ಅಂಬೇಡ್ಕರ್ ಅಧ್ಯಯನ ಸಂಸ್ಥೆಯನ್ನು ಮೂಡಿಗೆರೆಯಲ್ಲಿ ಸ್ಥಾಪನೆ ಮಾಡಲಾಯಿತು ಎಂದರು.
ಚಿಕ್ಕಮಗಳೂರು ಜಿಲ್ಲೆಯನ್ನು ಕೇಂದ್ರವಾಗಿಕೊAಡು ಹಾಸನ, ಮಡಿಕೇರಿ, ಶಿವಮೊಗ್ಗ ಜಿಲ್ಲೆಯ ವ್ಯಾಪ್ತಿಯನ್ನು ಈ ಸಂಸ್ಥೆ ಹೊಂದಿದೆ. ಸಹಕಾರ ಇಲಾಖೆಯ ಕಾಯ್ದೆ ಅಡಿ ನೋಂದಾಯಿಸಿದ ಸಂಸ್ಥೆಯಾಗಿದೆ. ನಗರ ಸಮೀಪದ ತೇಗೂರಿನಲ್ಲಿ ಗುರುತಿಸಿಕೊಂಡಿರುವ ಸರ್ಕಾರಿ ಜಾಗದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಮತ್ತು ಭಗವಾನ್ ಬುದ್ಧರ ಮೂರ್ತಿ ಪ್ರತಿಷ್ಠಾಪನೆ ಮಾಡಿ ಬುದ್ಧ ವಿಹಾರ ಆರಂಭಿಸಲಾಗಿದ್ದು, ಇದೇ ಸ್ಥಳದಲ್ಲಿ ಅಂಬೇಡ್ಕರ್, ಬಸವೇಶ್ವರ ಹಾಗೂ ಬುದ್ಧ ಪೂರ್ಣಿಮಾ ಕಾರ್ಯಕ್ರಮವನ್ನು ನಡೆಸಿಕೊಂಡು ಬರಲಾಗಿದೆ. ಈ ಸ್ಥಳವನ್ನು ಸಂಸ್ಥೆಗೆ ನೀಡಬೇಕೆಂದು ರಾಜ್ಯ ಸರ್ಕಾರವನ್ನು ಆಗ್ರಹಿಸುತ್ತವೆ ಎಂದು ಹೇಳಿದರು.
ಸಂಸ್ಥೆ ಮುಂದಿನ ದಿನಗಳಲ್ಲಿ ಹಲವಾರು ಕಾರ್ಯ ಚಟುವಟಿಕೆ ನಡೆಸುವ ಉz್ದÉÃಶದಿಂದ ತರಬೇತಿ ಸಮಿತಿ, ಎಸ್ಸಿ ಎಸ್ಟಿ ದೌರ್ಜನ್ಯ ತಡೆ ಸಮಿತಿ, ಅಪಮಾನಕ್ಕೆ ಒಳಗಾದ ಜನರಿಗೆ ತಿಳುವಳಿಕೆಗಾಗಿ ಧಾರ್ಮಿಕ ಸಮಿತಿ, ಸಾಂಸ್ಕೃತಿಯ ಸಮಿತಿ ರಚನೆ ಮಾಡುವ ಉz್ದÉÃಶ ಹೊಂದಲಾಗಿದೆ. ಮುಂದಿನ ದಿನಗಳಲ್ಲಿ ಸದಸ್ಯತ್ವ ಆಂದೋಲನ ಮಾಡಲು ಉz್ದÉÃಶಗಳಾಗಿದೆ ಎಂದು ತಿಳಿಸಿದರು.
ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಜಿಲ್ಲೆಯ ಸರ್ಕಾರಿ ಪ್ರೌಢಶಾಲೆಗಳಲ್ಲಿ ವ್ಯಾಸಂಗ ಮಾಡಿ ಅತಿ ಹೆಚ್ಚು ಅಂಕಗಳನ್ನು ಪಡೆದು ಜಿಲ್ಲೆಗೆ ಟಾಪರ್ ಆಗಿರುವ ಎಲ್ಲಾ ಜನಾಂಗದ ವಿದ್ಯಾರ್ಥಿ ವಿದ್ಯಾರ್ಥಿನಿಯರನ್ನು ಸನ್ಮಾನಿಸಿ ಗೌರವಿಸುವ ಮೂಲಕ ಪ್ರತಿಭಾ ಪುರಸ್ಕಾರ ನೀಡಲು ಉz್ದÉÃಶಿಸಲಾಗಿದೆ ಎಂದರು.
ಸುದ್ದಿಗೋಷ್ಟಿಯಲ್ಲಿ ಅಧ್ಯಯನ ಸಂಸ್ಥೆ ಪ್ರಮುಖರಾದ ನಿಖಿಲ್ ಚಕ್ರವರ್ತಿ, ಹರಿಯಪ್ಪ, ಹರೀಶ್ ಮಿತ್ರ, ಬಿ.ಎಂ.ರಘು, ರಘು, ರಮೇಶ್, ಲಕ್ಷö್ಮಣ ಮತ್ತಿತರರಿದ್ದರು.