More

  ಸುಭದ್ರ ಆಡಳಿತಕ್ಕಾಗಿ ಅಭ್ಯರ್ಥಿ ಆಯ್ಕೆ ಮಾಡಿ

  ಅಳವಂಡಿ: ಆಮಿಷಗಳಿಗೆ ಬಲಿಯಾಗದೆ ದೇಶದ ಸುಭದ್ರ ಆಡಳಿತಕ್ಕಾಗಿ ಸೂಕ್ತ ಅಭ್ಯರ್ಥಿ ಆಯ್ಕೆ ಮಾಡಲು ಮತದಾನ ಶ್ರೇಷ್ಠವಾಗಿದೆ ಎಂದು ಮರುಳಾರಾಧ್ಯ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.

  ಗ್ರಾಮದ ಮಹಿಳೆಯರ ಹೊಲಿಗೆ ತರಬೇತಿ ಕೇಂದ್ರದಲ್ಲಿ ಕೊಪ್ಪಳದ ಮಹಿಳಾ ಧ್ವನಿ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಸೋಮವಾರ ಮಾತನಾಡಿದರು.

  ಮಹಿಳಾ ಧ್ವನಿ ಸಂಸ್ಥೆಯ ಸಂಸ್ಥಾಪಕಿ ಪ್ರಿಯದರ್ಶಿನಿ ಮುಂಡರಗಿಮಠ ಮಾತನಾಡಿ, ಪ್ರಜಾಪ್ರಭುತ್ವ ಆಡಳಿತ ವ್ಯವಸ್ಥೆಯಲ್ಲಿ ಮತದಾನಕ್ಕೆ ಪ್ರಾಮುಖ್ಯತೆ ಇದೆ. ಹಾಗಾಗಿ ಯಾರೂ ಕೂಡ ಮತದಾನದಿಂದ ತಪ್ಪಿಸಿಕೊಳ್ಳಬಾರದು. ಮತದಾನ ಮಾಡುವುದು ನಮ್ಮೆಲ್ಲರ ಕರ್ತವ್ಯ. ಎಲ್ಲರೂ ಮತದಾನ ಮಾಡಿ ಎಂದರು.
  ಮತದಾನ ಜಾಗೃತಿ ಘೋಷಣೆಗಳನ್ನು ಕೂಗಿ ಮತದಾನ ಅರಿವು ಮೂಡಿಸಲಾಯಿತು. ಪ್ರಮುಖರಾದ ಮಲ್ಲಮ್ಮ ಬಾವಿಹಳ್ಳಿ, ಪ್ರತಿಭಾ ಇತರರಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts