ವಿದ್ಯಾರ್ಥಿಗಳಿಂದ ಮತದಾನ ಜಾಗೃತಿ

ವಿಜಯವಾಣಿ ಸುದ್ದಿಜಾಲ ಆಲೂರು
ತಾಲೂಕಿನ ಕೆ.ಹೊಸಕೋಟೆ ಹೋಬಳಿ ಮಗ್ಗೆ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆ ಹಾಗೂ ಮಗ್ಗೆ ಗ್ರಾಮ ಪಂಚಾಯಿತಿ ವತಿಯಿಂದ ಗ್ರಾಮದಲ್ಲಿ ಮತದಾನ ಜಾಗೃತಿ ಜಾಥಾ ನಡೆಸಲಾಯಿತು.
ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಗ್ರಾಮ ಪಂಚಾಯಿತಿಯ ಅಧಿಕಾರಿಗಳು ಜಾಥಾದಲ್ಲಿ ಪಾಲ್ಗೊಂಡು, 18 ವರ್ಷ ತುಂಬಿದ ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡುವಂತೆ ಭಿತ್ತಿಪತ್ರ ಹಿಡಿದು ಘೋಷಣೆ ಕೂಗಿದರು.
ಈ ಸಂದರ್ಭ ಗ್ರಾಪಂ ಪಿಡಿಒ ಶಂಭುಲಿಂಗ, ಬಿಲ್‌ಕಲೆಕ್ಟರ್ ನಾಗಣ್ಣಗೌಡ, ಜಗದೀಶ್, ಲಕ್ಷ್ಮಣ್, ಶಿಕ್ಷಕರು ಹಾಜರಿದ್ದರು.