ಡಿಜಿ ಐಜಿಪಿಯಾಗಿ ಅಲೋಕ್ ಮೋಹನ್ ನೇಮಕ; ಅಧಿಕೃತ ಆದೇಶ ಹೊರಡಿಸಿದ ಕರ್ನಾಟಕ ಸರ್ಕಾರ

alokmohan
Published on

ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ಡಿಜಿ ಐಜಿಪಿಯಾಗಿ ಅಲೋಕ್ ಮೋಹನ್ ಅವರನ್ನು ನೇಮಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಇಷ್ಟು ದಿನ ಅಲೋಕ್ ಮೋಹನ್ ಅವರಿಗೆ ಡಿಜಿ & ಐಜಿಪಿ ಹುದ್ದೆ ಹೆಚ್ಚುವರಿಯಾಗಿ ನೀಡಲಾಗಿತ್ತು. ಆದರೆ ಈಗ ಆ ಹುದ್ದೆಯನ್ನು ಖಾಯಂಗೊಳಿಸಲಾಗಿದೆ. ಮತ್ತೊಂದು ಹುದ್ದೆಯಾದ ಫೈರ್ & ಎಮರ್ಜೆನ್ಸಿ ಡಿಜಿ ಸ್ಥಾನದಿಂದ ಬಿಡುಗಡೆಗೊಳಿಸಿ ಆದೇಶ ಹೊರಡಿಸಲಾಗಿದೆ.

ಬಿಹಾರ ಮೂಲದ ಡಾ. ಅಲೋಕ್ ಮೋಹನ್ ಹಿರಿಯ ಐಪಿಎಸ್ ಅಧಿಕಾರಿಯಾಗಿದ್ದಾರೆ. ಇವರು 1987ನೇ ಬ್ಯಾಚ್​​ನ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿಯಾಗಿದ್ದು, 36 ವರ್ಷಗಳಿಂದ ಸುದೀರ್ಘ ಸೇವೆ ಸಲ್ಲಿಸುತ್ತಿದ್ದಾರೆ. ಅಗ್ನಿಶಾಮಕ ದಳ, ತುರ್ತು ಸೇವೆಗಳ ಡಿಜಿಪಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಕಾರಾಗೃಹ ಡಿಜಿಪಿ, ಬೆಂಗಳೂರು ನಗರ ಅಪರಾಧ ವಿಭಾಗದ ಜಂಟಿ ಆಯುಕ್ತ, ಎಸಿಬಿ ಎಡಿಜಿಪಿ ಸೇರಿದಂತೆ ಹಲವು ಹುದ್ದೆಗಳನ್ನು ನಿರ್ವಹಿಸಿದ್ದಾರೆ. 2025ರ ಏಪ್ರಿಲ್​ನಲ್ಲಿ ನಿವೃತ್ತರಾಗಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net