ಭ್ರೂಣ ಲಿಂಗ ಪತ್ತೆ ಕಾನೂನು ಬಾಹಿರ

blank

ಆಲೂರು: ಹೆಣ್ಣು ಗಂಡು ಎಂಬ ಬೇದ ಮಾಡದೆ ಪಾಲಕರು ಇಬ್ಬರನ್ನೂ ಸಮಾನವಾಗಿ ಕಾಣಬೇಕು. ಮಹಿಳೆಯರಲ್ಲಿ ಸಂಸಾರ ನಡೆಸುವುದು ಮಾತ್ರವಲ್ಲ ಜಗತ್ತು ಆಳುವ ಶಕ್ತಿಯೂ ಇದೆ ಎಂದು ತಾಲೂಕು ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಜಿ.ಕಿ.ದಾಕ್ಷಾಯಿಣಿ ತಿಳಿಸಿದರು. ಕಸಬಾ ಮರಸು ಗ್ರಾಮದಲ್ಲಿ ಬೆಂಗಳೂರು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಸಹಯೋಗದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರದಲ್ಲಿ ಕಾನೂನು ಅರಿವು, ವ್ಯಸನ ಮುಕ್ತ ಸಮಾಜ ಮತ್ತು ಪೋಕ್ಸೋ ಕಾಯಿದೆ ಕುರಿತು ಉಪನ್ಯಾಸ ನೀಡಿದರು.ಹೆಣ್ಣೆಂದು ಕಲಿತರೆ ಶಾಲೆಯೊಂದು ತೆರೆದಂತೆ ಎನ್ನುವ ಮಾತು ಸತ್ಯ. ಆಧುನಿಕ ಯುಗದಲ್ಲಿ ಹೆಣ್ಣು ಮಗು ಸಂಸಾರಕ್ಕೆ ಹೊರೆಯಲ್ಲ. ಸಂಸಾರ ನಡೆಸುವ ಯಜಮಾನಿ. ಉತ್ತಮ ಶಿಕ್ಷಣ ನೀಡಿದರೆ ಪುರುಷರ ಸಮನರಾಗಿ ದುಡಿಯಬಲ್ಲರು ಎಂದರು. ಭ್ರೂಣ ಲಿಂಗ ಪತ್ತೆ ಕಾನೂನು ಬಾಹಿರ ಚಟುವಟಿಕೆಯಾಗಿದ್ದು, ಸಾಬೀತಾದರೆ ವೈದ್ಯರು ಮತ್ತು ಕುಟುಂಬಸ್ಥರಿಗೆ ಕಾರಾಗೃಹ ಶಿಕ್ಷೆ ಜತೆಗೆ ದಂಡ ವಿಧಿಸಲಾಗುತ್ತದೆ. ಹೆಣ್ಣು ಮಕ್ಕಳನ್ನು ಉಳಿಸಿ ಗೌರವ ನೀಡಬೇಕು. ಬಾಲ್ಯವಿವಾಹ, ಬಾಲಕಾರ್ಮಿಕ ಪದ್ಧತಿಗೆ ಹೆಣ್ಣುಮಕ್ಕಳೇ ಹೆಚ್ಚಾಗಿ ಶೋಷಣೆಗೆ ಒಳಗಾಗುತ್ತಿದ್ದಾರೆ. ಈ ಬಗ್ಗೆ ಜನರಿಗೆ ಜಾಗೃತಿ ಮೂಡಿಸಬೇಕು ಎಂದರು.

TAGGED:
Share This Article

1 ರೂ. ಖರ್ಚು ಮಾಡದೆ ನಿಮ್ಮ ಕೂದಲು ದಪ್ಪವಾಗಿ, ಸೊಂಪಾಗಿ ಬೆಳೆಯಲು ಏನು ಮಾಡಬೇಕೆಂದು ನಿಮಗೆ ತಿಳಿದಿದೆಯೇ? Hair Tips

Hair Tips: ಇತ್ತೀಚಿನ ದಿನಗಳಲ್ಲಿ ಕೂದಲು ಉದುರುವುದು ಒಂದು ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಕೂದಲು ಉದುರುವುದನ್ನು…

ಬೇಸಿಗೆಯಲ್ಲಿ ರಾತ್ರಿ ಪ್ರಯಾಣಿಸುತ್ತಿದ್ದೀರಾ? ಈ ವಿಷಯ ನೆನಪಿರಲಿ… traveling at night

traveling at night : ರಾತ್ರಿಯಲ್ಲಿ  ಹೆಚ್ಚಿನ ರಸ್ತೆಗಳು ಖಾಲಿಯಾಗಿರುತ್ತವೆ, ಸಂಚಾರ ಕಡಿಮೆ ಇರುತ್ತದೆ ಮತ್ತು ಪ್ರಯಾಣವನ್ನು…

ಮಾರ್ಚ್​ 29ರಂದು ಷಷ್ಠ ಗ್ರಹ ಕೂಟ… ಅಪ್ಪಿತಪ್ಪಿಯೂ ಆ ದಿನ ಈ ತಪ್ಪುಗಳನ್ನು ಮಾಡಬೇಡಿ! Shasta Graha Koota

Shasta Graha Koota : ಮಾರ್ಚ್ 29ರಂದು ಸೂರ್ಯಗ್ರಹಣ ಸಂಭವಿಸಲಿದೆ. ಅದೇ ದಿನ ಷಷ್ಠ ಗ್ರಹ…