More

    ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆ; ಎಂಪಿ ಟಿಕೆಟ್ ಹಂಚಿಕೆ ವರಿಷ್ಠರಿಗೆ ಬಿಟ್ಟಿದ್ದು

    ಧಾರವಾಡ: ಎಂಪಿ ಟಿಕೆಟ್ ಹಂಚಿಕೆ ವರಿಷ್ಠರಿಗೆ ಬಿಟ್ಟಿದ್ದು ಎಂದು ಕ್ಷೇತ್ರ ವೀಕ್ಷಕಿ ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
    ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಗೆ ಸ್ಪರ್ಧೆ ಬಯಸಿ ಅರ್ಜಿಗಳು ಸಲ್ಲಿಕೆಯಾಗಿದ್ದು, ಅವುಗಳನ್ನು ಗೌಪ್ಯವಾಗಿ ಇಟ್ಟುಕೊಳ್ಳಬೇಕಾಗುತ್ತದೆ. ಟಿಕೆಟ್ ವಿಚಾರವಾಗಿ ಜಿಲ್ಲೆಯ ಎಲ್ಲ ಮುಖಂಡರನ್ನು ಒಳಗೊಂಡು ಜ. 10ರಂದು 2ನೇ ಹಂತದ ಸಭೆ ಮಾಡಲಾಗುವುದು. 10- 12 ಪ್ರಭಾವಿಗಳು ಟಿಕೆಟ್ ಆಕಾಂಕ್ಷಿಗಳಾಗಿದ್ದು, ಅದರಲ್ಲಿ ಅಳೆದು ತೂಗಿ ಆಯ್ಕೆ ಮಾಡಲಾಗುವುದು. ಬೇರೆ ಪಕ್ಷದವರು ಕಾಂಗ್ರೆಸ್‌ಗೆ ಬಂದರೆ ಸ್ವಾಗತ ಮಾಡುತ್ತೇವೆ. ಆದರೆ, ಟಿಕೆಟ್ ಕೊಡುವ ವಿಚಾರ ವರಿಷ್ಠರಿಗೆ ಬಿಟ್ಟಿದ್ದು ಎಂದರು.
    ಹುಬ್ಬಳ್ಳಿಯ ಕರಸೇವಕರ ಬಂಧನ ಕುರಿತು ಪ್ರತಿಕ್ರಿಯಿಸಿದ ಅವರು, ಈಗಾಗಲೇ ಸಿಎಂ ಈ ಬಗ್ಗೆ ಮಾತನಾಡಿದ್ದಾರೆ ಎಂದರು.
    ಬೆಳಗಾವಿಯ ಅಂಗನವಾಡಿ ಕಾರ್ಯಕರ್ತೆ ಮೇಲೆ ಹಲ್ಲೆ ಮೈದುನ ಮತ್ತು ಅತ್ತಿಗೆ ನಡುವಿನ ಗಲಾಟೆಗೆ ಸಂಬAಽಸಿದ್ದು. ಅಂಗನವಾಡಿ ಕಾರ್ಯಕರ್ತೆ ಜಗಳ ಬಿಡಿಸಲು ಹೋಗಿದ್ದಳು. ಮಧ್ಯಸ್ಥಿಕೆ ಮಾಡಲು ಹೋಗಿದ್ದ ವೇಳೆ ಕಾರ್ಯಕರ್ತೆ ಮೇಲೆ ಹಲ್ಲೆಯÁಗಿದೆ. ಇದು ಕೌಟುಂಬಿಕ ಕಲಹ. ಈ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ. ಪ್ರಕರಣ ತನಿಖಾ ಹಂತದಲ್ಲಿರುವುದರಿAದ ಜವಾಬ್ದಾರಿ ಸ್ಥಾನದಲ್ಲಿದ್ದುಕೊಂಡು, ಬೇಜವಾಬ್ದಾರಿ ಹೇಳಿಕೆ ನೀಡುವುದು ತಪ್ಪು ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts