More

    ಡಿ.1ರಿಂದ ಭತ್ತ, ರಾಗಿ ಮತ್ತು ಜೋಳ ಖರೀದಿ ನೋಂದಣಿಗೆ ಅವಕಾಶ

    ಬಳ್ಳಾರಿ : ಜಿಲ್ಲೆಯಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಭತ್ತ, ರಾಗಿ ಮತ್ತು ಜೋಳ ಖರೀದಿ ಕೇಂದ್ರಗಳು ತೆರೆದಿದ್ದು, ರೈತರು ಬೆಳೆದ ಬೆಳೆಗಳನ್ನು ನೋಂದಾಯಿಸಿಕೊಳ್ಳಲು ಡಿ.1ರಿಂದ ಅವಕಾಶ ಕಲ್ಪಿಸಲಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಮೊಹಮ್ಮದ್ ಜುಬೇರ ತಿಳಿಸಿದರು.

    ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ 2023-24 ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆ ಕಾರ್ಯಾಚರಣೆಯ ಜಿಲ್ಲಾ ಟಾಸ್ಕ್‌ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಈಗಾಗಲೇ ಭತ್ತ ಖರೀದಿ ಕೇಂದ್ರಗಳು ಆರಂಭವಾಗಿವೆ. ಬೆಂಬಲ ಬೆಲೆಯಲ್ಲಿ ರಾಗಿ ಮತ್ತು ಜೋಳ ಬೆಳೆಗಳನ್ನು ಖರೀದಿಸಲು ರೈತರು ಡಿ.1 ರಿಂದ ಎಲ್ಲ ರೈತ ಸಂಪರ್ಕ ಕೇಂದ್ರಗಳಲ್ಲಿ ಮತ್ತು ಖರೀದಿ ಕೇಂದ್ರವಿರುವ ಎಪಿಎಂಸಿಯಲ್ಲಿ ನೋಂದಣಿ ಮಾಡಿಕೊಳ್ಳಬೇಕು. ಖರೀದಿ ಪ್ರಕ್ರಿಯೆಯನ್ನು 2024 ರ ಜ.1 ರಿಂದ ಆರಂಭವಾಗಿ ಮಾರ್ಚ್ ಅಂತ್ಯದವರೆಗೆ ಖರೀದಿ ಮಾಡಲಾಗುತ್ತದೆ. ಅದಕ್ಕೆ ಬೇಕಾದ ನೋಂದಣಿ ಮತ್ತು ಖರೀದಿ ಸಿದ್ಧತೆ, ಸಂಗ್ರಹಕ್ಕೆ ಗೋಧಾಮುಗಳನ್ನು ಸಿದ್ದಪಡಿಸಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

    ವಿವಿಧ ಬೆಳೆಗಳಿಗೆ ಬೆಲೆ ನಿಗದಿ
    2023-24ನೇ ಸಾಲಿಗೆ ಎಂ.ಎಸ್.ಪಿ ಕಾರ್ಯಾಚರಣೆಗೆ ಖರೀದಿ ಕೇಂದ್ರಗಳಾಗಿ ಜಿಲ್ಲೆಯಲ್ಲಿ ಬಳ್ಳಾರಿಯ ಎಪಿಎಂಸಿ ಯಾರ್ಡ್, ಕಂಪ್ಲಿಯ ಎಪಿಎಂಸಿ ಯಾರ್ಡ್, ಸಂಡೂರು ಎಪಿಎಂಸಿ ಯಾರ್ಡ್, ಸಿರಗುಪ್ಪ ಎಪಿಎಂಸಿ ಯಾರ್ಡ್‌ನಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ತಿಳಿಸಿದರು.

    2023-24ನೇ ಸಾಲಿಗೆ ಖರೀದಿಸುವ ಕೃಷಿ ಉತ್ಪನ್ನಗಳಾದ ಸಾಮಾನ್ಯ ಭತ್ತಕ್ಕೆ ಪ್ರತಿ ಕ್ವಿಂಟಾಲ್‌ಗೆ 2183 ರೂ., ಗ್ರೇಡ್ ಎ-ಭತ್ತಕ್ಕೆ 2203 ರೂ., ರಾಗಿಗೆ 3846 ರೂ., ಹೈಬ್ರೀಡ್ ಬಿಳಿ ಜೋಳಕ್ಕೆ 3180 ರೂ., ಮಾಲ್ದಂಡಿ ಬಿಳಿ ಜೋಳಕ್ಕೆ 3225 ರೂ. ಬೆಂಬಲ ಬೆಲೆ ಘೋಷಿಸಲಾಗಿದೆ.

    ನಿರ್ಧರಿಸಿರುವ ಎಪಿಎಂಸಿ ಸ್ಥಳದಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಬೇಕು. ಪ್ರತಿ ಖರೀದಿ ಕೇಂದ್ರಗಳಿಗೆ ನುರಿತ ಗುಣಮಟ್ಟ ಪರೀಕ್ಷಕರನ್ನು ನೇಮಿಸಬೇಕು ಹಾಗೂ ಗುಣಮಟ್ಟ ಪರಿಶೀಲನೆ ಹೆಸರಲ್ಲಿ ರೈತರಿಗೆ ಯಾವುದೇ ಅನಾನುಕೂಲವಾಗದಂತೆ ಎಚ್ಚರವಹಿಸಬೇಕು ಎಂದು ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

    • ಖರೀದಿ ಕೇಂದ್ರದಲ್ಲಿ ಸೌಲಭ್ಯ ಒದಗಿಸಿ
      ಖರೀದಿ ಕೇಂದ್ರದ ಕೊಠಡಿ, ಖರೀದಿ ಪ್ರಾಂಗಣ, ಬೆಳಕು, ಕುಡಿಯುವ ನೀರು, ನೆರಳು, ರೈತ ವಿಶ್ರಾಂತಿ, ತುರ್ತು ಟಾರ್ಪಲಿನ್, ರಕ್ಷಣಾ ವ್ಯವಸ್ಥೆ ಮಾಡುವ ಜವಾಬ್ದಾರಿ ಹೊಂದಬೇಕು. ಗಾಳಿ, ಮಳೆ, ಬೆಳಕು ಮುಂತಾದ ಪ್ರಕೃತಿ ಅಥವಾ ಮಾನವ ವಿಕೋಪಗಳಿಂದ ಕೃಷಿ ಉತ್ಪನ್ನ ರಕ್ಷಿಸಲು ಅವಶ್ಯವಿರುವ ಹೊದಿಕೆ, ಹಾಸುಗಳು, ರಕ್ಷಣಾ ಸಾಮಗ್ರಿಗಳನ್ನು ಹಾಗೂ ಸ್ವಂತ ಕೇಂದ್ರಗಳಲ್ಲಿ ಎಲ್ಲ ಮೂಲ ಸೌಕರ್ಯಗಳನ್ನು ಮಾಡುವ ಜವಾಬ್ದಾರಿಯನ್ನು ಎಪಿಎಂಸಿ ಅಧಿಕಾರಿಗಳು ವಹಿಸಬೇಕು ಎಂದು ತಿಳಿಸಿದರು.
    • ಕೃಷಿ ಇಲಾಖೆಯಿಂದ ಈಗಾಗಲೇ ಜಾರಿಗೊಳಿಸಿರುವ ಫ್ರೂಟ್ಸ್ ದತ್ತಾಂಶದಲ್ಲಿರುವ ರೈತರ ನೋಂದಣಿ ಮಾಡಿದ ಗುರುತಿನ ಸಂಖ್ಯೆಯ ಮಾಹಿತಿಯನ್ನು ಪಡೆದು, ಕೃಷಿ ಇಲಾಖೆ ಒದಗಿಸಿರುವ ಸರಾಸರಿ ಬೆಳೆ ಮಾಹಿತಿಗಳನ್ವಯ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ನೋಂದಾಯಿಸಿ ರೈತರಿಂದ ಬೆಳೆಗಳನ್ನು ಖರೀದಿಸುವಂತೆ ಸೂಚಿಸಿದರು.
    • ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕಿ ಸಕೀನಾ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಸಂತೋಷ್ ಸಪ್ಪಂಡಿ, ಕೃಷಿ ಇಲಾಖೆ ಉಪ ನಿರ್ದೇಶಕ ದಯಾನಂದ, ಕೆಎಫ್‌ಸಿಎಸ್‌ಸಿಯ ಜಿಲ್ಲಾ ವ್ಯವಸ್ಥಾಪಕರು, ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿ ನಿಯಮಿತದ ಶಾಖಾ ವ್ಯವಸ್ಥಾಪಕರು, ಎಪಿಎಂಸಿಯ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts