More

    ಆಳ್ವಾಸ್ ವಿದ್ಯಾರ್ಥಿಯ ಸಂಶೋಧನಾ ಯೋಜನೆ ಆಯ್ಕೆ

    ಮೂಡುಬಿದಿರೆ: ಆಳ್ವಾಸ್ ಸೆಂಟ್ರಲ್ ಸ್ಕೂಲ್‌ನ 9ನೇ ತರಗತಿ ವಿದ್ಯಾರ್ಥಿ ಅಮೋಘ್ ಎ.ಹೆಬ್ಬಾರ್ ಮಾರ್ಚ್‌ನಲ್ಲಿ ಉತ್ತರ ಆಫ್ರಿಕಾದ ಟ್ಯುನೀಶಿಯಾದಲ್ಲಿ ನಡೆಯುವ ಅಂತಾರಾಷ್ಟ್ರೀಯ ವಾರ್ಷಿಕ ಮೆಗಾ ಸೈನ್ಸ್ ಫೆಸ್ಟಿವಲ್ ಐಫೆಸ್ಟ್(IFEST)ನಲ್ಲಿ ‘ಕೀಟ ಮತ್ತು ಕಳೆಗಳನ್ನು ನಿಯಂತ್ರಿಸಲು ನೈಸರ್ಗಿಕ ವಿಧಾನ’ ಶೀರ್ಷಿಕೆಯ ಸಂಶೋಧನಾ ಯೋಜನೆಯ ಪ್ರಸ್ತುತಿಗೆ ಅರ್ಹತೆ ಪಡೆದಿದ್ದಾರೆ. ಗುಜರಾತ್‌ನ ರಾಜಕೋಟ್‌ನಲ್ಲಿ ನಡೆದ ರಾಷ್ಟೀಯ ಮಟ್ಟದ ಭಾರತೀಯ ವಿಜ್ಞಾನ ಮತ್ತು ಇಂಜಿನಿಯರಿಂಗ್ ಮೇಳದಲ್ಲಿ ಬೆಳ್ಳಿ ಪದಕ ಪಡೆದು ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪ್ರಾದೇಶಿಕ ಮಟ್ಟದಲ್ಲಿ ಚಿನ್ನದ ಪದಕ ಗಳಿಸಿದ್ದ ಅಮೋಘ್, ಇತ್ತೀಚೆಗೆ ಕಲಬುರಗಿಯಲ್ಲಿ ನಡೆದ ರಾಜ್ಯಮಟ್ಟದ ರಾಷ್ಟೀಯ ಮಕ್ಕಳ ವಿಜ್ಞಾನ ಕಾಂಗ್ರೆಸ್ ಮೇಳದಲ್ಲಿ ತಮ್ಮ ಸಂಶೋಧನಾ ಯೋಜನೆಯನ್ನು ಪ್ರದರ್ಶಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts