ವಯನಾಡು ಭೂಕುಸಿತ ದುರಂತ; ಸಂತ್ರಸ್ತರ ನೆರವಿಗೆ ಮುಂದಾದ ಸ್ಟೈಲಿಶ್​​ಸ್ಟಾರ್ ಅಲ್ಲು ಅರ್ಜುನ್

ಹೈದರಾಬಾದ್​​: ಕೇರಳದ ವಯನಾಡು ಜಿಲ್ಲೆಯಲ್ಲಿ ಉಂಟಾದ ಭೂಕುಸಿತದಿಂದ ನೂರಾರು ಜನರು ಮೃತಪಟ್ಟಿದ್ದಾರೆ. ಸಾವಿರಾರು ಜನರು ಗಾಯಗೊಂಡಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ವಯನಾಡು ದುರಂತದ ಸಂತ್ರಸ್ತರ ನೆರವಿಗೆ ಸಿನಿಮಾ, ರಾಜಕೀಯ, ಕ್ರೀಡೆ ವಿವಿಧ ಕ್ಷೇತ್ರಗಳ ಗಣ್ಯರು ಮುಂದಾಗುತ್ತಿದ್ದಾರೆ.

ಇದನ್ನು ಓದಿ: ವಯನಾಡು ಭೂಕುಸಿತ ದುರಂತ; ಸಂತ್ರಸ್ತರ ನೆರವಿಗೆ ಮುಂದಾದ ಸ್ಟಾರ್​​​ ದಂಪತಿ

ಇದೀಗ ಟಾಲಿವುಡ್​ನ ಸ್ಟೈಲಿಶ್​​ಸ್ಟಾರ್​​​​ ಅಲ್ಲು ಅರ್ಜುನ್​​​ ಸಂತ್ರಸ್ತರ ಸಹಾಯಕ್ಕೆ ಮುಂದಾಗಿದ್ದಾರೆ. ಕೇರಳ ಸಿಎಂ ಪರಿಹಾರ ನಿಧಿಗೆ 25 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ. ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಿಂದ ನಾನು ತುಂಬಾ ದುಃಖಿತನಾಗಿದ್ದೇನೆ. ಕೇರಳ ಯಾವಾಗಲೂ ನನ್ನ ಮೇಲೆ ಅಪಾರ ಪ್ರೀತಿಯನ್ನು ತೋರಿಸಿದೆ. ಪುನರ್ವಸತಿ ಕಾರ್ಯಕ್ಕಾಗಿ ಕೇರಳ ಸಿಎಂ ಪರಿಹಾರ ನಿಧಿಗೆ 25 ಲಕ್ಷ ರೂಪಾಯಿ ದೇಣಿಗೆ ನೀಡುವ ಮೂಲಕ ಈಗ ನನ್ನ ಪಾಲಿನ ಕೆಲಸವನ್ನು ಮಾಡಲು ಬಯಸುತ್ತೇನೆ. ನಿಮ್ಮ ಸುರಕ್ಷತೆ ಮತ್ತು ಶಕ್ತಿಗಾಗಿ ಪ್ರಾರ್ಥಿಸುತ್ತೇನೆ ಎಂದು ಸಾಮಾಜಿಕ ಜಾಲತಾಣದಲ್ಲಿ ಮಾಡಿರುವ ಪೋಸ್ಟ್​ನಲ್ಲಿ ಅಲ್ಲು ಅರ್ಜುನ್ ತಿಳಿಸಿದ್ದಾರೆ.

ಕಳೆದ ವಾರ ನಟರಾದ ಸೂರ್ಯ ಮತ್ತು ವಿಕ್ರಮ್, ಮಮ್ಮುಟ್ಟಿ , ದುಲ್ಕರ್ ಸಲ್ಮಾನ್, ಫಹದ್ ಫಾಸಿಲ್, ನಜ್ರಿಯಾ, ನಯನತಾರಾ ಮತ್ತು ವಿಘ್ನೇಶ್ ಶಿವನ್ ದಂಪತಿ ಕೇರಳ ಮುಖ್ಯಮಂತ್ರಿಗಳ ಸಂಕಷ್ಟ ಪರಿಹಾರ ನಿಧಿಗೆ ದೇಣಿಗೆ ನೀಡಿದ್ದಾರೆ. ನಟ ಮೋಹನ್‌ಲಾಲ್ ಅವರು ಶನಿವಾರ ಭೂಕುಸಿತ ಪೀಡಿತ ವಯನಾಡಿಗೆ ಸೇನಾ ಸಮವಸ್ತ್ರದಲ್ಲಿ ತೆರಳಿದ್ದರು. ಪುನರ್ವಸತಿ ಕಾರ್ಯಕ್ಕೆ 3 ಕೋಟಿ ರೂಪಾಯಿ ದೇಣಿಗೆ ನೀಡುವುದಾಗಿ ತಿಳಿಸಿದರು. ಭೂಕುಸಿತದ ಪ್ರಮಾಣವನ್ನು ನೇರವಾಗಿ ವೀಕ್ಷಿಸಿದರೆ ಮಾತ್ರ ಗ್ರಹಿಸಬಹುದು. ಸೇನೆ, ನೌಕಾಪಡೆ, ವಾಯುಸೇನೆ, ಎನ್‌ಡಿಆರ್‌ಎಫ್, ಅಗ್ನಿಶಾಮಕ ದಳ, ಇತರ ಸಂಸ್ಥೆಗಳು, ಸ್ಥಳೀಯರು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿ ಅದ್ಭುತ ಕೆಲಸ ಮಾಡಿದ್ದಾರೆ ಎಂದು ಹೇಳಿದರು. (ಏಜೆನ್ಸೀಸ್​​)

ಧಾರ್ಮಿಕ ಸಮಾರಂಭದಲ್ಲಿ ದೇವಾಲಯದ ಗೋಡೆ ಕುಸಿದು 9 ಮಕ್ಕಳು ಸಾವು

Share This Article

ನಿಮ್ಮ ಅಂಗೈನಲ್ಲಿ ಈ ಚಿಹ್ನೆ ಇದೆಯಾ ಚೆಕ್​ ಮಾಡಿ ನೋಡಿ… ಇದ್ರೆ ನೀವು ರಾಜಯೋಗ ಅನುಭವಿಸುತ್ತೀರಿ!

ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…

ನಿಮ್ಮ ಮನೆಯಲ್ಲಿ ಮರಿ ಹಲ್ಲಿ ಇದ್ರೆ ಈ ಒಂದು ತಪ್ಪು ಮಾತ್ರ ಮಾಡ್ಬೇಡಿ: ಮಾಡಿದ್ರೆ ಈ ಗಂಡಾಂತರ ಫಿಕ್ಸ್!

ಸಾಮಾನ್ಯವಾಗಿ ಹಿಂದು ಪುರಾಣದಲ್ಲಿ ಹಲ್ಲಿಗಳನ್ನು ಅದೃಷ್ಟದ ಸಂಕೇತ ಎಂದು ಕರೆಯಲಾಗಿದೆ. ಹಲ್ಲಿಗಳು ಲೊಚಗುಡುವುದು ಶುಭ ಸೂಚನೆ…

ಮಧ್ಯಾಹ್ನ, ರಾತ್ರಿ ಊಟದಲ್ಲಿ ಜಾಸ್ತಿ ಉಪ್ಪು ಸೇವಿಸಿದ್ರೆ ಕ್ಯಾನ್ಸರ್‌ ಬರೋದು ಪಕ್ಕಾ! ಇರಲಿ ಎಚ್ಚರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…