

ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ(ಪದವಿಪೂರ್ವ) ದಕ್ಷಿಣ ಕನ್ನಡ ಹಾಗೂ ಸುರತ್ಕಲ್‌ನ ಗೋವಿಂದದಾಸ ಪಿಯು ಕಾಲೇಜಿನ ಆಶ್ರಯದಲ್ಲಿ ಸುರತ್ಕಲ್‌ನಲ್ಲಿ ಜರುಗಿದ ಜಿಲ್ಲಾಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಆಳ್ವಾಸ್ ಕಾಲೇಜು ಅವಳಿ ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ. ಹುಡುಗರ ವಿಭಾಗದಲ್ಲಿ ಆಳ್ವಾಸ್ ಪ.ಪೂ. ಕಾಲೇಜು 8 ಚಿನ್ನ ಹಾಗೂ 3 ಬೆಳ್ಳಿಯೊಂದಿಗೆ ಒಟ್ಟು 11 ಪದಕ ಪಡೆದು ಪ್ರಥಮ ಸ್ಥಾನ ಪಡೆದುಕೊಂಡಿದೆ. ಹುಡುಗಿಯರ ವಿಭಾಗದಲ್ಲೂ ಆಳ್ವಾಸ್ 6 ಚಿನ್ನ ಹಾಗೂ 3 ಕಂಚಿನೊಂದಿಗೆ ಒಟ್ಟು 9 ಪದಕ ಪಡೆದು ಪ್ರಥಮ ಸ್ಥಾನ ಪಡೆದುಕೊಂಡು ಅವಳಿ ಪ್ರಶಸ್ತಿಗೆ ಭಾಜನವಾಗಿದೆ. ವಿಜೇತ ಕ್ರೀಡಾಪಟುಗಳನ್ನು ಸಂಸ್ಥೆ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಅಭಿನಂದಿಸಿದ್ದಾರೆ.