

ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾಲಯ ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ಆಶ್ರಯದಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಅಂತರ್ ಕಾಲೇಜು ಪುರುಷರ ಮತ್ತು ಮಹಿಳೆಯರ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಆಳ್ವಾಸ್ ಕಾಲೇಜಿನ ತಂಡ ಚಾಂಪಿಯನ್ಸ್ ಪ್ರಶಸ್ತಿ ಪಡೆಯಿತು.
ಪುರುಷರ ವಿಭಾಗದಲ್ಲಿ ಆಳ್ವಾಸ್ ತಂಡ ಸೆಮಿಫೈನಲ್‌ನಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ತಂಡವನ್ನು ಸೋಲಿಸಿ ಫೈನಲ್‌ಗೆ ಅರ್ಹತೆ ಪಡೆಯಿತು. ಫೈನಲ್‌ನಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ತೆಂಕನಿಡಿಯೂರು ತಂಡವನ್ನು ಸೋಲಿಸಿ ಚಾಂಪಿಯನ್ ಪಟ್ಟ ಅಲಂಕರಿಸಿತು.
ಮಹಿಳಾ ತಂಡ ಸೆಮಿಫೈನಲ್‌ನಲ್ಲಿ ಡಾ.ಜಿ.ಶಂಕರ್ ಸರ್ಕಾರಿ ಮಹಿಳಾ ಕಾಲೇಜು, ಅಜ್ಜರಕಾಡು ತಂಡವನ್ನು ಪರಾಭವಗೊಳಿಸಿ, ಫೈನಲ್‌ನಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತಂಡವನ್ನು ಸೋಲಿಸಿ ಚಾಂಪಿಯನ್ ಪಟ್ಟ ಅಲಂಕರಿಸಿತು. ವಿಜೇತ ತಂಡವನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಅಭಿನಂದಿಸಿದ್ದಾರೆ.