ಬೇಸಿಗೆ ಶಿಬಿರಗಳಿಂದ ವ್ಯಕ್ತಿತ್ವ ವಿಕಸನ ಸಾಧ್ಯ

ಆಲೂರು: ಬೇಸಿಗೆ ಶಿಬಿರಗಳಿಂದ ಮಕ್ಕಳಲ್ಲಿ ವ್ಯಕ್ತಿತ್ವ ವಿಕಸನದ ಜತೆಗೆ ಮನೋವಿಕಸನವಾಗುತ್ತದೆ ಎಂದು ಡಯಟ್ ನೋಡಲ್ ಅಧಿಕಾರಿ ಗೀತಾ ತಿಳಿಸಿದರು.

ಪಟ್ಟಣದ ಸರ್ಕಾರಿ ನೂತನ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಬೇಸಿಗೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಬೇಸಿಗೆ ಶಿಬಿರಗಳು ಮಕ್ಕಳಲ್ಲಿ ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳ ಬಗ್ಗೆಯೂ ತಿಳಿಸಿಕೊಡುತ್ತವೆ. ಕುಟುಂಬ, ನೀರು, ಆಹಾರ, ಆರೋಗ್ಯ, ನೈರ್ಮಲ್ಯ, ಪರಿಸರ ಮುಂತಾದ ವಿಷಯಗಳ ಕುರಿತು ಹೇಳಿಕೊಡಲಾಗುತ್ತದೆ. ಆದ್ದರಿಂದ ಪಾಲಕರು ತಮ್ಮ ಮಕ್ಕಳನ್ನು ಇಂತಹ ಬೇಸಿಗೆ ಶಿಬಿರಗಳಿಗೆ ಸೇರಿಸುವ ಮೂಲಕ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಹೊನ್ನೇಶ್‌ಕುಮಾರ್ ಮಾತನಾಡಿದರು. ಕಾರ್ಯಕ್ರಮದಲ್ಲಿ ಶಿಕ್ಷಣ ಸಂಯೋಜಕ ರುದ್ರೇಶ್, ಶಿಕ್ಷಕ ಹಾಗೂ ಸಾಹಿತಿ ಪರಮೇಶ್ ಮಡಬಲು, ಮುಖ್ಯ ಶಿಕ್ಷಕರಾದ ಸುಜಾತಾ, ರಿಮ್ಮಶೆಟ್ಟಿ, ಶಿಕ್ಷಕರಾದ ಎ.ಟಿ ಮಲ್ಲೇಶ್,ಪರಮೇಶ್, ಶಂಕರಶೆಟ್ಟಿ ಹಾಗೂ ಶಾಲಾ ಮಕ್ಕಳು ಪಾಲ್ಗೊಂಡಿದ್ದರು.