ಸ್ಕೌಟ್ಸ್ – ಗೈಡ್ಸ್‌ನಿಂದ ಸತ್ಪ್ರಜೆಯ ನಿರ್ಮಾಣ

Alvas

ವಿಜಯವಾಣಿ ಸುದ್ದಿಜಾಲ ಮೂಡುಬಿದಿರೆ

ಭಾರತೀಯ ಸ್ಕೌಟ್ಸ್ ಹಾಗೂ ಗೈಡ್ಸ್‌ನ ಸೇವೆಯ ಧ್ಯೇಯದಿಂದ ಸತ್ಪ್ರಜೆಯ ನಿರ್ಮಾಣ ಸಾಧ್ಯ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದಕ್ಷಿಣ ಕನ್ನಡದ ಜಿಲ್ಲೆಯ ರಾಜ್ಯ ಸಹಾಯಕ ಸಂಘಟನಾ ಆಯುಕ್ತ ಭರತ್ ರಾಜ್ ಹೇಳಿದರು. ಆಳ್ವಾಸ್ ಪಿಯು ಕಾಲೇಜಿನ ಶಿವರಾಮ ಕಾರಂತ ವೇದಿಕೆಯಲ್ಲಿ ಇತ್ತೀಚೆಗೆ ನಡೆದ ಆಳ್ವಾಸ್ ರೋವರ್ಸ್ ಮತ್ತು ರೇಂಜರ್ಸ್ 2024-25ನೇ ಸಾಲಿನ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಸ್ಕೌಟ್ಸ್ ಮತ್ತು ಗೈಡ್ಸ್ ದಕ್ಷಿಣ ಕನ್ನಡ ಜಿಲ್ಲಾ ಆಯುಕ್ತ ಡಾ.ಮೋಹನ ಆಳ್ವ ಅವರ ಶ್ರಮದಿಂದ ಜಿಲ್ಲಾ ಘಟಕವು ಮಂಚೂಣಿಯಲ್ಲಿದೆ. ಆಳ್ವಾಸ್ ಸಾಂಸ್ಕೃತಿಕ ಜಾಂಬೂರಿಯು ಇಡೀ ವಿಶ್ವವೇ ಮೂಡುಬಿದಿರೆಯತ್ತ ಮುಖ ಮಾಡುವಂತೆ ಮಾಡಿತ್ತು ಎಂದರು. ಆಳ್ವಾಸ್ ಪಿಯು ಕಾಲೇಜಿನ ಉಪ ಪ್ರಾಂಶುಪಾಲ ಝಾನ್ಸಿ ಪಿ.ಎನ್. ಹಾಗೂ ವಾಣಿಜ್ಯ ವಿಭಾಗದ ಡೀನ್ ಪ್ರಶಾಂತ್ ಎಂ.ಡಿ. ರೋವರ್ ಸ್ಕೌಟ್ ಲೀಡರ್ ಸುನೀಲ್, ರೇಂಜರ್ ಲೀಡರ್ ವೀಣಾ, ದಳನಾಯಕ ಕಾರ್ತಿಕ್, ದಳ ನಾಯಕಿ ನಕ್ಷತ್ರ ಇದ್ದರು. ವಿದ್ಯಾರ್ಥಿನಿ ನಕ್ಷತ್ರಾ ಸ್ವಾಗತಿಸಿದರು. ವಿದ್ಯಾರ್ಥಿನಿ ವರ್ಷಾ ವಂದಿಸಿದರು. ವಿದ್ಯಾರ್ಥಿನಿ ಸನ್ನಿಧಿ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Share This Article

ನೆಲದ ಮೇಲೆ ಕುಳಿತು ಊಟ ಮಾಡುವುದರಿಂದ ಇಷ್ಟೆಲ್ಲ ಪ್ರಯೋಜನಗಳಿವೆಯಾ? ಇಲ್ಲಿದೆ ಉಪಯುಕ್ತ ಮಾಹಿತಿ….

ಇಂದು ಬಹುತೇಕರು ಡೈನಿಂಗ್ ಟೇಬಲ್ ಮೇಲೆ ಕುಳಿತು ಊಟ ಮಾಡುತ್ತಿದ್ದಾರೆ. ಆದರೆ, ಮೊದ ಮೊದಲು ಹೆಚ್ಚಿನ…

ನೀವು ಎಷ್ಟು ಆರೋಗ್ಯವಂತರೆಂದು ತಿಳಿಯಲು ನಿಮ್ಮ ನಾಲಿಗೆ ಬಣ್ಣ ಚೆಕ್​ ಮಾಡಿ! ಈ ಬಣ್ಣದಲ್ಲಿದ್ರೆ ತುಂಬಾ ಡೇಂಜರ್​!

ಪ್ರತಿಯೊಬ್ಬರೂ ಆರೋಗ್ಯವಾಗಿರಲು ಬಯಸುತ್ತಾರೆ. ಏಕೆಂದರೆ, ಆರೋಗ್ಯವೇ ಭಾಗ್ಯ. ಎಲ್ಲ ಇದ್ದು ಆರೋಗ್ಯವೇ ಇಲ್ಲದಿದ್ದರೆ ಏನು ಪ್ರಯೋಜನಾ?…

ನಿಮ್ಮ ಜೀವಕ್ಕೆ ಅಪಾಯವನ್ನುಂಟುಮಾಡುವ ಈ 5 ಜನರ ಬಳಿ ನೀವು ಎಂದಿಗೂ ಹೋಗಬೇಡಿ

ಭಾರತದ ಉತ್ತಮ ವಿದ್ವಾಂಸರಲ್ಲಿ ಚಾಣಕ್ಯರು ಒಬ್ಬರು. ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ಚಾಣಕ್ಯ ತಿಳಿಯದ ವಿಷಯವು…