

ವಿಜಯವಾಣಿ ಸುದ್ದಿಜಾಲ ಮೂಡುಬಿದಿರೆ
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ ಮಂಗಳೂರು ಮತ್ತು ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಬಾಲಕಿಯರ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಶಾಲೆಯ ವಿದ್ಯಾರ್ಥಿಗಳು ಚಾಂಪಿಯನ್ ಪ್ರಶಸ್ತಿ ಗಳಿಸಿದ್ದಾರೆ.
ಒಟ್ಟು 47 ಚಿನ್ನ, 17 ಬೆಳ್ಳಿ ಮತ್ತು 7 ಕಂಚು ಸಹಿತ 71 ಪದಕದೊಂದಿಗೆ ಕ್ರೀಡಾಕೂಟದ ನೂತನ 4 ಕೂಟ ದಾಖಲೆಯನ್ನು ನಿರ್ಮಿಸುವ ಮೂಲಕ ಪ್ರಾಥಮಿಕ ಶಾಲೆಯ ಬಾಲಕಿಯರ ತಂಡ ಪ್ರಶಸ್ತಿ, ಪ್ರೌಢಶಾಲಾ 14ವರ್ಷ ವಯೋಮಿತಿಯ ಬಾಲಕ ಬಾಲಕಿಯರ ತಂಡ ಪ್ರಶಸ್ತಿ ಹಾಗೂ ಪ್ರೌಢಶಾಲಾ 17ವರ್ಷ ವಯೋಮಿತಿಯ ಬಾಲಕ ಬಾಲಕಿಯರ ತಂಡ ಪ್ರಶಸ್ತಿಯೊಂದಿಗೆ ಕ್ರೀಡಾಕೂಟದ ಸಮಗ್ರ ಚಾಂಪಿಯನ್ ತಂಡ ಪ್ರಶಸ್ತಿಯನ್ನು ಪಡೆದುಕೊಂಡಿತು. ವಿಜೇತ ಕ್ರೀಡಾಪಟುಗಳನ್ನು ಸಂಸ್ಥೆಯ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಅಭಿನಂದಿಸಿದ್ದಾರೆ.
ವೈಯಕ್ತಿಕ ಪ್ರಶಸ್ತಿ ವಿಜೇತರು
ಪ್ರಾಥಮಿಕ ಶಾಲಾ ವಿಭಾಗ-ಸುಭಾಷ್ ಎ.ಆರ್., ರಕ್ಷಿತಾ ಮತ್ತಪ್ಪ *ಪ್ರೌಢಶಾಲಾ 14ವರ್ಷ ವಯೋಮಿತಿಯ ವಿಭಾಗ: ಕೌಶಿಕ್ ಪಿ.ಶೆಟ್ಟಿಗಾರ್, ಆದಿತ್ಯ *ಪ್ರೌಢಶಾಲಾ 17ವರ್ಷ ವಯೋಮಿತಿಯ ವಿಭಾಗ : ಸಮರ್ಥ್ ಸಂಜೀವ ಕುಮಾರ್, ನಾಗಿಣಿ