ಕುಡಿಯುವ ನೀರು ಪೂರೈಕೆಗೆ ಆಗ್ರಹಿಸಿ ಪ್ರತಿಭಟನೆ

ವಿಜಯವಾಣಿ ಸುದ್ದಿಜಾಲ ಆಲೂರು
ತಾಲೂಕಿನ ಹೊಳೆಬೆಳ್ಳೂರು ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದ್ದು, ಕೂಡಲೇ ಸಮಸ್ಯೆಯನ್ನು ಬಗೆಹರಿಸುವಂತೆ ಒತ್ತಾಯಿಸಿ ಗ್ರಾಮಸ್ಥರು ಜಿಪಂ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಗ್ರಾಮದಲ್ಲಿ ಸುಮಾರು 700 ಜನರು ವಾಸಮಾಡುತ್ತಾರೆ. ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಕೊಳವೆ ಬಾವಿ ತೆರೆದು ಪೈಪ್‌ಲೈನ್ ವ್ಯವಸ್ಥೆಯನ್ನೂ ಮಾಡಲಾಗಿತ್ತು. ಆದರೆ ಮೂರ‌್ನಾಲ್ಕು ವರ್ಷದಿಂದ ಗ್ರಾಮಕ್ಕೆ ಸರಿಯಾಗಿ ನೀರು ಪೂರೈಕೆಯಾಗುತ್ತಿಲ್ಲ. ಇದರಿಂದ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದೆ ಎಂದು ವಿವಿಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಹೊಳೆಬೆಳ್ಳೂರು ಗ್ರಾಮಸ್ಥರಾದ ಪ್ರಕಾಶ್, ನಳಿನಾಕ್ಷಿ, ಶೋಭಾ, ರೇಖಾ. ಶಶಿಕಲಾ, ಶಿವಣ್ಣ, ಪ್ರಕಾಶ್ ಇತರರಿದ್ದರು.