ಬೆಂಗಳೂರು: ಕಾಂತಾರ ಸಿನಿಮಾ ಪ್ರೇಕ್ಷಕರ ಮನಸ್ಸನ್ನು ಗೆಲ್ಲುವುದು ಮಾತ್ರವಲ್ಲ ಭೂತಾರಾಧನೆ ಮಾಡುವ ದೈವನರ್ತಕರಿಗೆ ಮಾಸಾಶನ ಸಿಗುವಂತೆಯೂ ಮಾಡಿದೆ ಎಂದರೆ ತಪ್ಪಾಗದು.

ಹೌದು, ಇದೀಗ 60 ವರ್ಷ ಮೇಲ್ಪಟ್ಟ ದೈವನರ್ತಕರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಪ್ರತಿ ತಿಂಗಳು ಮಾಸಾಶನ ನೀಡಲು ನಿರ್ಧರಿಸಲಾಗಿದೆ. ದೈವ ನರ್ತನ ಮಾಡುವ ಕಲಾವಿದರ ಹಿತದೃಷ್ಟಿಯನ್ನು ಗಮನದಲ್ಲಿ ಇಟ್ಟುಕೊಂಡು ರೂ. 2000/-ವನ್ನು ಪ್ರತಿ ತಿಂಗಳು ಮಾಸಾಶನದ ರೂಪದಲ್ಲಿ ನೀಡಲಾಗುವುದು ಎಂದು ಸಚಿವ ಸುನಿಲ್ ಕುಮಾರ್ ಕಾರ್ಕಳ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಕಾಮೆಂಟ್ ವಿಭಾಗದಲ್ಲಿ ಈ ಬಗ್ಗೆ ಎಲ್ಲರು ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ಇತ್ತೀಚೆಗೆ ಬಿಡುಗಡೆಯಾದ ಕಾಂತಾರ ಸಿನೆಮಾ ಅನೇಕರಿಗೆ ತುಳು ನಾಡು ಸಂಸ್ಕೃತಿಯ ಬಗ್ಗೆ ಜಾಗೃತಿ ಮೂಡಿಸಿದೆ. ಕಾಂತಾರ ಬಿಡುಗಡೆಯಾದ ಬೆನ್ನಲ್ಲೇ ಈ ನಿರ್ಧಾರ ಹೊರಬಿದ್ದಿರುವುದು ಕುತೂಹಲಕಾರಿ ಸಂಗತಿಯಾಗಿದೆ.
ಕರ್ನಾಟಕ ಸಂಸ್ಕೃತಿ,ಆಚರಣೆಗಳ ನೆಲೆಬೀಡು. ಅದರಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಭೂತಾರಾಧನೆಯು ಸಹ ಒಂದು.ಭೂತಾರಾಧನೆಯಲ್ಲಿ ದೈವ ನರ್ತನ ಮಾಡುವ ಕಲಾವಿದರ ಹಿತದೃಷ್ಟಿಯನ್ನು ಗಮನಿಸಿ,60 ವರ್ಷ ತುಂಬಿದ ದೈವನರ್ತಕರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಾಹೆಯಾನ 2 ಸಾವಿರ ಮಾಸಾಶನ ನೀಡಲು ನಿರ್ಧರಿಸಲಾಗಿದೆ. @BJP4Karnataka pic.twitter.com/svxnkl4zju
— Sunil Kumar Karkala (@karkalasunil) October 20, 2022