

ನವದೆಹಲಿ: ಕೆಲ ರಾಜ್ಯಗಳಲ್ಲಿ ಕರೊನಾ ಇನ್ನಿಲ್ಲದ ವೇಗದಲ್ಲಿ ವ್ಯಾಪಿಸುತ್ತಿದೆ. ಹೀಗಾಗಿ ಹಲವೆಡೆ ಮತ್ತೆ ಲಾಕ್ಡೌನ್, ರಾತ್ರಿ ಕರ್ಫ್ಯೂ ಹಾಗೂ ಶಾನಿವಾರ, ಭಾನುವಾರಗಳಂದು ಕಂಪ್ಲೀಟ್ ಬಂದ್ ಘೋಷಿಸಿವೆ.
ಇದರ ನಡುವೆ, ಅಂತರ ರಾಜ್ಯಗಳ ಮಧ್ಯ ಜನ ಹಾಗೂ ವಾಹನಗಳ ಓಡಾಟಕ್ಕೆ ಯಾವುದೇ ನಿರ್ಬಂಧ ವಿಧಿಸದಂತೆ ಕೇಂದ್ರ ಸರ್ಕಾರ ರಾಜ್ಯಗಳಿಗೆ ಸೂಚಿಸಿದೆ. ಹಂತಹಂತವಾಗಿ ಎಲ್ಲ ನಿರ್ಬಂಧಗಳನ್ನು ಸಡಿಲಿಸಲು ಮುಂದಾಗಿದೆ.
ಸೆಪ್ಟಂಬರ್ 1ರ ನಂತರ ಶಾಲಾ- ಕಾಲೇಜು ಆರಂಭ ಸೇರಿ ಮತ್ತಷ್ಟು ಚಟುವಟಿಕೆಗಳಿಗೆ ಅವಕಾಶ ದೊರೆಯುವ ಸಾಧ್ಯತೆಗಳಿವೆ. ಹೀಗಾಗಿ ಪ್ರಾಯೋಗಿಕವಾಗಿ ಹಂತಹಂತವಾಗಿ ಮೆಟ್ರೋ ರೈಲು ಸಂಚಾರ ಆರಂಭಿಸಲು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ.
ಮೆಟ್ರೋ ಸಂಚಾರವನ್ನು ಮತ್ತೆ ಆರಂಭಿಸಲು ಅವಕಾಶ ನೀಡುವಂತೆ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಕೇಂದ್ರಕ್ಕೆ ಕೋರಿಕೆ ಸಲ್ಲಿಸಿದ್ದಾರೆ. ಪ್ರಾಯೋಗಿಕ ನೆಲೆಯಲ್ಲಿ ಸಂಚರಿಸಲು ಅನುಮತಿ ನೀಡುವಂತೆ ಕೇಳಿದ್ದಾರೆ.
ದೆಹಲಿಯಲ್ಲಿ ಕೋವಿಡ್ ಪರಿಸ್ಥಿತಿ ನಿಯಂತ್ರಣದಲ್ಲಿ ಹೊಸ ಪ್ರಕರಣಗಳ ಸಂಖ್ಯೆಯೂ ಇಳಿಮುಖವಾಗಿ ಕೇವಲ 11,545 ಸಕ್ರಿಯ ಪ್ರಕರಣಗಳಷ್ಟೇ ಇವೆ ಎಂದು ಸಿಎಂ ಮಾಹಿತಿ ನೀಡಿದ್ದಾರೆ.