ಸಿಬಿಐ ನಿರ್ದೇಶಕ ಸ್ಥಾನದಿಂದ ಅಲೋಕ್​ ವರ್ಮಾ ವಜಾ

ನಾಗೇಶ್ವರ್​ ರಾವ್​ ಸಿಬಿಐ ನೂತನ ನಿರ್ದೇಶಕ

ನವದೆಹಲಿ: ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ)ಯ ನಿರ್ದೇಶಕ ಸ್ಥಾನದಿಂದ ಅಲೋಕ್​ ವರ್ಮಾ ಅವರನ್ನು ವಜಾಗೊಳಿಸಲಾಗಿದೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ, ಸುಪ್ರೀಂ ಕೋರ್ಟ್​ ನ್ಯಾಯಮೂರ್ತಿ ಎ.ಕೆ. ಸಿಕ್ರಿ​ ಹಾಗೂ ಲೋಕಸಭೆಯಲ್ಲಿ ಕಾಂಗ್ರೆಸ್​ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ನೇತೃತ್ವದ ಡಿಎಸ್​ಪಿಇ ಆಯ್ಕೆ ಸಮಿತಿ ಅಲೋಕ್​ ವರ್ಮಾ ಅವರನ್ನು ವಜಾಗೊಳಿಸುವ ನಿರ್ಧಾರ ತೆಗೆದುಕೊಂಡಿದೆ.

ವರ್ಮಾ ವಿರುದ್ಧದ ಆರೋಪ ಮೇಲ್ನೋಟಕ್ಕೆ ಸಾಬೀತಾಗಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

ಸಿಬಿಐ ಹಿರಿಯ ಅಧಿಕಾರಿಗಳ ನಡುವಿನ ಕಿತ್ತಾಟದ ಹಿನ್ನೆಲೆಯಲ್ಲಿ ಅಲೋಕ್​ ವರ್ಮಾ ಅವರನ್ನು ರಜೆ ಮೇಲೆ ಕಳುಹಿಸಿ ಕೇಂದ್ರ ಸರ್ಕಾರ ಆದೇಶಿಸಿತ್ತು. ಕೇಂದ್ರದ ಆದೇಶವನ್ನು ಸುಪ್ರೀಂ ಕೋರ್ಟ್​ ಮಂಗಳವಾರ ರದ್ದುಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ಅಲೋಕ್​ ವರ್ಮಾ ಬುಧವಾರ ಕರ್ತವ್ಯಕ್ಕೆ ಮರಳಿದ್ದರು. (ಏಜೆನ್ಸೀಸ್​)