More

    ಕೆಂಪು ವಲಯದಲ್ಲಿ ಆರ್ಥಿಕ ಚಟುವಟಿಕೆಗೆ ಅವಕಾಶ ಕೊಡಿ

    ಬೆಂಗಳೂರು: ಲಾಕ್‌ಡೌನ್‌ 4.0 ಅವಧಿಯಲ್ಲಿ ಹಸಿರು, ಕಿತ್ತಳೆ ವಲಯಗಳಂತೆ ಕೆಂಪು ವಲಯದಲ್ಲೂ ಆರ್ಥಿಕ ಚಟುವಟಿಕೆಗೆ ಅನುಮತಿ ನೀಡಬೇಕೆಂಬ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ತಿಳಿಸಿದ್ದಾರೆ.
    ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಶುಕ್ರವಾರ ನಡೆದ ಸಭೆ ಬಳಿಕ ಡಾ.ಅಶ್ವತ್ಥನಾರಾಯಣ ಸುದ್ದಿಗಾರರ ಜತೆ ಮಾತನಾಡಿದರು.

    ಲಾಕ್‌ಡೌನ್‌ 4.0 ಕುರಿತು ಕೇಂದ್ರ ಸರ್ಕಾರದ ಮುಂದಿನ ಸೂಚನೆಯನ್ನು ಎದುರು ನೋಡುತ್ತಿದ್ದೇವೆ. ರಾಜ್ಯದಲ್ಲಿ ಅದರ ಅನುಷ್ಠಾನದ ಬಗ್ಗೆ ಮುಖ್ಯಮಂತ್ರಿ ನಿರ್ಧರಿಸಲಿದ್ದಾರೆ. ಕಂಟೈನ್ಮೆಂಟ್‌ ವಲಯದಲ್ಲಿ ಮಾತ್ರ ಚಟುವಟಿಕೆ ಸ್ಥಗಿತಗೊಳಿಸಿ, ಉಳಿದ ಭಾಗಗಳಿಗೆ ವಿನಾಯಿತಿ ನೀಡಬೇಕು. ಕೆಂಪು ವಲಯದಲ್ಲೂ ಆರ್ಥಿಕ ಚಟುವಟಿಕೆಗಳಿಗೆ ಅನುಮತಿ ನೀಡಬೇಕು ಎಂಬುದೇ ನಮ್ಮ ಪ್ರಮುಖ ಬೇಡಿಕೆಯಾಗಿದೆ ಎಂದರು.
    ಸಹಜ ಸ್ಥಿತಿಗೆ ಮರಳುವ ಸಮಯ:

    ಇದನ್ನೂ ಓದಿ: ಅನ್ಯ ರಾಜ್ಯಗಳಲ್ಲಿರುವ ಕನ್ನಡಿಗರು ಬದುಕಿದರೆ ಅಲ್ಲೇ ಬದುಕಲಿ, ಸತ್ತರೆ ಅಲ್ಲೇ ಸಾಯಲಿ!

    ಕೊರೊನಾ ಸೋಂಕು ತಡೆಗೆ ಈಗಾಗಲೇ 2 ತಿಂಗಳು ಸಮಯ ಲಾಕ್​ಡೌನ್​ ಮಾಡಲಾಗಿದೆ. ಜನಜೀವನ ಸಹಜಸ್ಥಿತಿಗೆ ಮರಳುವ ಸಮಯ ಬಂದಿದೆ. ಆರ್ಥಿಕತೆ ಬಗ್ಗೆಯೂ ಗಮನಹರಿಸುವ ಅನಿವಾರ್ಯತೆ ಇರುವುದರಿಂದ ವೈರಾಣು ಹಾಗೂ ಜನಜೀವನದ ನಡುವೆ ಸಮತೋಲನ ಕಾಯ್ದುಕೊಂಡು, ಅದರೊಂದಿಗೆ ಬದುಕುವುದನ್ನು ಕಲಿಯಬೇಕು. ಈ ಲಾಕ್‌ಡೌನ್‌ ಅವಧಿಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಲಾಗಿದ್ದು, ಮುಂದಿನ ಪರಿಸ್ಥಿತಿ ನಿಭಾಯಿಸಲು ಸನ್ನದ್ಧರಾಗಿದ್ದೇವೆ ಎಂದು ಹೇಳಿದರು.

    ರೈತರ ಹಿತ ಕಾಯಲಾಗಿದೆ: ಎಪಿಎಂಸಿ ತಿದ್ದುಪಡಿ ಕಾಯ್ದೆಯಿಂದ ರೈತರಿಗೆ ಯಾವುದೇ ತೊಂದರೆಯಾಗುವುದಿಲ್ಲ, ಎಪಿಎಂಸಿ ಸಮಿತಿಗಳಿಗೂ ಧಕ್ಕೆ ಆಗುವುದಿಲ್ಲ. ಕೃಷಿ ಉತ್ಪನ್ನಗಳನ್ನು ರೈತರು ನೇರವಾಗಿ ಮಾರಾಟ ಮಾಡಲು ಅವಕಾಶ ದೊರೆಯಲಿದೆ. ರೈತರ ಆದಾಯ ದ್ವಿಗುಣಗೊಳಿಸುವ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದರು.

    ಇದನ್ನೂ ಓದಿ: VIDEO| ಭೂಗತ ಲೋಕಕ್ಕೆ ಮುತ್ತಪ್ಪ ರೈ ಬಂದಿದ್ದೇಕೆ?: ಹಿಂದೆ ನೀಡಿದ್ದ ಸಂದರ್ಶನದಲ್ಲಿ ಕುತೂಹಲಕಾರಿ ವಿಚಾರಗಳು!

    ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ: ಆಶಾ ಕಾರ್ಯಕರ್ತರಿಗೆ ಉತ್ತೇಜನ ನೀಡುವ ಉದ್ದೇಶದಿಂದ ಸಹಕಾರ ಇಲಾಖೆ ಮೂಲಕ‌ ಅವರೆಲ್ಲರಿಗೂನ ಹೆಚ್ಚುವರಿ 3 ಸಾವಿರ ರೂಪಾಯಿ ಪ್ರೋತ್ಸಾಹಧನ ನೀಡಲಾಗುವುದು. ಇದು ಸಿಎಂ ಯಡಿಯೂರಪ್ಪ ಕೈಗೊಂಡಿರುವ ಅತ್ಯುತ್ತಮ ನಿರ್ಧಾರ. ಇದಕ್ಕಾಗಿ ಅವರನ್ನು ಅವರನ್ನು ಅಭಿನಂದಿಸುವುದಾಗಿ ಹೇಳಿದರು.

    ಇಬ್ರಾಹಿಂ ಬೇಡಿಕೆ ಸರಿಯಲ್ಲ: ರಂಜಾನ್‌ ಹಬ್ಬದಂದು ಸಾಮೂಹಿಕ ನಮಾಜ್‌ ಮಾಡಲು ಅವಕಾಶ ನೀಡಬೇಕು ಎಂಬ ಕಾಂಗ್ರೆಸ್ ಮುಖಂಡ ಸಿ.ಎಂ. ಇಬ್ರಾಹಿಂ ಅವರ ಬೇಡಿಕೆ ಸರಿಯಲ್ಲ. ಯಾವುದೇ ಕಾರಣಕ್ಕೂ ಇದಕ್ಕೆ ಅವಕಾಶ ಕೊಡದಿರಲು ಸರ್ಕಾರ ನಿಶ್ಚಯಿಸಿದೆ. ಜವಾಬ್ದಾರಿಯುತ ಸ್ಥಾನದಲ್ಲಿ ಇರುವವರು ಈ ರೀತಿ ಬೇಡಿಕೆ ಸಲ್ಲಿಸುವುದು ಸಮಂಜಸವಲ್ಲ. ಪರಿಸ್ಥಿತಿಯ ಲಾಭ ಪಡೆದು, ಭಾವನಾತ್ಮಕ ವಿಚಾರ ತಂದು ರಾಜಕೀಯ ಮಾಡುವುದು ತಪ್ಪು. ಜನರ ಆರೋಗ್ಯ ಗಮನದಲ್ಲಿಟ್ಟುಕೊಂಡು ಸೂಕ್ತ ಬೇಡಿಕೆ ಸಲ್ಲಿಸಲಿ ಎಂದು ಹೇಳಿದರು.

    ಕ್ವಾರಂಟೈನ್ ನಿಂದ ತಪ್ಪಿಸಿಕೊಂಡು ಬಂದು ಪತ್ನಿಯ ಕೈ ಕತ್ತರಿಸಿದ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts